Aug 27, 2022, 12:37 PM IST
ನಟ ಅನಿರುದ್ಧ್ ಕಿರುತೆರೆಯಿಂದ ಕಿಕ್ ಔಟ್ ಆಗಿದ್ದಾರೆ. ಜೊತೆ ಜೊತೆಯಲಿ ಧಾರಾವಾಹಿ ತಂಡದ ಜೊತೆ ಕಿರಿಕ್ ಮಾಡಿಕೊಂಡು ಧಾರಾವಾಹಿಯಿಂದ ಹೊರಗಿಡಲಾಗಿದೆ. ಧಾರಾವಾಹಿಯ ನಿರ್ಮಾಪಕ ಅರೂರು ಜಗದೀಶ್ ಜೊತೆ ಕಿರಿಕ್ ಮಾಡಿಕೊಂಡು ಕಿಕ್ ಔಟ್ ಆಗಿದ್ದಾರೆ. ಅನಿರುದ್ಧ್ ಧಾರಾವಾಹಿಯಿಂದ ಹೊರಬಂದ ಬಳಿಕ ಆರ್ಯವರ್ಧನ್ ಪಾತ್ರಕ್ಕೆ ಯಾರು ಎಂಟ್ರಿ ಕೊಡ್ತಾರ ಎನ್ನುವ ಕುತೂಹಲ ಹೆಚ್ಚಾಗಿದೆ. ಈಗಾಗಲೇ ಅನೇಕ ಕಲಾವಿದರ ಹೆಸರು ಕೇಳಿಬರುತ್ತಿದೆ. ಹರೀಶ್ ರಾಜ್ ಅವರು ಎಂಟ್ರಿ ಕೊಡಲಿದ್ದಾರೆ ಎನ್ನಲಾಗುತ್ತಿದೆ. ಈ ನಡುವೆ ಇದೀಗ ಆರ್ಯವರ್ಧನ್ ಪಾತ್ರಕ್ಕೆ ಸದ್ಯ ಕೋಕ್ ಕೊಡಲಾಗಿದೆ ಎನ್ನುವ ಮಾತು ಕೇಳಿಬರುತ್ತಿದೆ. ಸದ್ಯ ಧಾರಾವಾಹಿಯಲ್ಲಿ ಆರ್ಯವರ್ಧನ್ ಪಾತ್ರ ಇಲ್ಲ ಎನ್ನಲಾಗುತ್ತಿದೆ.