ದೇಶದಲ್ಲಷ್ಟೇ ಅಲ್ಲ, ರಾಜ್ಯದಲ್ಲೂ ಕಾಂಗ್ರೆಸ್‌ ಮುಕ್ತ ಮಾಡುತ್ತೇವೆ: ಬಿಎಸ್‌ ಯಡಿಯೂರಪ್ಪ

Mar 11, 2022, 5:11 PM IST

ಬೆಂಗಳೂರು (ಮಾ. 11): ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ 4 ರಾಜ್ಯಗಳಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಬಿಜೆಪಿ ನಾಯಕರು ಖುಷಿಯಲ್ಲಿದ್ದಾರೆ.  ವಿಧಾನಸಭೆಯಲ್ಲಿ ಮಾಜಿ ಸಿಎಂಗಳ ಟಾಕ್ ವಾರ್ ಮುಂದುವರೆದಿದೆ. 'ಪಂಚರಾಜ್ಯ ಚುನಾವಣೆ ಗೆಲುವು ನಮ್ಮ ವಿಶ್ವಾಸ ಹೆಚ್ಚಿಸಿದೆ. ರಾಜ್ಯದಲ್ಲಿ ಸಾಮೂಹಿಕ ನಾಯಕತ್ವದಡಿಯಲ್ಲಿ ರಾಜ್ಯ ಪ್ರವಾಸ ಮಾಡುತ್ತೇವೆ. 135 ಸ್ಥಾನ ಗೆದ್ದು ಮತ್ತೆ ಅಧಿಕಾರಕ್ಕೆ ತರುತ್ತೇವೆ' ಎಂದು ಮಾಜಿ ಸಿಎಂ ಬಿಎಸ್‌ವೈ ಹೇಳಿದ್ದಾರೆ. 

Assembly Election 2023: ಯಡಿಯೂರಪ್ಪನವರೇ ನೀವು ಮತ್ತೆ ಸಿಎಂ ಆಗಲ್ಲ: ಸಿದ್ದರಾಮಯ್ಯ

ಕಾಂಗ್ರೆಸ್ ಮುಕ್ತ ಎನ್ನುವುದಕ್ಕೆ ಪಂಚರಾಜ್ಯ ಚುನಾವಣೆ ಉದಾಹರಣೆ. ದೇಶದಲ್ಲಷ್ಟೇ ಅಲ್ಲ, ರಾಜ್ಯದಲ್ಲೂ ಕಾಂಗ್ರೆಸ್ ಮುಕ್ತ ಮಾಡುತ್ತೇವೆ. ಮೋದಿ ಜೊತೆ ಜನ ಇದ್ದಾರೆಂಬುದಕ್ಕೆ ಈ ಫಲಿತಾಂಶ ಸಾಕ್ಷಿ' ಎಂದು ಬಿಎಸ್‌ವೈ ವಿಪಕ್ಷಗಳ ಕಾಲೆಳೆದಿದ್ದಾರೆ.