Vijayapura ಬೇಸಿಗೆ ಬಿಸಿಗಾಳಿ-ಸಿಡಿಲು ನಿಭಾಯಿಸಲು ಜನತೆಗೆ ಸಲಹೆ ನೀಡಿದ ಹೊಸ ಜಿಲ್ಲಾಧಿಕಾರಿ!

By Suvarna News  |  First Published Apr 26, 2022, 10:30 AM IST

ವಿಜಯಪುರ ಜಿಲ್ಲೆಗೆ ಹೊಸತಾಗಿ ನಿಯೋಜನೆಗೊಂಡಿರುವ ಡಿಸಿ ಪ್ರಸಕ್ತ ಸಾಲಿನಲ್ಲಿ ಬೇಸಿಗೆಯ ಬಿಸಿ ಗಾಳಿ ಹಾಗೂ ಸಿಡಿಲು ಪರಿಸ್ಥಿತಿ ನಿಭಾಯಿಸಲು ಸಾರ್ವಜನಿಕರು ಕೆಲವು ಅಗತ್ಯ ಕ್ರಮಗಳನ್ನು ಅನುಸರಿಸಬೇಕು ಎಂದು ಸಲಹೆ ನೀಡಿದ್ದಾರೆ


ವರದಿ: ಷಡಕ್ಷರಿ ಕಂಪೂನವರ್, ಏಷ್ಯಾನೆಟ್ ಸುವರ್ಣ ನ್ಯೂಸ್

ವಿಜಯಪುರ (ಏ26): ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಬೇಸಿಗೆಯ ಬಿಸಿ ಗಾಳಿ ಹಾಗೂ ಸಿಡಿಲು ಪರಿಸ್ಥಿತಿ ನಿಭಾಯಿಸಲು ಸಾರ್ವಜನಿಕರು ಕೆಲವು ಅಗತ್ಯ ಕ್ರಮಗಳನ್ನು ಅನುಸರಿಸಬೇಕು ಎಂದು ವಿಜಯಪುರ (Vijayapura) ಜಿಲ್ಲೆಗೆ ಹೊಸದಾಗಿ ನೇಮಕಗೊಂಡಿರುವ ಜಿಲ್ಲಾಧಿಕಾರಿಗಳಾದ ಡಾ.ವಿಜಯ ಮಹಾಂತೇಶ ದಾನಮ್ಮನವರ (dc Vijaya mahantesh danamma) ಅವರು ಕೆಲ ಸಲಹೆ ನೀಡಿದ್ದಾರೆ.

Latest Videos

undefined

ಸಾರ್ವಜನಿಕರು ಮಾಡಬೇಕಾದ್ದು ಏನು?
ಸಾರ್ವಜನಿಕರು ರೇಡಿಯೋ,ಟಿವಿ, ದಿನ ಪತ್ರಿಕೆಗಳಲ್ಲಿ ಬರುವ ಅತಿಯಾದ ಬಿಸಿಲಿನ ಕುರಿತು ಮುನ್ಸೂಚನೆಗಳನ್ನು ಪಡೆದುಕೊಳ್ಳಬೇಕು. ಬಾಯಾರಿಕೆಯಿಲ್ಲದಿದ್ದರೂ ಸಾಕಷ್ಟು ಮತ್ತು ಸಾಧ್ಯವಾದಷ್ಟು ಹೆಚ್ಚಾಗಿ ನೀರನ್ನು ಕುಡಿಯಬೇಕು. ಬಿಸಿಲಿನಲ್ಲಿ ಹೊರಗೆ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಟೋಪಿ, ಬೂಟುಗಳು ಅಥವಾ ಚಪ್ಪಲ್‌ಗಳನ್ನು  ಬಳಸಬೇಕು. ಹಗುರವಾದ, ತಿಳಿ-ಬಣ್ಣದ, ಸಡಿಲವಾದ ಮತ್ತು ರಂಧ್ರವುಳ್ಳ ಹತ್ತಿ ಬಟ್ಟೆಗಳನ್ನು ಧರಿಸಿ. ನೀವು ಹೊರಗೆ ಕೆಲಸ ಮಾಡುತ್ತಿದ್ದರೆ, ಟೋಪಿ,ಛತ್ರಿಯನ್ನು ಬಳಸಿ ಮತ್ತು ನಿಮ್ಮ ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ  ಬಟ್ಟೆಯನ್ನು ಸಹ ಬಳಸಬೇಕು.

ಬಸ್ಸಿನಲ್ಲಿ ದೂರದ ಪ್ರಯಾಣವನ್ನು ರಾತ್ರಿ ವೇಳೆ ಮಾಡುವುದು ಉತ್ತಮ, ಒಂದು ವೇಳೆ ಪ್ರಯಾಣ ಮಾಡುವ ಸಂದರ್ಭ ಬಂದರೆ, ಪ್ರಯಾಣ ಮಾಡುವಾಗ ನಿಮ್ಮೊಂದಿಗೆ ನೀರನ್ನು ಒಯ್ದಿರಿ. ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ಶರಬತ್, ನಿಂಬೆ ನೀರು, ಮಜ್ಜಿಗೆ ಇತ್ಯಾದಿಗಳನ್ನು ಬಳಸಿ ಅದು ದೇಹವನ್ನು ಪುನಃ ತಂಪಾಗಿಡಲು ಸಹಾಯ ಮಾಡುತ್ತದೆ ಎಂದು ಅವರು ತಿಳಿಸಿದ್ದಾರೆ.

ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರ ಹಲ್ಲೆ, ಇನ್ಸ್ಪೆಕ್ಟರ್  ಸೇರಿ ಮೂವರ ಅಮಾನತು

ಪ್ರಾಣಿ, ಪಕ್ಷಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ನೀಡಿ. ನಿಮ್ಮ ಮನೆಯನ್ನು ತಂಪಾಗಿರಿಸಿಕೊಳ್ಳಿ, ಪರದೆಗಳು, ಕಪಾಟುಗಳು ಬಳಸಿ ಮತ್ತು ರಾತ್ರಿಯಲ್ಲಿ ಕಿಟಕಿಗಳನ್ನು ತೆರೆಯಿರಿ. ಆದಷ್ಟು ಫ್ಯಾನ್‌ಗಳನ್ನು ಬಳಸಿ, ಒದ್ದೆಯಾದ ಬಟ್ಟೆಗಳನ್ನು ಮತ್ತು ಆಗಾಗ್ಗೆ ತಣ್ಣೀರಿನಲ್ಲಿ ಸ್ನಾನ ಮಾಡಿ. ಕೆಲಸದ ಸಮಯವನ್ನು ಆದಷ್ಟು ತಂಪಾದ ಸಮಯದಲ್ಲಿ ಮಾಡಬೇಕು ಹಾಗೂ ಕೆಲಸದ ಸ್ಥಳದ ಬಳಿ ತಂಪಾದ ಕುಡಿಯುವ ನೀರನ್ನು ಒದಗಿಸಿ. ಆದಷ್ಟ್ಟು ಹೊರಾಂಗಣ ಚಟುವಟಿಕೆಗಳಿಗೆ ವಿಶ್ರಾಂತಿ ನೀಡಬೇಕು. ಕೆಲಸ ನಿರ್ವಹಿಸುವ ಗರ್ಭಿಣಿಯರು ಮತ್ತು ಅನಾರೋಗ್ಯದಲ್ಲಿರುವ ಕಾರ್ಮಿಕರಿಗೆ ಹೆಚ್ಚಿನ ಗಮನ ನೀಡಬೇಕು.

ಜನರು ಇದನ್ನು ಮಾಡಬಾರದು.!
ಮಕ್ಕಳು ಅಥವಾ ಸಾಕುಪ್ರಾಣಿಗಳನ್ನು ಮತ್ತು ವಾಹನಗಳನ್ನು ಬಿಸಿಲಿನ ಸಮಯದಲ್ಲಿ ಹೊರಗಡೆ ಬಿಡಬೇಡಿ. ವಿಶೇಷವಾಗಿ ಮಧ್ಯಾಹ್ನ 12.00 ರಿಂದ ಮಧ್ಯಾಹ್ನ 3.00 ರ ನಡುವೆ ಬಿಸಿಲಿಗೆ ಹೋಗುವುದನ್ನು ತಪ್ಪಿಸಿ, ಕಪ್ಪು ಬಟ್ಟೆ ಅಥವಾ ಬಿಗಿಯಾದ ಬಟ್ಟೆಗಳನ್ನು ಧರಿಸುವುದನ್ನು ತಪ್ಪಿಸಿ ಎಂದು ಅವರು ತಿಳಿಸಿದ್ದಾರೆ. ಹೊರಗಿನ ತಾಪಮಾನ ಹೆಚ್ಚಾದಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಿ. ಮಧ್ಯಾಹ್ನ 12 ರಿಂದ ಮಧ್ಯಾಹ್ನ 3 ರವರೆಗೆ ಹೊರಗೆ ಕೆಲಸ ಮಾಡುವುದನ್ನು ತಪ್ಪಿಸಿ. ಬಿಸಿಲಿನ ಸಮಯದಲ್ಲಿ ಅಡುಗೆ ಮಾಡುವುದನ್ನು ತಪ್ಪಿಸಿ. ಅಡುಗೆ ಪ್ರದೇಶವನ್ನು ಸಮರ್ಪಕವಾಗಿ ಗಾಳಿಯಾಡಲು ಬಾಗಿಲು ಮತ್ತು ಕಿಟಕಿಗಳನ್ನು ತೆರೆಯಿರಿ. ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಹಾನಿಕಾರಕ ತಂಪು ಪಾನೀಯಗಳನ್ನು ಸೇವಿಸಬೇಡಿ. ಹಾನಿಕಾರಕವಾದ ಆಹಾರ ಮತ್ತು ಹಳಸಿದ ಆಹಾರವನ್ನು ಸೇವಿಸಬೇಡಿ ಎಂದು ಅವರು ತಿಳಿಸಿದ್ದಾರೆ.

1.5 ಕೋಟಿ ರೂ. ಗುಳುಂ ಮಾಡಿ ಎಸ್‌ಬಿಐ ಬ್ಯಾಂಕ್ ಮ್ಯಾನೇಜರ್‌ ನಾಪತ್ತೆ: ಕಂಗಾಲಾದ ಗ್ರಾಹಕರು..!

ಸಿಡಿಲಾಘಾತದಿಂದ ತಪ್ಪಿಸಿಕೊಳ್ಳುವುದು ಹೇಗೆ?
ವಿಜಯಪುರ ಜಿಲ್ಲೆಯಲ್ಲಿ ಬಿಸಿಲಿನ ಜೊತೆಗೆ ಅಕಾಲಿಕ ಸಿಡಿಲು,ಗುಡುಗಯ ಸಹಿತ ಮಳಯಾಗ್ತಿದೆ.. ರೈತರು ಸಿಡಿಲಿಗೆ ಬಲಿಯಾಗ್ತಿದ್ದಾರೆ. ಈ ಹಿನ್ನೆಲೆ ಜಿಲ್ಲಾಧಿಕಾರಿಗಳು ಈ ಬಗ್ಗೆ ಕೆಲ ಸಲಹೆಗಳನ್ನು ನೀಡಿದ್ದಾರೆ. ಸಿಡಿಲಿನಿಂದ ಸಾಯುವವರಲ್ಲಿ ಹೆಚ್ಚಿನವರು ರೈತರು, ಸಿಡಿಲನ್ನು ತಪ್ಪಿಸಲಾಗದು. ಆದರೆ ಅದರಿಂದಾಗುವ ಸಾವು ನೋವುಗಳನ್ನು ತಪ್ಪಿಸಬಹುದು.

ಗುಡುಗು-ಮಿಂಚು ಬರಲಿದೆ ಎಂದು ಗೊತ್ತಾದಾಗ ನೀವು ಬಯಲಿನಲ್ಲಿದ್ದರೆ ತಕ್ಷಣವೇ ಇರುವುದರಲ್ಲಿ ತಗ್ಗು ಪ್ರದೇಶಕ್ಕೆ ಹೋಗಿ ಕುಳಿತುಕೊಳ್ಳಿ ನಿಲ್ಲಬೇಡಿ, ತಗ್ಗು ಪ್ರದೇಶ ಇಲ್ಲದೆ ಬಯಲಿನಲ್ಲಿ ಇರಬೇಕಾದರೆ, ನಿಮ್ಮ ತಲೆಯನ್ನು ಮೊಣಕಾಲುಗಳ ನಡುವೆ ಹುದುಗಿಸಿಕೊಳ್ಳಿ, ಇದು ಮಿಂಚಿನಿಂದ ಮೆದುಳಿಗೂ ಹೃದಯಕ್ಕೂ ಆಗುವ ಹಾನಿಯನ್ನು ತಪ್ಪಿಸುತ್ತದೆ. ಮರಗಳಿದ್ದ ಪ್ರದೇಶದಲ್ಲಿ ನೀವು ಇದ್ದರೆ, ಅಲ್ಲಿಂದ ಬೇಗನೆ ಹೊರಬರುವುದು ಒಳ್ಳೆಯದು. ಯಾಕೆಂದರೆ ಸಿಡಿಲು ಮೋಡದಿಂದ ಭೂಮಿಗೆ ಹರಿಯಲು ಮರದಂತಹ ಹಸಿ, ಒದ್ದೆ ವಸ್ತುವನ್ನೇ ಆರಿಸಿಕೊಳ್ಳುತ್ತದೆ.

ಎತ್ತರದ ಗುಡ್ಡದ ಮೇಲಿದ್ದರೆ ತಗ್ಗಿಗೆ ಇಳಿಯಿರಿ. ಕುರಿ ಮಂದೆ ಅಥವಾ ಜಾನುವಾರುಗಳ ಮಧ್ಯೆ ನಿಂತಿದ್ದರೆ, ಅವುಗಳ ಮಧ್ಯದಲ್ಲಿ ಬಗ್ಗಿ ಕುಳಿತುಕೊಳ್ಳಿ. ಯಾಕೆಂದರೆ ಮಿಂಚು ಪ್ರಾಣಿಗಳಿಗಿಂತ ಎತ್ತರವಿರುವ ಮನುಷ್ಯನನ್ನೇ ಆರಿಸಿಕೊಳ್ಳುತ್ತದೆ. ಕೆರೆಯಲ್ಲಿ ಈಜುವುದು, ಸ್ನಾನ ಮಾಡುವುದು ಬೇಡ, ನೀರಿನಲ್ಲಿದ್ದರೆ ತಕ್ಷಣ ಹೊರಬನ್ನಿ ಎಂದು ಅವರು ತಿಳಿಸಿದ್ದಾರೆ.

ವಿದ್ಯುತ್ ಕಂಬ, ಎಲಕ್ಟಿಕಲ್ ಟವರ್, ಮೊಬೈಲ್ ಟವರ್, ಟ್ರಾನ್ಸ್ ಫಾರ್ಮರ್ ಮುಂತಾದವುಗಳ ಹತ್ತಿರವೂ ಇರಬೇಡಿ. ತಂತಿಬೇಲಿ, ಭಟ್ಟೆ ಒಣಹಾಕುವ ತಂತಿ, ಇವುಗಳಿಂದ ದೂರವಿರಿ. ಮಳೆ ಬರುವ ಸಮಯದಲ್ಲಿ ಮನೆಯ ಟೆರೇಸನ್ನು ಸ್ವಚ್ಛ ಮಾಡುವ ಸಾಹಸ ಬೇಡ. ಮನೆಯ ಕಿಟಕಿಯ ಬಳಿ ನಿಲ್ಲುವುದಕ್ಕಿಂತಲೂ ಮನೆಯ ಮಧ್ಯದಲ್ಲಿರುವುದು ಸುರಕ್ಷಿತ. ಗುಡುಗು-ಸಿಡಿಲಿನ ಸಂದರ್ಭದಲ್ಲಿ ಫೋನ್ ಮಾಡಬೇಡಿ. ಅದನ್ನು ಚಾರ್ಜ್ ಮಾಡುವ ಸಹಸವೂ ಬೇಡ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದರೆ ಗಾಜನ್ನು ಮುಚ್ಚಿಕೊಳ್ಳಿ. ಕಾರಿನ ಬಾಡಿಯನ್ನು ಸಾಧ್ಯವಾದಷ್ಟು ಸ್ಪರ್ಶಿಸದೆ ಮಧ್ಯದಲ್ಲಿ ಕುಳಿತುಕೊಳ್ಳುವುದು ಒಳ್ಳೆಯದು ಎಂದು ಅವರು ತಿಳಿಸಿದ್ದಾರೆ. ಕಂಪ್ಯೂಟರ್‌ಗಳಿಂದ ದೂರ ಇರಿ. ಮನೆಯ ಕಾಂಕ್ರೀಟ್ ಗೋಡೆಗಳನ್ನು ಸ್ಪರ್ಶಿಸದೆ ಕೋಣೆಯ ಮಧ್ಯದಲ್ಲಿದ್ದರೆ ಹೆಚ್ಚು ಸುರಕ್ಷಿತ. "ಸಿಡಿಲು” ಆಪ್ ನ್ನು ಡೌನಲೋಡ ಮಾಡಿಕೊಳ್ಳುವುದರ ಮೂಲಕ ಇದರ ನಿಖರ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ. 

ಅಗತ್ಯವಿದ್ದಲ್ಲಿ ಸಂಪರ್ಕಿಸಿ..!
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆಸ್ಪತ್ರೆ ಹಾಗೂ ಸಮಿಪದ ಪ್ರಾಥಮಿಕ ಆರೋಗ್ಯ ಕೇಂದ್ರ ಸಂಪರ್ಕಿಸಬಹುದು. ಜಿಲ್ಲಾ ವಿಪತ್ತು ನಿರ್ವಾಹಣಾ ಘಟಕ 1077 (ಟೋಲ್ ಫ್ರೀ ನಂ) ಗೆ ಕರೆ ಮಾಡಬಹುದು ಹಾಗೂ ಈ ಎಲ್ಲ ಕ್ರಮಗಳನ್ನು ಕೈಗೊಳ್ಳುವುದರಿಂದ ಮುಂಬರುವ ಬೇಸಿಗೆಯ ಬಿಸಿಲಿನಿಂದ/ಸಿಡಿಲು ಗಾಳಿಯಿಂದ ರಕ್ಷಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

click me!