ರಾಜ್ಯದಲ್ಲಿ ಯಾವುದೇ ಸಮಯದಲ್ಲಿ ಚುನಾವಣೆ ಬರಬಹುದು ಎಂದ ಮಾಜಿ ಸಚಿವ ರಾಮಲಿಂಗಾ ರೆಡ್ಡಿ| ವಿಜಯಪುರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶ|ಕಾಂಗ್ರೆಸ್ ಈಗಲೇ ಮುಂಬರುವ ಸಂಭವನೀಯ ಚುನಾವಣೆ ಬಗ್ಗೆ ತಯಾರಿ ನಡೆಸಬೇಕು|ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ದೇಶಕ್ಕೆ ನೀಡಿದ ಕೊಡುಗೆ ಶೂನ್ಯ|
ವಿಜಯಪುರ[ನ.12]: ಮಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರನ್ನು ಕೆಳಗಿಸಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದೆ. ಯಾವುದೇ ಸಮಯದಲ್ಲಿ ಚುನಾವಣೆ ಬರಬಹುದು ಎಂದು ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅವರು ಹೇಳಿದ್ದಾರೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಮಂಗಳವಾರ ನಗರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಈಗಲೇ ಮುಂಬರುವ ಸಂಭವನೀಯ ಚುನಾವಣೆ ಬಗ್ಗೆ ತಯಾರಿ ನಡೆಸಬೇಕು ಎಂದು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ದೇಶಕ್ಕೆ ನೀಡಿದ ಕೊಡುಗೆ ಶೂನ್ಯ. ವರ್ಷಕ್ಕೆ 2 ಕೋಟಿ ಹೊಸ ಉದ್ಯೋಗ ನೀಡುವುದಾಗಿ ಹೇಳಿದ್ದರು. ಈಗ ವರ್ಷಕ್ಕೆ 2 ಕೋಟಿ ಉದ್ಯೋಗ ಕಡಿತವಾಗುತ್ತಿವೆ ಎಂದು ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.