Robot Teacher: ಬೋಧನೆಯಲ್ಲಿ ಚಾಕಚಕ್ಯ ನೆರವು ನೀಡಿದ 'ರೋಬೋ'!

Mar 23, 2022, 9:50 PM IST

ಬೆಂಗಳೂರು (ಮಾ.23): ಪಾಠ- ಪ್ರವಚನಗಳಲ್ಲಿ ಬೋಧಕರಿಗೂ ವಿದ್ಯಾರ್ಥಿಗಳಿಗೂ ಸಹಕರಿಸಿ, ಕಲಿಕೆಯನ್ನು ಸುಲಭವಾಗಿಸುವಂತಹ 'ಈಗಲ್' ರೋಬೋ ಪರೀಕ್ಷಾರ್ಥ ಪ್ರಾತ್ಯಕ್ಷಿಕೆಯು ಬುಧವಾರದಂದು ಮಲ್ಲೇಶ್ವರಂ 13ನೇ ಅಡ್ಡರಸ್ತೆಯಲ್ಲಿರುವ ಬಾಲಕಿಯರ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು. ಕ್ಷೇತ್ರದ ಶಾಸಕರೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು. ಶಾಲೆಯ ಬೋಧಕರು ಮತ್ತು ವಿದ್ಯಾರ್ಥಿನಿಯರು ಇದರಲ್ಲಿ ಪಾಲ್ಗೊಂಡು, ರೋಬೋದ ಕಾರ್ಯಕ್ಷಮತೆಗೆ ಸಾಕ್ಷಿಯಾದರು. 

Vijayapura Crime ಅಪ್ರಾಪ್ತ ಬಾಲಕನ ಬೆತ್ತಲಾಗಿಸಿ ಹಲ್ಲೆ, ಬಸವನಬಾಗೇವಾಡಿಯಲ್ಲಿ ಅಮಾನವೀಯ ಕೃತ್ಯ!

ಈ ಸಂದರ್ಭದಲ್ಲಿ ಅವರು ರೋಬೊಗೆ ಹಲವು ಪ್ರಶ್ನೆಗಳನ್ನು ಕೇಳಿದರು. ಹಾಗೆಯೇ, ಅದು ನೀಡಿದ ಉತ್ತರ ಮತ್ತು ನೆರವನ್ನು ಕಂಡು ಬೆರಗಾದರು. ನಂತರ ಮಾತನಾಡಿದ ಅಶ್ವತ್ಥನಾರಾಯಣ ಅವರು, ಇದು ಪ್ರಾಯೋಗಿಕ ಕಾರ್ಯಕ್ರಮವಾಗಿದ್ದು, ರೋಬೋದ ಕಾರ್ಯ ಸಾಮರ್ಥ್ಯವನ್ನು ವೀಕ್ಷಿಸಲಾಗಿದೆ. ಸರಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಜಾಗತಿಕ ಗುಣಮಟ್ಟದ ಬೋಧನೆಯ ಸಲುವಾಗಿ, ಇಂತಹ ರೋಬೋಗಳು ಇದ್ದರೆ ಒಳ್ಳೆಯದು ಎಂದು ಅಭಿಪ್ರಾಯಪಟ್ಟರು. ರೋಬೊ‌ ಶಿಕ್ಷಕರಿಗೆ ಪರ್ಯಾಯ ಅಲ್ಲ. ಆದರೆ ಶಿಕ್ಷಕರಿಗೆ ಬೋಧನೆಯಲ್ಲಿ ಸಹಕರಿಸುವ ಕೆಲಸ ಮಾಡಲಿದೆ. ಇದರಿಂದ ವಿದ್ಯಾರ್ಥಿಗಳ ಕಲಿಕೆಯ ಮಟ್ಟ ಕೂಡ ಹೆಚ್ಚಾಗಲಿದೆ ಎಂದು ಹೇಳಿದರು.