ಪ್ಯಾಂಗಾಂಗ್ ಆಯ್ತು, ಈಗ ಸ್ಪಾಂಗ್ಗೂರ್‌ ಸರೋವರ ಬಳಿ ಚೀನಾ ಭಾರೀ ನಿಯೋಜನೆ

Sep 14, 2020, 6:07 PM IST

ನವದೆಹಲಿ (ಸೆ. 14): ಚೀನಾ ಭಾರತದ ಮೇಲೆ ಕಾಲು ಕೆರೆದುಕೊಂಡು ಯುದ್ದಕ್ಕೆ ನಿಂತಿದೆ. ಭಾರತ ತಿರುಗೇಟೂ ಕೊಟ್ಟರೂ ಕ್ಯಾತೆ ತೆಗೆಯುವುದನ್ನು ನಿಲ್ಲಿಸಿಲ್ಲ. ಪೂರ್ವ ಲಡಾಖ್‌ನ ಆಯಕಟ್ಟಿನ ಪ್ರದೇಶಗಳನ್ನು ಭಾರತೀಯ ಯೋಧರು ವಶಪಡಿಸಿಕೊಂಡ ಬೆನ್ನಲ್ಲೇ, ಚೀನಾ ಯೋಧರು ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋಗಿರುವುದು ಬೆಳಕಿಗೆ ಬಂದಿದೆ. 

ರಾಜತಾಂತ್ರಿಕ ಹೊಡೆತ: ಚೀನಾಗೆ ಗುಡ್‌ ಬೈ ಹೇಳಿ ಭಾರತದ ಜೊತೆ ಕೈಜೋಡಿಸಿದ ಜರ್ಮನಿ!

ಪ್ಯಾಂಗಾಂಗ್‌ ಸರೋವರದ ದಕ್ಷಿಣಕ್ಕಿರುವ ಪ್ರದೇಶದಲ್ಲಿ ಚೀನಾ ಸಾವಿರಾರು ಯೋಧರು, ಟ್ಯಾಂಕರ್‌ಗಳು, ಹೌವಿಟ್ಜರ್‌ ಗನ್‌ಗಳನ್ನು ನಿಯೋಜಿಸಿದೆ. ಇವೆಲ್ಲಾ ಭಾರತೀಯ ಸೇನೆ ನಿಯೋಜನೆ ಸ್ಥಳದ ಫೈರಿಂಗ್‌ ರೇಂಜ್‌ನಲ್ಲೇ ಇದೆ ಎಂದು ಮೂಲಗಳು ತಿಳಿಸಿವೆ. ಈ ಸುಳಿವು ಸಿಕ್ಕ ಬೆನ್ನಲ್ಲೇ ಭಾರತ ಕೂಡಾ ಚೀನಾಕ್ಕೆ ಸಮನಾದ ಪ್ರಮಾಣದಲ್ಲಿ ತಾನೂ ಯೋಧರು ಮತ್ತು ಶಸ್ತ್ರಾಸ್ತ್ರಗಳನ್ನು ನಿಯೋಜಿಸಿದೆ. ಎರಡೂ ದೇಶದ ನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಹೆಚ್ಚಿನ ಅಪ್‌ಡೇಟ್ಸ್ ಇಲ್ಲಿದೆ ನೋಡಿ..!