Apr 22, 2021, 6:08 PM IST
ಬೆಂಗಳೂರು (ಏ. 22): ಕೊರೋನಾ ಸೋಂಕು ದೃಢಪಟ್ಟಿದ್ದರಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ರಾಜ್ಯದ ಜಿಂದಾಲ್ ಆಕ್ಸಿಜನ್ ಮಹಾರಾಷ್ಟ್ರಕ್ಕೆ: ಎಂ.ಬಿ.ಪಾಟೀಲ್ ಆಕ್ರೋಶ
ಅವರೀಗ ಕೊರೋನಾದಿಂದ ಸಂಪೂರ್ಣ ಗುಣಮುಖರಾಗಿದ್ದು, ಇಂದು (ಗುರುವಾರ) ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಆಸ್ಪತ್ರೆಯ ವೈದ್ಯರು ಯಡಿಯೂರಪ್ಪನವರಿಗೆ ನಮಸ್ಕರಿಸಿ, ಹೂಗುಚ್ಛ ನೀಡಿ ಬೀಳ್ಕೊಟ್ಟಿದ್ದಾರೆ. ಮಣಿಪಾಲ್ ಆಸ್ಪತ್ರೆಯಿಂದ ಯಡಿಯೂರಪ್ಪ ಕಾವೇರಿ ನಿವಾಸಕ್ಕೆ ತೆರಳಿದ್ದಾರೆ.