Nov 21, 2021, 12:21 PM IST
ಬೆಂಗಳೂರು (ನ. 21): ರಾಜ್ಯಾದ್ಯಂತ ಅಕಾಲಿಕ ಮಳೆಯಿಂದ (Untimely Rain) ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಕೆಲವೆಡೆ ಮಳೆ ಹಾನಿಯಾಗಿದೆ. ಮಳೆ ಹಾನಿ ಪರಿಹಾರ ಕುರಿತು ಇಂದು ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಇಂದು ಸಂಜೆ ಮಳೆ ಹಾನಿ ವರದಿ ಕುರಿತು ಪರಿಶೀಲನೆ ನಡೆಸಲಾಗುತ್ತದೆ. ಶೀಘ್ರದಲ್ಲೇ ಹಣಕಾಸಿನ ನೆರವು ಕೊಡುತ್ತೇವೆ' ಎಂದಿದ್ಧಾರೆ.
ಪ್ರವಾಹ ಪೀಡಿತ ಸ್ಥಳಗಳಲ್ಲಿ ತಕ್ಷಣವೇ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಹೋಗಿ, ಪರಿಶೀಲನೆ ನಡೆಸಿ ಪರಿಹಾರದ ಬಗ್ಗೆ ವರದಿ ನೀಡುವಂತೆ ನಿರ್ದೇಶನ ನೀಡಲಾಗಿದೆ. ಮಳೆಯಿಂದಾಗಿ ಹಾನಿಗೊಳಗಾಗಿರುವ ಪ್ರದೇಶದಲ್ಲಿ ತಕ್ಷಣವೇ ಪರಿಹಾರ ಕಾರ್ಯ ಕೈಗೊಳ್ಳಲು 130 ಕೋಟಿ ರು. ಬಿಡುಗಡೆ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.