ರಷ್ಯಾ - ಉಕ್ರೇನ್ ಯುದ್ಧವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಉಭಯ ದೇಶಗಳು ಬೆಲಾರಸ್‌ನಲ್ಲಿ 2ನೇ ಹಂತದ ಸಂಧಾನ ಮಾತುಕತೆ ನಡೆಸಿದ್ದು, ಚರ್ಚೆಯು ಮಹತ್ವದ ಪ್ರಗತಿ ಕಂಡಿದೆ. ಯುದ್ಧಪೀಡಿತ ಸ್ಥಳಗಳಲ್ಲಿ ಜನರ ತೆರವು ಕಾರ್ಯಾಚರಣೆಗೆ ಅನುವು ಮಾಡಿಕೊಡಲು ಉಭಯ ದೇಶಗಳು ಸಮ್ಮತಿಸಿವೆ.

ಮರಿಯೂಪೋವಾ, ವೋಲ್‌ನವೋಕಾ ನಗರಗಳಲ್ಲಿ ಕದನ ವಿರಾಮ ಘೋಷಿಸಲಾಗಿದೆ. ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ನಾಗರೀಕರಿಗೆ ಸೂಚಿಸಲಾಗಿದೆ. ಭಾರತೀಯ ಕಾಲಮಾನ ಸಂಜೆ 5 ಕ್ಕೆ ಮುಕ್ತಾಯಗೊಳ್ಳಲಿದೆ.
ಇದೇ ವೇಳೆ, ನಾಗರಿಕರ ತೆರವು ಕಾರ್ಯಾಚರಣೆಯಲ್ಲದೆ ಆಹಾರ ಹಾಗೂ ಔಷಧ ಪೂರೈಕೆಗೆ ಯಾವುದೇ ಅಡ್ಡಿ ಮಾಡಬಾರದು. ಇಂಥ ಕೆಲಸಗಳು ನಡೆಯುವಾಗ ತಾತ್ಕಾಲಿಕವಾಗಿ ಕದನವಿರಾಮ ನೀತಿಯನ್ನು ಅನುಸರಿಸಬೇಕು ಎಂದು ಮಾತುಕತೆಯಲ್ಲಿ ನಿರ್ಧರಿಸಲಾಗಿದೆ.