ವೀರ ಸಾವರ್ಕರಗೆ ಭಾರತ ರತ್ನ ನೀಡುವ ಬಗ್ಗೆ ವಿವಾದ ಎದ್ದಿರುವುದು ವಿಷಾದಕರ| ಸಾವರ್ಕರ ಮತ್ತು ಅವರ ಕುಟುಂಬದವರು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನ ಮಾಡಿದವರ ಪಟ್ಟಿಯಲ್ಲಿದ್ದಾರೆ| ನಾನು, ನನ್ನ ಕುಟುಂಬ, ಸಿದ್ದರಾಮಯ್ಯ ಮತ್ತು ಅವರ ಕುಟುಂಬದವರು ಯಾರೂ ಸ್ವಾತಂತ್ರ್ಯಕ್ಕಾಗಿ ಸತ್ತಿಲ್ಲ ಎಂದ ವಿಶ್ವನಾಥ| ನಮ್ಮ ಆಸ್ತಿಯೂ ಹೋಗಿಲ್ಲ. ವೀರ ಸಾವರ್ಕರ ಅವರಂಥ ನಾಯಕರು ಹೋರಾಟ ನಡೆಸಿದ್ದರಿಂದ ಅದರ ಫಲವನ್ನು ಇಂದು ನಾವು ಉಣ್ಣುತ್ತಿದ್ದೇವೆ|
ವಿಜಯಪುರ[ಅ.21]: ವೀರ ಸಾವರ್ಕರಗೆ ಭಾರತ ರತ್ನ ನೀಡುವ ಬಗ್ಗೆ ವಿವಾದ ಎದ್ದಿರುವುದು ವಿಷಾದಕರ. ಸಾವರ್ಕರ ಮತ್ತು ಅವರ ಕುಟುಂಬದವರು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನ ಮಾಡಿದವರ ಪಟ್ಟಿಯಲ್ಲಿದ್ದಾರೆ. ನಾನು, ನನ್ನ ಕುಟುಂಬ, ಸಿದ್ದರಾಮಯ್ಯ ಮತ್ತು ಅವರ ಕುಟುಂಬದವರು ಯಾರೂ ಸ್ವಾತಂತ್ರ್ಯಕ್ಕಾಗಿ ಸತ್ತಿಲ್ಲ. ನಮ್ಮ ಆಸ್ತಿಯೂ ಹೋಗಿಲ್ಲ. ವೀರ ಸಾವರ್ಕರ ಅವರಂಥ ನಾಯಕರು ಹೋರಾಟ ನಡೆಸಿದ್ದರಿಂದ ಅದರ ಫಲವನ್ನು ಇಂದು ನಾವು ಉಣ್ಣುತ್ತಿದ್ದೇವೆ ಎಂದು ಜೆಡಿಎಸ್ ಅನರ್ಹ ಶಾಸಕ ಎಚ್. ವಿಶ್ವನಾಥ ಹೇಳಿದ್ದಾರೆ.
ಸೋಮವಾರ ನಗರದಲ್ಲಿ ಮಾತನಾಡಿದ ಅವರು, ನಾಳೆ ಸುಪ್ರೀಂ ಕೋರ್ಟ್ ನಲ್ಲಿ ನಮ್ಮ ಪರ ತೀರ್ಪು ಬರುವ ನಂಬಿಕೆಯಿದೆ, ವಿಶ್ವಾಸವಿದೆ ಏಕೆಂದರೆ ಅಂದಿನ ಸ್ಪೀಕರ್ ರಮೇಶ ಕುಮಾರ ಕಾನೂನು ಬಾಹಿರ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ ಗೆ ಹೋಗಿದ್ದೇವೆ. ಸುಪ್ರೀಂ ಕೋರ್ಟ್ ನಮ್ಮ ವಾದವನ್ನು ಎತ್ತಿ ಹಿಡಿಯುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.
undefined
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಸಿದ್ದರಾಮಯ್ಯ ತಮ್ಮ ಕುರಿತು ಆಡಿರುವ ಮಾತಿಗೆ ಪ್ರತಿಕ್ರಿಯೆ ನೀಡಿದ ವಿಶ್ವನಾಥ ಅವರು, ಸಿದ್ದರಾಮಯ್ಯ ಮಾಜಿ ಮುಖ್ಯಮಂತ್ರಿಗಳು, ದೊಡ್ಡವರು, ಸತ್ಯವಂತರು, ರಾಷ್ಟ್ರ ನಾಯಕರು, ಸ್ವಾತಂತ್ರ್ಯ ಪ್ರೇಮಿಗಳು ಅವರ ಬಗ್ಗೆ ಮೈಸೂರಿನಲ್ಲಿ ಉತ್ತರ ಕೊಡುತ್ತೇನೆ. ಸೋಮದೇವರ ಹಟ್ಟಿಯಲ್ಲಿ ವಿಶೇಷ ಪೂಜೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪ್ರಗತಿಪರರಾದ ತಾವು ದೇವರಿಗೆ ಕೈ ಮುಗಿಯಬಾರದೇ? ದೇವರಿಗೆ ಕೈ ಮುಗಿಯುವುದು, ಹೋಮ ಹವನ ಮಾಡುವುದಯ ಬೇಡ ಅಂತ ಎಲ್ಲಿದೆ ಶ್ರದ್ಧಾ ಭಕ್ತಿಯಿಂದ ದೇವರಿಗೆ ನಡೆದುಕೊಳ್ಳುವುದು ನಮ್ಮಲ್ಲಿ ಬಂದಿರುವ ಪದ್ಧತಿ ಎಂದು ಹೇಳಿದ್ದಾರೆ.
ಜಿಲ್ಲೆಯ ತಿಕೋಟಾದಲ್ಲಿ ಸ್ನೇಹಿತರೊಬ್ಬರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿದ್ದೇನೆ. ತಿಕೋಟಾದಿಂದ ಬೆಳಗಾವಿ ಮೂಲಕ ದೆಹಲಿಗೆ ತೆರಳುತ್ತೇನೆ ಎಂದು ಇದೇ ವೇಳೆ ಎಚ್. ವಿಶ್ವನಾಥ ಹೇಳಿದ್ದಾರೆ.