ಧರ್ಮಸ್ಥಳ ಬಗ್ಗೆ ಅಪಪ್ರಚಾರ: AI ವೀರ ಸಮೀರನ ಮೇಲೆ ದಾಖಲಾದ FIRನಲ್ಲಿ ಯಾವೆಲ್ಲಾ ಸೆಕ್ಷನ್‌ಗಳಿಗೆ ಗೊತ್ತಾ?

ಧರ್ಮಸ್ಥಳ ಬಗ್ಗೆ ಅಪಪ್ರಚಾರ: AI ವೀರ ಸಮೀರನ ಮೇಲೆ ದಾಖಲಾದ FIRನಲ್ಲಿ ಯಾವೆಲ್ಲಾ ಸೆಕ್ಷನ್‌ಗಳಿಗೆ ಗೊತ್ತಾ?

Published : Aug 22, 2025, 02:32 PM IST

ಎಐ ಬಳಸಿ ಧರ್ಮಸ್ಥಳದ ಬಗ್ಗೆ ಸುಳ್ಳು ವಿಡಿಯೋ ಪ್ರಕಟಿಸಿದ ಆರೋಪದ ಮೇಲೆ ಯೂಟ್ಯೂಬರ್ ಸಮೀರ್ ವಿರುದ್ಧ ಧರ್ಮಸ್ಥಳ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಆದರೆ, ಯಾವಾವ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲು ಆಗಿದೆ ಎಂಬ ವಿವರ ಇಲ್ಲಿದೆ.

ಬೆಂಗಳೂರು (ಆ.22): ಎಐ (ಕೃತಕ ಬುದ್ಧಿಮತ್ತೆ) ಟೂಲ್ ಬಳಸಿಕೊಂಡು ಸುಳ್ಳು ಮತ್ತು ಪ್ರಚೋದನಕಾರಿ ವಿಡಿಯೋಗಳನ್ನು ಪ್ರಕಟಿಸಿದ ಆರೋಪದ ಮೇಲೆ 'ದೂತ (Dhootha)' ಎಂಬ ಯೂಟ್ಯೂಬ್ ಚಾನೆಲ್‌ನ ಮಾಲೀಕ ಸಮೀರ್ ಎಂ.ಡಿ. ವಿರುದ್ಧ ಧರ್ಮಸ್ಥಳ ಪೊಲೀಸರು ಸ್ವಯಂಪ್ರೇರಿತವಾಗಿ ಎಫ್‌ಐಆರ್ ದಾಖಲಿಸಿದ್ದಾರೆ. ಈ ಎಫ್‌ಐಆರ್‌ನಲ್ಲಿ ಏನೆಲ್ಲಾ ಸೆಕ್ಷನ್‌ಗಳನ್ನು ಹಾಕಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ..

ಎಫ್‌ಐಆರ್‌ನಲ್ಲಿರುವ ಆರೋಪಗಳು:
ಹಿಂದೂ ಧರ್ಮದ ಪವಿತ್ರ ಧಾರ್ಮಿಕ ಕ್ಷೇತ್ರವಾದ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವುದಕ್ಕೆ ಯೂಟೂಬರ್ ಸಮೀರ್ ತಮ್ಮ ಚಾನೆಲ್‌ನಲ್ಲಿ ಎಐ ಟೂಲ್ ಬಳಸಿಕೊಂಡು ಒಂದು ಕಾಲ್ಪನಿಕ ಘಟನೆಯನ್ನು ಸೃಷ್ಟಿಸಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಈ ವಿಡಿಯೋದಲ್ಲಿ, ಧರ್ಮಸ್ಥಳದಲ್ಲಿ ಯುವತಿ ಮತ್ತು ಮಹಿಳೆಯರು ಸೇರಿದಂತೆ 1 ಸಾವಿರ ಜನರನ್ನು ರೇಪ್ ಮಾಡಿ, ಕೊಲೆ ಮಾಡಿ ಮುಚ್ಚಿಹಾಕಿದ್ದಾರೆ' ಎಂದು ಹೇಳಿದ್ದಾನೆ. 'ಇದನ್ನು ಕೇಳಿದರೆ ನಿಮ್ಮ ರಕ್ತ ಕುದಿಯುತ್ತಿಲ್ಲವೇ?' ಎಂದು ಯೂಟೂಬ್ ವೀಕ್ಷಕರನ್ನು ಉದ್ದೇಶಪೂರ್ವಕವಾಗಿ ಪ್ರಚೋದಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಅಲ್ಲದೆ, ಸಮೀರ್ 'ಕರ್ನಾಟಕದ ಮೂಲೆ ಮೂಲೆಯಲ್ಲಿರುವವರು ಬೀದಿಗಿಳಿದು ಪ್ರತಿಭಟಿಸಿ' ಮತ್ತು 'ಈ ಅನ್ಯಾಯದ ವಿರುದ್ಧ ಪ್ರತಿಯೊಬ್ಬರೂ ಧ್ವನಿ ಎತ್ತಬೇಕು' ಎಂದು ಕರೆ ನೀಡುವ ಮೂಲಕ ಸಾರ್ವಜನಿಕ ನೆಮ್ಮದಿಗೆ ಭಂಗ ತರಲು ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂತಹ ಹೇಳಿಕೆಗಳು ಉದ್ದೇಶಪೂರ್ವಕವಾಗಿ ಸಾರ್ವಜನಿಕರಲ್ಲಿ ದಂಗೆಯನ್ನು ಪ್ರಚೋದಿಸುವ ಉದ್ದೇಶ ಹೊಂದಿವೆ ಎಂದು ಎಫ್‌ಐಆರ್‌ನಲ್ಲಿ ದಾಖಲಿಸಲಾಗಿದೆ.

ಸಮೀರ್ ವಿರುದ್ಧ ದಾಖಲಾದ ಸೆಕ್ಷನ್‌ಗಳು:

  • ಪೊಲೀಸರು ಸಮೀರ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ:
  • BNS ಸೆಕ್ಷನ್ 192: ದಂಗೆ ಉದ್ದೇಶದಿಂದ ಪ್ರಚೋದನಕಾರಿ ಹೇಳಿಕೆ ನೀಡಿರುವುದು.
  • BNS ಸೆಕ್ಷನ್ 240: ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ಗೊಂದಲ ಸೃಷ್ಟಿಸಿರುವುದು.
  • BNS ಸೆಕ್ಷನ್ 353(1)(b): ಎಲೆಕ್ಟ್ರಾನಿಕ್ ಮಾಧ್ಯಮದ ಮೂಲಕ ತಪ್ಪು ಸಂದೇಶಗಳನ್ನು ಹರಡಿ ಸಾರ್ವಜನಿಕರಲ್ಲಿ ಉದ್ರೇಕವನ್ನುಂಟು ಮಾಡಿರುವುದು.

ಸೈಬರ್ ಅಪರಾಧಗಳು ಮತ್ತು ಸಾಮಾಜಿಕ ಮಾಧ್ಯಮಗಳ ದುರುಪಯೋಗಕ್ಕೆ ಸಂಬಂಧಿಸಿದಂತೆ ಇದು ಒಂದು ಗಂಭೀರ ಪ್ರಕರಣವಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳ ಮೂಲಕ ಸುಳ್ಳು ಸುದ್ದಿ ಹರಡುವುದು ಮತ್ತು ಸಾರ್ವಜನಿಕರನ್ನು ಪ್ರಚೋದಿಸುವುದು ಕಾನೂನು ಪ್ರಕಾರ ಗಂಭೀರ ಅಪರಾಧ ಎಂದು ಈ ಪ್ರಕರಣ ಮತ್ತೊಮ್ಮೆ ಎತ್ತಿ ತೋರಿಸಿದೆ.

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more