Mar 17, 2022, 5:08 PM IST
ಉತ್ತರ ಕನ್ನಡ (ಮಾ. 17): ರಾಜ್ಯದ ಅತೀ ದೊಡ್ಡ ಜಾತ್ರೆ ಎಂಬ ಹೆಗ್ಗಳಿಕೆ ಪಡೆದಿರುವ ಶಿರಸಿಯ ಮಾರಿಕಾಂಬಾ ಜಾತ್ರಾ ಮಹೋತ್ಸವ ಮಂಗಳವಾರದಿಂದ ಆರಂಭಗೊಂಡಿದೆ. ನಾಡಿನ ಮೂಲೆ ಮೂಲೆಗಳಿಂದ ಆಗಮಿಸಿದ್ದ ಭಕ್ತರು ರಥಕ್ಕೆ ಬಾಳೆಹಣ್ಣನ್ನು ಎಸೆದು ಇಷ್ಟಾರ್ಥ ನೆರವೇರಿಸುವಂತೆ ಪ್ರಾರ್ಥಿಸಿದರು. ಮಾರ್ಚ್ 21 ರವರೆಗೆ ಜಾತ್ರೆ ನಡೆಯಲಿದೆ.