ನಾಳೆಯಿಂದಲ್ಲ, ರಾಜ್ಯದಲ್ಲಿ ಮೇ ಮೂರನೇ ವಾರದಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಿಕೆ ಆರಂಭವಾಗಲಿದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.
ಬೆಂಗಳೂರು (ಏ. 30): ನಾಳೆಯಿಂದಲ್ಲ, ರಾಜ್ಯದಲ್ಲಿ ಮೇ ಮೂರನೇ ವಾರದಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಿಕೆ ಆರಂಭವಾಗಲಿದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.
'ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಿಕೆ ಕಾರ್ಯಕ್ರಮ ಶುರುವಾಗಬೇಕಿತ್ತು. ಆದರೆ ಕಂಪನಿಯಿಂದ ರಾಜ್ಯ ಸರ್ಕಾರಕ್ಕೆ ಯಾವಾಗಿನಿಂದ ಪೂರೈಕೆ ಮಾಡುತ್ತಾರೆಂಬ ಬಗ್ಗೆ ಅಧಿಕೃತ ಮಾಹಿತಿ ಬಂದಿಲ್ಲ. ಹಾಗಾಗಿ ಸರ್ಕಾರ ಅಧಿಕೃತವಾಗಿ ಮಾಹಿತಿ ನೀಡುವವರೆಗೆ ಯಾರೂ ಲಸಿಕೆಗಾಗಿ ಆಸ್ಪತ್ರೆ ಬಳಿ ಹೋಗಬೇಡಿ' ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಮನವಿ ಮಾಡಿದ್ದಾರೆ.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona