ಮುಸ್ಲಿಮರಲ್ಲ, ಬ್ರಾಹ್ಮಣರು ಅಲ್ಪಸಂಖ್ಯಾತರು ಅವರಿಗೆ ಮೀಸಲಾತಿ ನೀಡಿ: ಯತ್ನಾಳ್‌

By Sharath Sharma Kalagaru  |  First Published Oct 10, 2022, 4:55 PM IST

Reservation Row: ಬಸನಗೌಡ ಪಾಟೀಲ್‌ ಯತ್ನಾಳ್‌ ಮೀಸಲಾತಿ ವಿಚಾರದ ಕುರಿತು ಮಾತನಾಡಿದ್ದು ಮುಸ್ಲಿಂ ಸಮುದಾಯ ಅಲ್ಪಸಂಖ್ಯಾತ ಸಮುದಾಯವಲ್ಲ, ಬ್ರಾಹ್ಮಣರು ನಿಜವಾಗಿಯೂ ಅಲ್ಪಸಂಖ್ಯಾತರು ಎಂದಿದ್ದಾರೆ. ಜತೆಗೆ ಬ್ರಾಹ್ಮಣ ಸಮುದಾಯಕ್ಕೆ ಮೀಸಲಾತಿ ನೀಡಿ ಎಂದು ಬೇಡಿಕೆ ಇಟ್ಟಿದ್ದಾರೆ. 


ವಿಜಯಪುರ: ರಾಜ್ಯ ಸರ್ಕಾರ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡಗಳಿಗೆ ಮೀಸಲಾತಿ ಹೆಚ್ಚಿಸುವ ನಿರ್ಧಾರ ಮಾಡಿದ್ದು, ವಾಲ್ಮೀಕಿ ಸಮುದಾಯದ ಬಹುಕಾಲದ ಬೇಡಿಕೆಗೆ ಯಶಸ್ಸು ಸಿಕ್ಕಿದೆ. ಚುನಾವಣೆ ಹತ್ತಿರವಿರುವಾಗ ಎಸ್‌ಸಿ, ಎಸ್‌ಟಿ ಮೀಸಲಾತಿ ಏರಿಕೆಗೆ ಬಿಜೆಪಿ ಸರ್ಕಾರ ಅನುಮೊದನೆ ನೀಡಿದ್ದು ಸಾಕಷ್ಟು ಪರ ವಿರೋಧದ ಚರ್ಚೆಗೆ ಕಾರಣವಾಗಿದೆ. ಈ ಸಂಬಂಧ ಮಾತನಾಡಿದ ಬಿಜೆಪಿ ಮಾಜಿ ಸಚಿವ ಮತ್ತು ಹಿರಿಯ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ್‌, ಮುಸಲ್ಮಾನರು ಅಲ್ಪಸಂಖ್ಯಾತರಲ್ಲ ಎಂದು ಹೇಳಿದ್ದಾರೆ. ಜತೆಗೆ ಬ್ರಾಹ್ಮಣರು ಅಲ್ಪಸಂಖ್ಯಾತರು ಎಂದು ಹೊಸ ಮೀಸಲಾತಿ ಬೇಡಿಕೆಯನ್ನು ಯತ್ನಾಳ್‌ ಮುಂದಿಟ್ಟಿದ್ದಾರೆ. ಅವರ ಈ ಹೇಳಿಕೆ ಟೀಕೆಗೆ ಗುರಿಯಾಗುವ ಸಾಧ್ಯತೆಗಳಿವೆ. 

"ಬ್ರಾಹ್ಮಣರಿಗೆ ಅಲ್ಪಸಂಖ್ಯಾತ ಸ್ಥಾನಮಾನ ಸಿಗಬೇಕು. ಬ್ರಾಹ್ಮಣರು ಅಲ್ಪಸಂಖ್ಯಾತರು. ಬ್ರಾಹ್ಮಣರು ಕೇವಲ ಶೇಕಡಾ 2ರಿಂದ3 ರಷ್ಟಿದ್ದಾರೆ. ನಿಜವಾದ ಅಲ್ಪ ಸಂಖ್ಯಾತರು ಬ್ರಾಹ್ಮಣರು. ಅಲ್ಪಸಂಖ್ಯಾತ ಪಟ್ಟಿಯಲ್ಲಿ ಬ್ರಾಹ್ಮಣರನ್ನ ಸೇರಿಸಬೇಕು, ಇದು ನನ್ನ ವಾದ," ಎಂದು ಯತ್ನಾಳ್ ಹೇಳಿದ್ದಾರೆ. ಮುಸಲ್ಮಾನರು ಅಲ್ಪ ಸಂಖ್ಯಾತರು ಅಲ್ಲವೇ ಅಲ್ಲಾ ಎಂದ ಯತ್ನಾಳ್, ಒಂದು ಜನಾಂಗದಷ್ಟಿರುವ ಮುಸ್ಲಿಂ ಹೇಗೆ ಅಲ್ಪ ಸಂಖ್ಯಾತರಾಗ್ತಾರೆ?  ಎಂದು ಪ್ರಶ್ನಿಸಿದ್ದಾರೆ. 

Latest Videos

undefined

"ದೇಶದ್ರೋಹಿ ಕೆಲಸ ಮಾಡೋದು, ಪಾಕಿಸ್ತಾನದ ಪರ ಮಾತನಾಡೋದು ಈಗ ಮೀಸಲಾತಿ ಬೇಕು ಅಂದ್ರೆ ಹೇಗೆ?? ಬಹಳ ಸೌಲಭ್ಯ ಬೇಕಿದ್ದರೆ ಮುಸ್ಲಿಂರು ಪಾಕಿಸ್ತಾನಕ್ಕೆ ಹೋಗಲಿ. ಸೌಲಭ್ಯಕ್ಕಾಗಿ ಪಾಕಿಸ್ತಾನಕ್ಕೆ ಹೋಗಬಹುದು," ಎಂದ ಯತ್ನಾಳ್ ಹೇಳಿದ್ದಾರೆ. ಯತ್ನಾಳ್‌ ಅನ್ಯ ಸಮುದಾಯದ ಕುರಿತಾಗಿ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿರುವುದು ಇದು ಮೊದಲೇನಲ್ಲ. ಆಗಾಗ ಈ ರೀತಿಯ ವಿವಾದಗಳನ್ನು ಸೃಷ್ಟಿಸುತ್ತಲೇ ಇರುತ್ತಾರೆ. 

ಎಸ್‌ಸಿ ಎಸ್‌ಟಿ ಸಮುದಾಯದ ಮೀಸಲಾತಿ ಏರಿಕೆ:

ಆರ್ಥಿಕವಾಗಿ ಹಿಂದುಳಿದವರಿಗೆ ನೀಡಿರುವ ಶೇ.10ರಷ್ಟು ಮೀಸಲಾತಿಯನ್ನು ಕಾನೂನಿನ ಪ್ರಕಾರ ಮೀಸಲಾತಿ ಇಲ್ಲದಿರುವ, ಆರ್ಥಿಕ ಹಿಂದುಳಿದ ವರ್ಗಕ್ಕೆ ನೀಡಲು ಈಗಾಗಲೇ ತೀರ್ಮಾನ ಮಾಡಲಾಗಿದೆ. ಆದರೆ, ಅದು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದ್ದು, ತೀರ್ಪನ್ನು ಕಾಯ್ದಿರಿಸಲಾಗಿದೆ. ಅದಾದ ಕೂಡಲೇ ಆದೇಶದನ್ವಯ ಅನುಷ್ಠಾನ ಮಾಡಲಾಗುವುದು ಎಂದು ತಿಳಿಸಿದರು. ಹಲವು ವರ್ಷಗಳ ನ್ಯಾಯಸಮ್ಮತವಾದ ಬೇಡಿಕೆ, ಸಂವಿಧಾನದಲ್ಲಿ ಹೇಳಿರುವಂತೆ ಜನಸಂಖ್ಯೆಯ ಆಧಾರದಲ್ಲಿ ಮೀಸಲಾತಿ ನೀಡಬೇಕು ಎಂಬ ಬೇಡಿಕೆಯಂತೆ ಪರಿಶಿಷ್ಟಜಾತಿಗೆ ಶೇ.15ರಷ್ಟಿದ್ದ ಮೀಸಲಾತಿಯನ್ನು ಶೇ.17ಕ್ಕೆ ಮತ್ತು ಪರಿಶಿಷ್ಟ ಪಂಗಡಕ್ಕೆ ಶೇ.3ರಿಂದ ಶೇ.7ಕ್ಕೆ ಮೀಸಲಾತಿಯನ್ನು ಹೆಚ್ಚಿಸಲು ಒಮ್ಮತ ತೀರ್ಮಾನ ಮಾಡಲಾಗಿದೆ. 

ಕನ್ನಡ ರಾಜ್ಯೋತ್ಸವದಂದು ಯಶಸ್ವಿನಿ ಯೋಜನೆ ಮರು ಜಾರಿ: ಸಿಎಂ ಬೊಮ್ಮಾಯಿ

ಸರ್ವಪಕ್ಷಗಳ ಸಭೆಗೂ ಮುನ್ನ ಬಿಜೆಪಿ ಪಕ್ಷದಲ್ಲಿಯೂ ಈ ಬಗ್ಗೆ ಎಲ್ಲಾ ನಾಯಕರೊಂದಿಗೆ ಚರ್ಚಿಸಲಾಗಿದೆ. ಬಿಜೆಪಿ ಕೋರ್‌ ಸಮಿತಿ ಸಭೆಯಲ್ಲಿ ಚರ್ಚಿಸಿ ಸಾಮಾಜಿಕ ನ್ಯಾಯದಲ್ಲಿ ನಮ್ಮ ಬದ್ಧತೆಯನ್ನು ಮುಂದುವರಿಸಬೇಕು ಮತ್ತು ಎಸ್‌ಸಿ, ಎಸ್‌ಟಿಗೆ ಹೆಚ್ಚಿನ ಮೀಸಲಾತಿ ನೀಡಲು ಕ್ರಮ ಕೈಗೊಂಡು ಕಾನೂನಾತ್ಮಕ ಕ್ರಮಗಳನ್ನೂ ತೆಗೆದುಕೊಳ್ಳಲು ನಿರ್ಣಯ ಮಾಡಲಾಯಿತು. ಸರ್ವಪಕ್ಷದ ಸಭೆಯಲ್ಲಿ ತೀರ್ಮಾನಿಸಿದಂತೆ ಮೀಸಲಾತಿ ಹೆಚ್ಚಳದ ಅನುಷ್ಠಾನಕ್ಕೆ ಸರ್ಕಾರ ಮುಂದಾಗಿದೆ. ಶನಿವಾರ ಸಚಿವ ಸಂಪುಟ ಸಭೆ ನಡೆಸಿ ನ್ಯಾ. ನಾಗಮೋಹನ್‌ ದಾಸ್‌ ಸಮಿತಿಯ ಎಲ್ಲಾ ಶಿಫಾರಸ್ಸುಗಳನ್ನು ಚರ್ಚಿಸಿ ಅಂತಿಮವಾದ ಸರ್ಕಾರದ ಕಾರ್ಯಾದೇಶವನ್ನು ಹೊರಡಿಸಲಾಗುವುದು ಎಂದು ವಿವರಿಸಿದರು.

ಮೀಸಲು ಹೆಚ್ಚಳಕ್ಕೆ ಸಂವಿಧಾನದ ಅನುಸೂಚಿ 9ರಲ್ಲಿ ವಿನಾಯಿತಿ: ತಮಿಳುನಾಡು ಸರ್ಕಾರ 1994ರಲ್ಲಿ ಮೀಸಲಾತಿ ಹೆಚ್ಚಳ ಮಾಡಿ ಅದು ಸಂವಿಧಾನದ ಅನುಸೂಚಿ 9ರಲ್ಲಿ ಬಂದ ನಂತರ 2007ರಲ್ಲಿ ಮತ್ತೊಂದು ತೀರ್ಪು ಬಂದಿದೆ. ಅನುಸೂಚಿ 9 ಮೂಲಭೂತ ಹಕ್ಕುಗಳಿಗೆ ಚ್ಯುತಿಯಾದರೆ ಅದಕ್ಕೆ ನ್ಯಾಯಾಂಗದ ವಿನಾಯಿತಿ ನೀಡಬೇಕು ಎಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ 1950ರಲ್ಲಿ ಭೂ ಸುಧಾರಣಾ ಕಾಯ್ದೆ ಬಂದಾಗ ಸುಪ್ರೀಂಕೋರ್ಟ್‌ ಕಾಯ್ದೆಯನ್ನು ರದ್ದು ಮಾಡಿತು. 

ರಾಹುಲ್‌ ಗಾಂಧಿ ಹೇಳಿದ ಆನೆ ಮರಿ ರಕ್ಷಣೆಗೆ ಸಿಎಂ ಬೊಮ್ಮಾಯಿ ಸೂಚನೆ

ಆ ಸಂದರ್ಭದಲ್ಲಿ ಭೂ ಸುಧಾರಣಾ ಕಾಯ್ದೆ ಮತ್ತು ರೈತರಿಗೆ ನ್ಯಾಯ ಕೊಡಿಸುವ ಸಲುವಾಗಿ ಮೂಲಭೂತ ಹಕ್ಕು ಎಂದು ಪರಿಗಣಿಸಿ ಅನುಸೂಚಿ 9 ಅನ್ನು ತರಲಾಯಿತು. ಕೇವಲ ಮೀಸಲಾತಿಗೆ ಮಾತ್ರವಲ್ಲ, ಹಲವಾರು ವಿಚಾರಗಳು ಇದರಲ್ಲಿ ಬರುತ್ತದೆ. 1994ರಿಂದ ಈವರೆಗೆ ವಿನಾಯಿತಿ ದೊರೆತಿದೆ. ಈಗಲೂ ಸಹ ಅದರ ಬಗ್ಗೆ ತೀರ್ಪು ಹೊರಬಂದಿಲ್ಲ ಎಂದು ಹೇಳಿದರು. ಇವುಗಳನ್ನು ಸಂಪುರ್ಣವಾಗಿ ಅಧ್ಯಯನ ನಡೆಸಿ ಈ ವಿಚಾರದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ರಾಜ್ಯದಲ್ಲಿ ಸಾಮರಸ್ಯ ಮೂಡಬೇಕು ಎಂಬ ಕಾರಣದಿಂದ ಮತ್ತು ಕಾನೂನು ಮತ್ತು ಸಂವಿಧಾನಾತ್ಮಕವಾದ ವಿಚಾರ ಇದಾಗಿರುವುದರಿಂದ ಸರ್ವ ಪಕ್ಷ ಸಭೆಯಲ್ಲಿ ಚರ್ಚೆ ಮಾಡಿ, ಸರ್ವಸಮ್ಮತದಿಂದ ತೀರ್ಮಾನ ಮಾಡಲಾಗಿದೆ ಎಂದರು.

click me!