ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆಗೆ ಮೋದಿ ಅಧ್ಯಕ್ಷತೆ: ಈ ಬಗ್ಗೆ ನಡೆಯುತ್ತೆ ಚರ್ಚೆ!

Aug 9, 2021, 9:59 AM IST

ನವದೆಹಲಿ(ಆ.09) ದೇಶದ ಇತಿಹಾಸದಲ್ಲಿ ಮೊದಲ ಬಾರಿ ಭಾರತದ ಪ್ರಧಾನಿ ನರೇಂದ್ರ ಮೋದಿ ಸೋಮವಾರ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಧ್ಯಕ್ಷ ಸ್ಥಾನ ಅಲಂಕರಿಸಿ ಸಭೆ ನಡೆಸಲಿದ್ದಾರೆ. ಆನ್‌ಲೈನ್‌ ಮೂಲಕ ನಡೆಯುವ ಈ ಸಭೆಯಲ್ಲಿ ಮೋದಿ ಅವರು ಭದ್ರತಾ ಮಂಡಳಿಯ ಸದಸ್ಯ ರಾಷ್ಟ್ರಗಳ ಜೊತೆಗೆ ಸಮುದ್ರ ಸುರಕ್ಷತೆಯನ್ನು ಹೆಚ್ಚಿಸುವ ವಿಷಯದ ಕುರಿತು ಸಂವಾದ ನಡೆಸಲಿದ್ದಾರೆ.

ಆಗಸ್ಟ್‌ ತಿಂಗಳು ಪೂರ್ತಿ ಭಾರತವು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ಹೊಂದಿರುತ್ತದೆ. ಆ.9ರಂದು ಮೋದಿ ಈ ಅಧ್ಯಕ್ಷ ಸ್ಥಾನದಿಂದ ಮೊದಲ ಸಭೆ ನಡೆಸಲಿದ್ದಾರೆ. ಮುಂದಿನ ದಿನಗಳಲ್ಲಿ ವಿದೇಶಾಂಗ ಸಚಿವರು ಇನ್ನೆರಡು ಸಭೆಗಳನ್ನು ನಡೆಸಲಿದ್ದಾರೆ. ಶಾಂತಿಪಾಲನೆ ಕಾರ್ಯಾಚರಣೆ ಹಾಗೂ ಭಯೋತ್ಪಾದನೆ ನಿಗ್ರಹದ ಕುರಿತು ಆ ಸಭೆಗಳು ನಡೆಯಲಿವೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್‌ ಬಗ್ಚಿ ತಿಳಿಸಿದ್ದಾರೆ.