ಉಡುಪಿ (Udupi) ನಗರದ ಬಾಲಕಿಯರ ಸರ್ಕಾರಿ ಪ.ಪೂ. ಕಾಲೇಜಿನ ಹಿಜಾಬ್ ಹೋರಾಟಗಾರ್ತಿಯರ ಖಾಸಗಿ ಮಾಹಿತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟ ಮಾಡಿರುವುದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅವರ ಪೋಷಕರು ಉಡುಪಿ ಎಸ್ಪಿಗೆ ದೂರು ನೀಡಿದ್ದಾರೆ.
ಉಡುಪಿ (ಫೆ. 12): ನಗರದ ಬಾಲಕಿಯರ ಸರ್ಕಾರಿ ಪ.ಪೂ. ಕಾಲೇಜಿನ ಹಿಜಾಬ್ ಹೋರಾಟಗಾರ್ತಿಯರ ಖಾಸಗಿ ಮಾಹಿತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟ ಮಾಡಿರುವುದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅವರ ಪೋಷಕರು ಉಡುಪಿ ಎಸ್ಪಿಗೆ ದೂರು ನೀಡಿದ್ದಾರೆ.
ತಮ್ಮ ಮಕ್ಕಳ ಕಾಲೇಜು ದಾಖಲಾತಿಯ ವಿವರಗಳನ್ನು, ಅವರ ಮತ್ತು ಪೋಷಕರು ಮೊಬೈಲ್ ನಂಬರ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗಪಡಿಸಲಾಗಿದೆ. ಇದನ್ನು ಬಳಸಿಕೊಂಡು ತಮ್ಮ ಮಕ್ಕಳನ್ನು ಬೆದರಿಸುವ ಸಾಧ್ಯತೆ ಇದೆ ಎಂಬ ಆತಂಕವನ್ನು ಅವರು ವ್ಯಕ್ತಪಡಿಸಿದ್ದಾರೆ.