
ದಾವಣಗೆರೆ (ಸೆ.10): ಸಾಮಾನ್ಯವಾಗಿ ಯುವಕ-ಯುವತಿ ಪಾರ್ಕ್‌ಗೆ ಬಂದು ಪ್ರೀತಿ-ಪ್ರೇಮದ ಮಾತುಗಳನ್ನಾಡುವುದು ಹಾಗೂ ಸರಸ-ಸಲ್ಲಾಪ ಮಾಡುವುದನ್ನು ನೋಡಿದ್ದೇವೆ. ಆದರೆ, ದಾವಣಗೆರೆಯಲ್ಲೊಂದು ಜೋಡಿ, ಪಾರ್ಕ್‌ಗೆ ಜಗಳ ಮಾಡುತ್ತಿರುವ ವಿಡಿಯೋ ಭಾರೀ ವೈರಲ್ ಆಗಿದೆ.
ದಾವಣಗೆರೆ ನಗರದ ಎಂಸಿಸಿ ಬಿ ಬ್ಲಾಕ್‌ನಲ್ಲಿರುವ ವಾಟರ್ ಟ್ಯಾಂಕ್ ಪಾರ್ಕ್‌ನಲ್ಲಿ ಯುವಕ ಮತ್ತು ಯುವತಿ ನಡುವೆ ನಡೆದ ಜಗಳದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಜಗಳಕ್ಕೆ ಹಣಕಾಸಿನ ವಿವಾದವೇ ಕಾರಣ ಎಂದು ಹೇಳಲಾಗಿದೆ.
ಹುಬ್ಬಳ್ಳಿ ಮೂಲದ ಯುವಕನೊಬ್ಬ, ಹರಪನಹಳ್ಳಿ ಮೂಲದ ಯುವತಿಯ ಚಿನ್ನಾಭರಣಗಳನ್ನು ಅಡವಿಟ್ಟು ಖಾಸಗಿ ಬ್ಯಾಂಕಿನಲ್ಲಿ ಸಾಲ ಪಡೆದಿದ್ದ ಎನ್ನಲಾಗಿದೆ. ಯುವಕ ಸಾಲದ ಹಣವನ್ನು ಹಿಂದಿರುಗಿಸಿದ್ದರೂ, ಆ ಹಣ ತನಗೆ ತಲುಪಿಲ್ಲ ಎಂದು ಯುವತಿ ಆರೋಪಿಸಿದ್ದಾಳೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಮಾತುಕತೆ ವಾಗ್ವಾದಕ್ಕೆ ತಿರುಗಿದೆ.
ಇದನ್ನೂ ಓದಿ: ಚನ್ನಗಿರಿಯಲ್ಲಿ ಕಾಣಿಸಿಕೊಂಡ ನಟ ದರ್ಶನ್, ಕಣ್ಮುಂದೆ 'ಡಿ ಬಾಸ್' ನೋಡಿ ಕಣ್ಣಿರು ಹಾಕಿದ ಫ್ಯಾನ್ಸ್!
ಪಾರ್ಕ್‌ನಲ್ಲಿ ಸಾರ್ವಜನಿಕರ ಮುಂದೆಯೇ ಮಾತಿಗೆ ಮಾತು ಬೆಳೆದು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ಯುವಕ ಆಕೆಯ ಕೂದಲನ್ನು ಹಿಡಿದು ಹಲ್ಲೆ ಮಾಡಲು ಯತ್ನಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ದೃಶ್ಯವನ್ನು ಸ್ಥಳೀಯರು ತಮ್ಮ ಮೊಬೈಲ್ ಫೋನ್‌ಗಳಲ್ಲಿ ಸೆರೆ ಹಿಡಿದಿದ್ದು, ಅದು ಈಗ ವ್ಯಾಪಕವಾಗಿ ಹಂಚಿಕೆಯಾಗುತ್ತಿದೆ.
ಈ ಘಟನೆ ದಾವಣಗೆರೆ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದರೂ, ಈವರೆಗೂ ಯಾವುದೇ ದೂರು ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಇಂತಹ ಘಟನೆ ನಡೆದಿದ್ದು, ಕಾನೂನು ಸುವ್ಯವಸ್ಥೆ ಬಗ್ಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.