ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದಲ್ಲಿ ಪತ್ತೆಯಾದ ಬಾಂಗ್ ಪ್ರಕರಣಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು, ಖಡಕ್ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು, [ಜ.21]: ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದಲ್ಲಿ ಸೋಮವಾರ ಬೆಳಿಗ್ಗೆ ಬ್ಯಾಗ್‌ನಲ್ಲಿ ಸುಧಾರಿತ ಬಾಂಬ್‌ಗಳು ಪತ್ತೆಯಾಗಿದ್ದು, ಭಾರೀ ಆತಂಕಕ್ಕೆ ಕಾರಣವಾಗಿತ್ತು. ಬಳಿಕ ಅದನ್ನು ಬಾಂಬ್ ನಿಷ್ಕ್ರಿಯ ದಳ ನಿಷ್ಕ್ರಿಯಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
'ಮಂಗಳೂರು ಬಾಂಬ್ ಘಟನೆ ಒಂದು ಅಣಕು ಪ್ರದರ್ಶನ!'
ಆದ್ರೆ, ಬಾಂಬ್ ಇಟ್ಟು ಹೋದ ವ್ಯಕ್ತಿ ಯಾರು ಎನ್ನುವ ಕಾರ್ಯಚರಣೆ ನಡೆದಿದೆ. ಇನ್ನು ಈ ಮಾಹಿತಿ ಸಿಗುತ್ತಿದ್ದಂತೆಯೇ ದಾವೋಸ್ ಪ್ರವಾಸದಲ್ಲಿರುವ ಸಿಎಂ ಬಿಎಸ್ ಯಡಿಯೂರಪ್ಪ ಖಡಕ್ ಎಚ್ಚರಿಕೆ ನೀಡಿದ್ದಾರೆ.