ರಾಜೀವ್ ಚಂದ್ರಶೇಖರ್ ಅವರಿಂದ ಗ್ರೀವಿಯನ್ಸ್ ಪೋರ್ಟಲ್ ಉದ್ಘಾಟನೆ
ನ್ಯಾಯವಿತರಣೆಯಲ್ಲಿ ಆಧುನಿಕ ತಂತ್ರಜ್ಞಾನ ಕಾರ್ಯಕ್ರಮ
ಕೇಂದ್ರ ಐಟಿ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ರಾಜೀವ್ ಚಂದ್ರಶೇಖರ್
ಬೆಂಗಳೂರು (ಏ.11): ನ್ಯಾಯ ವಿತರಣೆಯಲ್ಲಿ ಆಧುನಿಕ ತಂತ್ರಜ್ಞಾನ ಕಾರ್ಯಕ್ರಮ ಸೋಮವಾರ ಹೈಕೋರ್ಟ್ ನಲ್ಲಿ (High Court) ನಡೆಯಿತು. ಕೇಂದ್ರ ಮಾಹಿತಿ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ರಾಜೀವ್ ಚಂದ್ರಶೇಖರ್ (Rajeev Chandrasekhar) ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಗ್ರೀವಿಯನ್ಸ್ ಪೋರ್ಟಲ್ (Grievance Portal)ಅನ್ನು ಉದ್ಘಾಟನೆ ಮಾಡಿದರು.
ಇದೇ ಮೊದಲ ಬಾರಿಗೆ ನಾನು ಹೈಕೋರ್ಟ್ ನಲ್ಲಿ ಮಾತನಾಡುತ್ತಿದ್ದೇನೆ. ಕೋವಿಡ್ ಸಮಯದಲ್ಲಿ ತಂತ್ರಜ್ಞಾನದ ಬಳಕೆ ಹೆಚ್ಚಾಗಿದೆ. ಕಳೆದ ಆರು ವರ್ಷಗಳಲ್ಲಿ ತಂತ್ರಜ್ಞಾನದಲ್ಲಿ ಅಗಾಧ ಬೆಳವಣಿಗೆಯಾಗಿದೆ. ತಂತ್ರಜ್ಞಾನದಿಂದ ಭ್ರಷ್ಟಾಚಾರ ಕಡಿಮೆಯಾಗಿದೆ. ಹಲವು ಯೋಜನೆಗಳಲ್ಲಿ ಯಾವುದೇ ಲೀಕೇಜ್ ಅಥವಾ ಭ್ರಷ್ಟಾಚಾರವಿಲ್ಲದೆ ಸಾಮಾನ್ಯ ಜನರಿಗೆ ಸೌಲಭ್ಯ ದೊರೆಯುತ್ತಿದೆ ಎಂದು ಹೇಳಿದರು.
ಕೇಂದ್ರ ಸರ್ಕಾರದ ನೀತಿಯಿಂದ ಸ್ಟಾರ್ಟಪ್ ಹೆಚ್ಚಳ: ರಾಜೀವ್ ಚಂದ್ರಶೇಖರ್
ಕಾರ್ಯಕ್ರಮದಲ್ಲಿ ಕಾನೂನು ಸಚಿವ ಮಾಧುಸ್ವಾಮಿ, ನ್ಯಾಯಮೂರ್ತಿ ಅಲೋಕ್ ಅರಾದೆ, ಅಟಾರ್ನಿ ಜನರಲ್ ಪ್ರಭುಲಿಂಗ ನಾವದಗಿ, ವಕೀಲ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾ ರೆಡ್ಡಿ ಭಾಗಿಯಾಗಿದ್ದರು.