Feb 22, 2022, 2:42 PM IST
ಬೆಂಗಳೂರು (ಫೆ. 22): ಹಿಂದೂಪರ ಕಾರ್ಯಕರ್ತ ಹರ್ಷ ಹತ್ಯೆ ವಿಚಾರವಾಗಿ ಈಶ್ವರಪ್ಪ- ಡಿಕೆಶಿ ನಡುವೆ ವಾಕ್ಸಮರ ಮುಂದುವರೆದಿದೆ. 'ಹರ್ಷನ ಮೆರವಣಿಗೆಯಲ್ಲಿ ಈಶ್ವರಪ್ಪ ಭಾಗಿಯಾಗಿದ್ದಾರೆ. 144 ಸೆಕ್ಷನ್ ನಿಯಮವನ್ನು ಉಲ್ಲಂಘಿಸಿದ್ದಾರೆ. ಕಾನೂನನ್ನು ಕೈಗೆತ್ತಿಕೊಂಡಿದ್ದಾರೆ. ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾನಿಯುಂಟು ಮಾಡಿದ್ದಾರೆ. ಆದರೂ ಅವರ ಮೇಲೆ ಕ್ರಮ ಯಾಕೆ ತೆಗೆದುಕೊಂಡಿಲ್ಲ' ಎಂದು ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.
‘ನಮ್ಮ ಸಜ್ಜನ ಕಾರ್ಯಕರ್ತ ಹರ್ಷನನ್ನು ಮುಸ್ಲಿಂ ಗೂಂಡಾಗಳು ಕೊಲೆ ಮಾಡಿದ್ದಾರೆ. ಕೇಸರಿ ಧ್ವಜ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪ್ರಚೋದನಕಾರಿ ಹೇಳಿಕೆಗಳಿಂದ ಮುಸ್ಲಿಂ ಗೂಂಡಾಗಳಿಗೆ ಕುಮ್ಮಕ್ಕು ಸಿಕ್ಕಿದೆ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಆಪಾದಿಸಿದ್ದರು.