ಯುನೈಸ್ ಚಂಡಮಾರುತವು ಯುರೋಪ್ ಮತ್ತು ಬ್ರಿಟನ್‌ನಲ್ಲಿ ಹಾನಿಯನ್ನುಂಟು ಮಾಡಿದೆ. ಬ್ರಿಟನ್‌ನಲ್ಲಿ ಜನರು ರಸ್ತೆಯಲ್ಲಿ ನಿಲ್ಲಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು.
ಲಂಡನ್(ಫೆ.21): ಯುನೈಸ್ ಚಂಡಮಾರುತವು ಯುರೋಪ್ ಮತ್ತು ಬ್ರಿಟನ್‌ನಲ್ಲಿ ಹಾನಿಯನ್ನುಂಟು ಮಾಡಿದೆ. ಬ್ರಿಟನ್‌ನಲ್ಲಿ ಜನರು ರಸ್ತೆಯಲ್ಲಿ ನಿಲ್ಲಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಗಂಟೆಗೆ 200 ಕಿಲೋಮೀಟರ್ ವೇಗದಲ್ಲಿ ಬೀಸಿದ ಗಾಳಿಯ ರಭಸಕ್ಕೆ ಜನರೇ ನಿಯಂತ್ರಣ ಕಳೆದುಕೊಂಡು ಬೀಳುತ್ತಿದ್ದರು. ಬಿರುಗಾಳಿಗೆ ಮರಗಳು ನೆಲಕ್ಕುರುಳಿದ್ದು, ಮನೆಗಳಿಗೆ ಹಾನಿಯಾಗಿದೆ. ಪಶ್ಚಿಮ ಯುರೋಪ್‌ನಲ್ಲಿ ವಿಮಾನಗಳು, ರೈಲು, ಹಡಗುಗಳ ಸಂಚಾರಕ್ಕೆ ತೀವ್ರ ಅಡ್ಡಿಯಾಗಿದೆ. ಲಕ್ಷಾಂತರ ಮಂದಿ ಸುರಕ್ಷಿತ ಪ್ರದೇಶಗಳಲ್ಲಿ ಆಶ್ರಯ ಪಡೆದಿದ್ದಾರೆ. ಹೇಗಿದೆ ಅಲ್ಲಿನ ಸ್ಥಿತಿ ನೋಡಿ.