ಮಳೆ ಕೊರತೆ ಮಧ್ಯೆ ತಮಿಳುನಾಡಿಗೆ ನೀರು ರಿಲೀಸ್: ಸಿಟ್ಟಿಗೆದ್ದ ಕಾವೇರಿ ಕೊಳ್ಳದ ರೈತರಿಂದ ನೀರಿಗಿಳಿದು ಪ್ರೊಟೆಸ್ಟ್..!

ಮಳೆ ಕೊರತೆ ಮಧ್ಯೆ ತಮಿಳುನಾಡಿಗೆ ನೀರು ರಿಲೀಸ್: ಸಿಟ್ಟಿಗೆದ್ದ ಕಾವೇರಿ ಕೊಳ್ಳದ ರೈತರಿಂದ ನೀರಿಗಿಳಿದು ಪ್ರೊಟೆಸ್ಟ್..!

Published : Aug 17, 2023, 10:50 AM IST

ರಾಜ್ಯದ ಕಾವೇರಿ ಕಣಿವೆಯಲ್ಲಿ ನೀರು ಕೊರತೆ ಹೆಚ್ಚುತಿದ್ರೆ, ಇತ್ತ ಹೆಚ್ಚುವರಿ ನೀರಿಗಾಗಿ ತಮಿಳುನಾಡು ಮತ್ತೆ ಕ್ಯಾತೆ ತೆಗೆದಿದೆ. ಹೆಚ್ಚುವರಿ ನೀರಿಗಾಗಿ ತಮಿಳುನಾಡು ಸರ್ಕಾರ ಸುಪ್ರಿಂಕೋರ್ಟ್ ಮೆಟ್ಟಿಲೇರಿದ್ರೆ, ಸುಪ್ರೀಂ ಆದೇಶಕ್ಕೂ ಮುನ್ನವೇ ರಾಜ್ಯ ಸರ್ಕಾರ ತಮಿಳನಾಡಿಗೆ ಹರಿಸುವ ನೀರಿನ ಪ್ರಮಾಣ ಹೆಚ್ಚಿಸಿದೆ. ಹೀಗಾಗಿ ಸರ್ಕಾರದ ನಡೆ ಖಂಡಿಸಿ ರೈತರು ಪ್ರೊಟೆಸ್ಟ್ ನಡೆಸಿದ್ರು.

ತಮಿಳುನಾಡಿಗೆ ನೀರು ಹರಿಸುತ್ತಿರುವ ಹಿನ್ನೆಲೆ ನೀರಿಗಿಳಿದು ರೈತರು ಪ್ರತಿಭಟನೆ(Farmer protest) ನಡೆಸಿದರು. ಅಲ್ಲದೇ ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು. ಮೊದಲೇ ನೀರಿನ ಬರದಿಂದ ಕಂಗೆಟ್ಟ ಕರ್ನಾಟಕಕ್ಕೆ(Karnataka) ಮುಂಗಾರು ತಡವಾಗಿ ಎಂಟ್ರಿಯಾಗಿದೆ. ಆರಂಭದಲ್ಲೇನೋ ಒಂದಿಷ್ಟು ಮಳೆಯಾಯ್ತು. ಬಳಿಕ ಕೈಕೊಟ್ಟ ವರುಣ ರೈತರನ್ನು ಅತಂಕಕ್ಕೆ ದೂಡಿದ್ದಾನೆ. ಇನ್ನು ಮಳೆಯಿಲ್ಲದೇ ನದಿಗಳು ಕೂಡ ಸಂಪೂರ್ಣ ಭರ್ತಿಯಾಗಿಲ್ಲ. ಕಾವೇರಿ(Cauvery) ಕಣಿವೆ ಭಾಗದ ರೈತರು ಒಂದು ಬೆಳೆಗಾದ್ರೂ ನೀರು ಸಿಕ್ಕಿದ್ರೆ ಸಾಕಪ್ಪ ಎನ್ನುತ್ತಿರುವಾಗಲೇ ತಮಿಳುನಾಡು(Tamilnadu) ಸರ್ಕಾರ ಕಾವೇರಿ ನೀರಿಗಾಗಿ ಸುಪ್ರೀಂಕೋರ್ಟ್ ಮೊರೆ ಹೋಗಿದೆ. ಇನ್ನೊಂದು ದುರಂತ ಏನಂದ್ರೆ ಕೋರ್ಟ್ ಆದೇಶವೇ ಬಂದಿಲ್ಲ. ಆಗಲೇ ತಮಿಳುನಾಡಿಗೆ ಬಿಡುತ್ತಿರುವ ನೀರಿನ ಪ್ರಮಾಣದಲ್ಲಿ ಹೆಚ್ಚಳ ಮಾಡಲಾಗಿದೆ. ಇದು ರೈತರನ್ನು ರೊಚ್ಚಿಗೆಬ್ಬಿಸಿದೆ. ಇದನ್ನು ವಿರೋಧಿಸಿ ಕಾವೇರಿ ನದಿಗೆ ಇಳಿದು ರೈತರು ಪ್ರತಿಭಟನೆ ನಡೆಸಿದ್ರು. ತಮಿಳುನಾಡಿನ ಮೆಟ್ಟೂರು ಡ್ಯಾಂನಲ್ಲಿ ನೀರಿನ ಮಟ್ಟ ಸಂಪೂರ್ಣವಾಗಿ ಕುಸಿದಿದೆ. ನಮ್ಮ ರೈತರನ್ನ ರಕ್ಷಣೆ ಮಾಡಿಕೊಳ್ಳಬೇಕು. ಪ್ರತಿನಿತ್ಯ 24 ಸಾವಿರ ಕ್ಯೂಸೆಕ್ ನೀರು ಹರಿಸಬೇಕು ಎಂದು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಇದರ ಬೆನ್ನಲ್ಲೇ ಕೆಆರ್‌ಎಸ್‌ ಡ್ಯಾಂನಿಂದ ಮೆಟ್ಟೂರು ಡ್ಯಾಂಗೆ ಹರಿಸುತ್ತಿದ್ದ ನೀರಿನ ಪ್ರಮಾಣ ಹೆಚ್ಚಿಸಲಾಗಿದೆ.

ಇದನ್ನೂ ವೀಕ್ಷಿಸಿ:  BPL ಕಾರ್ಡ್‌ದಾರರಿಗೆ ಮತ್ತೊಂದು ಶಾಕ್: ಸರ್ಕಾರದಿಂದ ಸರ್ವೆ ಆರಂಭ !

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more