Jan 20, 2022, 6:34 PM IST
ಬೆಂಗಳೂರು, (ಜ.20): ಕೋವಿಡ್ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಶನಿವಾರ ಮತ್ತು ಭಾನವಾರ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದೆ. ಆದರೆ ವೀಕೆಂಡ್ ಕರ್ಫ್ಯೂಗೆ ಉದ್ಯಮ ವಲಯದಿಂದ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.
Coronavirus, ವೀಕೆಂಡ್ ಕರ್ಫ್ಯೂಗೆ ವಿರೋಧ, ಕೊರೋನಾ ತಡೆಗೆ ಸಲಹೆ ಕೊಟ್ಟ ಮಾಜಿ ಸಿಎಂ ಸಿದ್ದು
ಕೋವಿಡ್‌ನಿಂದಾಗಿ ಈಗಾಗಲೇ ನಷ್ಟದಲ್ಲಿರುವ ವ್ಯಾಪಾರ ಕ್ಷೇತ್ರ ಇದೀಗ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದ ಪರಿಣಾಮ ಮತ್ತಷ್ಟು ಸಂಕಷ್ಟಕ್ಕೆ ಸಿಲುಕುತ್ತಿದೆ ಎಂಬುವುದು ಇವರ ವಾದ. ಈ ನಿಟ್ಟಿನಲ್ಲಿ ವೀಕೆಂಡ್ ಕರ್ಫ್ಯೂ ತೆರವುಗೊಳಿಸಬೇಕು ಎಂಬ ಒತ್ತಡವೂ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಚಿವರೊಬ್ಬರು ವೀಕೆಂಡ್ ಕರ್ಫ್ಯೂ ಸಡಿಲಿಕೆ ಮಾಡುವ ಸುಳಿವು ಕೊಟ್ಟಿದ್ದಾರೆ.