Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!

Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!

Published : Dec 12, 2025, 12:52 PM IST

ಶಾಲೆಯ ಶೌಚಾಲಯಗಳೆಂದರೆ ಅಲ್ಲಿ ಮೂಗು ಮುಚ್ಚಿಕೊಂಡೇ ಹೋಗಬೇಕು, ಕೊಳಕು ಶೌಚಾಲಯವನ್ನು ವಿದ್ಯಾರ್ಥಿಗಳಿಂದ ಸ್ವಚ್ಛ ಮಾಡಿಸುವಂತಿಲ್ಲ! ಹಾಗಂತ ಸಿಬ್ಬಂದಿ ನೇಮಿಸಿ ನಿರ್ವಹಣೆ ಮಾಡಲು ಸಾಧ್ಯವಿಲ್ಲ.

ಉಡುಪಿ (ಡಿ.12): ಶಾಲೆಯ ಶೌಚಾಲಯಗಳೆಂದರೆ ಅಲ್ಲಿ ಮೂಗು ಮುಚ್ಚಿಕೊಂಡೇ ಹೋಗಬೇಕು, ಕೊಳಕು ಶೌಚಾಲಯವನ್ನು ವಿದ್ಯಾರ್ಥಿಗಳಿಂದ ಸ್ವಚ್ಛ ಮಾಡಿಸುವಂತಿಲ್ಲ! ಹಾಗಂತ ಸಿಬ್ಬಂದಿ ನೇಮಿಸಿ ನಿರ್ವಹಣೆ ಮಾಡಲು ಸಾಧ್ಯವಿಲ್ಲ. ಈ ಸಮಸ್ಯೆಗೆ ಉಡುಪಿಯಲ್ಲಿ ಪರಿಹಾರ ಸಿಕ್ಕಿದೆ. ಸರಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ ಹೊರಟಿದೆ. ಖಾಸಗಿ  ಸಹಭಾಗಿತ್ವದಿಂದ ಶಿಕ್ಷಣ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡುತ್ತಾ ಬಂದಿರುವ ಉಡುಪಿಯಲ್ಲಿ, ಇದೀಗ ಹೊಸ ಅಭಿಯಾನ ಶುರುವಾಗಿದೆ. ಹೋಟೆಲ್ ಉದ್ಯಮದಲ್ಲಿ ಸ್ವಚ್ಛತೆ ಹಾಗೂ ಗುಣಮಟ್ಟಕ್ಕೆ ಹೆಸರಾದ ಗೋಪಾಡಿ ಶ್ರೀನಿವಾಸ ರಾವ್, ತಮ್ಮ ನೇತೃತ್ವದ ಗೋಪಾಡಿ ಶ್ರೀನಿವಾಸ -ರುಕ್ಮಿಣಿ ಫೌಂಡೇಶನ್ ಮೂಲಕ, ದೇಶದಲ್ಲೇ ಮೊದಲು ಎನ್ನಬಹುದಾದ ಸಾಮಾಜಿಕ ಕಳಕಳಿಯ ಕೆಲಸಕ್ಕೆ ಚಾಲನೆ ನೀಡಿದ್ದಾರೆ. ತನ್ನ ಊರಿನ ಸರಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ವಾಹನವೊಂದನ್ನು ಕೊಡುಗೆಯಾಗಿ ನೀಡಿದ್ದಾರೆ.

ವಾಹನವನ್ನು ಕೊಡುಗೆಯಾಗಿ ಕೊಟ್ಟು ಅವರು ಸುಮ್ಮನಾಗಿಲ್ಲ, ಇಬ್ಬರು ಸಿಬ್ಬಂದಿಗಳನ್ನು ನೇಮಕ ಮಾಡಿ, ಸ್ವಚ್ಛತೆಗೆ ಬೇಕಾದ ಎಲ್ಲಾ ಪರಿಕರ ಸಹಿತ ಸಜ್ಜುಗೊಳಿಸಿದ್ದಾರೆ. ಈ ಪರಿಸರದ 24 ಸರಕಾರಿ ಶಾಲೆಗಳಲ್ಲಿ, ಈ ರಥ ಸಂಚರಿಸಲಿದೆ, ಪ್ರತಿಯೊಂದು ಶಾಲೆಗೆ ವಾರದಲ್ಲಿ ಎರಡು ಬಾರಿ ಭೇಟಿಕೊಟ್ಟು ಟಾಯ್ಲೆಟ್ ಸ್ವಚ್ಛಗೊಳಿಸುವ ಸತ್ಕಾರ್ಯ ಕೈಗೊಳ್ಳಲಾಗಿದೆ. ಪ್ರಧಾನಿ ಮೋದಿ ಅವರ ಸ್ವಚ್ಛ ಭಾರತ ಅಭಿಯಾನದಿಂದ ಸ್ಪೂರ್ತಿ ಪಡೆದ ಶ್ರೀನಿವಾಸ ರಾವ್, ಸರಕಾರಿ ಶಾಲೆಗಳ ಸ್ವಚ್ಛತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಈ ಸಹಾಯ ಹಸ್ತ ಚಾಚಿದ್ದಾರೆ. ವಿಶೇಷವಾಗಿ ಹೆಣ್ಣು ಮಕ್ಕಳು ಶೌಚಾಲಯದಲ್ಲಿ ಸ್ವಚ್ಛತೆ ಇಲ್ಲದ ಕಾರಣಕ್ಕೆ ನೀರು ಕುಡಿಯದೆ ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಮನನೊಂದ ಶ್ರೀನಿವಾಸ ರಾವ್ ಈ ಮಹಾ ಕಾರ್ಯಕ್ಕೆ ಮುಂದಾಗಿದ್ದಾರೆ.

ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹಾಗೂ ಭೀಮನಕಟ್ಟೆ ಮಠದ ಸ್ವಾಮೀಜಿಗಳ ಮೂಲಕ ಈ ಯೋಜನೆಗೆ ಚಾಲನೆ ದೊರೆತಿದೆ. ಪರಿಸರದ 24 ಶಾಲೆಗಳು ಈ ಯೋಜನೆಯ ಪ್ರಯೋಜನ ಪಡೆಯಲಿವೆ. ತಮ್ಮ ಟ್ರಸ್ಟ್ ಅಸ್ತಿತ್ವದಲ್ಲಿ ಇರುವವರೆಗೂ ಈ ಯೋಜನೆ ಮುಂದುವರೆಯಲಿದೆ ಎಂದು ಶ್ರೀನಿವಾಸರಾವ್ ಭರವಸೆ ನೀಡಿದ್ದಾರೆ. ಈಗಾಗಲೇ ತಮ್ಮ ಈಶಾನ್ಯ ದ ರೆಸ್ಡೋರೆಂಟ್ ಮೂಲಕ ಆಹಾರ ಉದ್ಯಮದಲ್ಲಿ ಆಂಧ್ರಪ್ರದೇಶ, ಬೆಂಗಳೂರು ಮತ್ತು ಕುಂದಾಪುರದಲ್ಲಿ ಹೆಸರುವಾಸಿಯಾಗಿರುವ ಈ ಸಮೂಹ, ಸ್ವಚ್ಛತಾ ರಥದ ಮೂಲಕ ದೇಶಕ್ಕೆ ಮಾದರಿ ಯೋಜನೆ ಯೊಂದನ್ನು ಕೊಡುಗೆಯಾಗಿ ಕೊಟ್ಟಿದೆ. ಈ ಯೋಜನೆಯಿಂದ ಸ್ಪೂರ್ತಿ ಪಡೆದು, ಊರದಾನಿಗಳ ನೆರವಿನೊಂದಿಗೆ ಎಲ್ಲಾ ಶಾಲೆಗಳಲ್ಲೂ ಶೌಚಾಲಯ ಸ್ವಚ್ಛತೆಗೆ ಆದ್ಯತೆ ದೊರಕಲಿ ಎನ್ನುವುದು ಜಿಎಸ್ಆರ್ ಫೌಂಡೇಶನ್ ಆಶಯವಾಗಿದೆ.

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
Read more