ರಾಜ್ಯದ ಸರ್ಕಾರದ ಎಲ್ಲ ಇಲಾಖೆಗಳ ಕಚೇರಿಗಳಲ್ಲಿ ಪೂರ್ವಾನುಮತಿ ಇಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋ ಅಥವಾ ವಿಡಿಯೋ ಮಾಡುವುದನ್ನು ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿತ್ತು.
ಬೆಂಗಳೂರು (ಜು. 16): ರಾಜ್ಯದ ಸರ್ಕಾರದ ಎಲ್ಲ ಇಲಾಖೆಗಳ ಕಚೇರಿಗಳಲ್ಲಿ ಪೂರ್ವಾನುಮತಿ ಇಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋ ಅಥವಾ ವಿಡಿಯೋ ಮಾಡುವುದನ್ನು ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿತ್ತು.
ತನ್ಮೂಲಕ ಲಂಚ ಪಡೆಯುವುದು, ಲಂಚಕ್ಕೆ ಬೇಡಿಕೆ ಇಡುವುದು, ಸೇವೆ ನೀಡದೆ ಸಾರ್ವಜನಿಕರೊಂದಿಗೆ ಉಡಾಫೆ ವರ್ತನೆ ತೋರುವುದು ಸೇರಿದಂತೆ ಸರ್ಕಾರಿ ನೌಕರರು ಮಾಡುತ್ತಿದ್ದರು ಎನ್ನಲಾದ ತಪ್ಪುಗಳನ್ನು ವಿಡಿಯೋ ಅಥವಾ ಫೋಟೋ ಮೂಲಕ ಸೆರೆಹಿಡಿಯುವುದಕ್ಕೆ ತಡೆ ಬಿದ್ದಂತಾಗಿತ್ತು. ಸರ್ಕಾರದ ಈ ಆದೇಶಕ್ಕೆ ಸಾರ್ವಜನಿಕ ವಲಯದಿಂದ ಆಕ್ರೋಶ ವ್ಯಕ್ತವಾದ ಹಿನ್ನಲೆಯಲ್ಲಿ ಈ ಆದೇಶವನ್ನು ವಾಪಸ್ ಪಡೆದಿದೆ.