- 15-59 ವಯಸ್ಸಿನ ವ್ಯಕ್ತಿಗಳ ಸಂಖ್ಯೆ 10 ವರ್ಷದಲ್ಲಿ ಶೇ.70ರಿಂದ 63ಕ್ಕೆ ಇಳಿಕೆ
- 65 ವರ್ಷ ಮೇಲ್ಪಟ್ಟವರ ಜನಸಂಖ್ಯೆ 10 ವರ್ಷದಲ್ಲಿ ಶೇ.8.9ರಿಂದ ಶೇ.13.5ಕ್ಕೆ ಹೆಚ್ಚಳ
- ಹೀಗಾಗಿ 3 ಮಕ್ಕಳನ್ನು ಹೆರಲು ಇನ್ನು ಅವಕಾಶ
ಬೀಜಿಂಗ್ (ಜೂ. 02): ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ದೇಶ ದಲ್ಲಿ ಇದೀಗ ಜನಸಂಖ್ಯೆ ಕೊರತೆ ಭೀತಿ ಎದುರಾಗಿದೆ. ಹೀಗಾಗಿ 5 ವರ್ಷಗಳ ಹಿಂದೆ ದೇಶದ ಬಹುತೇಕ ದಂಪತಿಗೆ 2 ಮಗು ಹೊಂದಲು ಅವಕಾಶ ಕಲ್ಪಿಸಿದ್ದ ಸರ್ಕಾರ, ಇದೀಗ ಆ ಮಿತಿಯನ್ನು ಮೂರಕ್ಕೆ ಹೆಚ್ಚಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ.
ಪ್ರಸಕ್ತ 140 ಕೋಟಿ ಜನಸಂಖ್ಯೆ ಹೊಂದಿರುವ ಚೀನಾ 2022ರ ವೇಳೆಗೆ ತನ್ನ ಗರಿಷ್ಠ ಮಟ್ಟಮುಟ್ಟಿ, ಬಳಿಕ ಜನಸಂಖ್ಯೆಯಲ್ಲಿ ಇಳಿಕೆ ಕಾಣಲಿದೆ. ಇದು ಭವಿಷ್ಯದಲ್ಲಿ ಭಾರೀ ಸಮಸ್ಯೆಗೆ ಕಾರಣವಾಗಲಿದೆ ಎಂದು ಇತ್ತೀಚಿನ ವರದಿಯೊಂದು ಎಚ್ಚರಿಸಿತ್ತು. ಈ ಹಿನ್ನೆಲೆಯಲ್ಲಿ 2016ರಲ್ಲಿ 2 ಮಗು ಹೊಂದಲು ಅವಕಾಶ ಕಲ್ಪಿಸಿದ್ದ ಸರ್ಕಾರ, ಅದನ್ನು 3ಕ್ಕೆ ಹೆಚ್ಚಿಸುವ ನಿರ್ಧಾರಕ್ಕೆ ಬಂದಿದೆ.