Mar 20, 2020, 6:40 PM IST
ತುಮಕೂರು(ಮಾ.20): ಕೊರೋನಾ ವೈರಸ್ ಕುರಿತು ಸರ್ಕಾರ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದೆ. ಇದರ ನಡುವೆ ವೈರಸ್ ಕುರಿತು ಹಲವರು ಸುಳ್ಳು ಸುದ್ದಿಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಡುವ ಪ್ರಯತ್ನ ನಡೆಯುತ್ತಿದೆ. ಈ ಮೂಲಕ ಜನರಲ್ಲಿ ಆತಂಕದ ವಾತಾವರಣ ನಿರ್ಮಿಸಲಾಗುತ್ತಿತ್ತು. ಇದೀಗ ಈ ರೀತಿ ಸುಳ್ಳು ಸುದ್ದಿ ಹರಡುತ್ತಿದ್ದ ಅಭಿಜಿತ್ ನಾರಾಯಣ್ ನನ್ನು ಪೊಲೀಸರು ಬಂಧಿಸಿದ್ದಾರೆ.