ಐತಿಹಾಸಿಕ ಆಂಜನೇಯ ದೇವಾಲಯದೊಳಗೆ ಮೂತ್ರ ವಿಸರ್ಜನೆ ಮಾಡಿದ ಮಹಮದ್ ಜಾಫರ್!

Published : Aug 21, 2026, 11:45 AM IST
Haveri Anjaneya temple

ಸಾರಾಂಶ

ಆಂಜನೇಯ ದೇವಾಲಯದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿ ಅನುಚಿತವಾಗಿ ವರ್ತಿಸಿದ್ದಾನೆ. ಈ ಘಟನೆಗೆ ಸಂಬಂಧಿಸಿದಂತೆ ಸ್ಥಳೀಯರ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಘಟನೆಯನ್ನು ಖಂಡಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ.

ಹಾವೇರಿ (ಆ.21): ಶಿಗ್ಗಾವಿ ಪಟ್ಟಣದ ಟೆಂಪೋ ನಿಲ್ದಾಣದ ಬಳಿಯಿರುವ ಐತಿಹಾಸಿಕ ಆಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ ಅನ್ಯಕೋಮಿನ ವ್ಯಕ್ತಿಯೊಬ್ಬ ಅನುಚಿತವಾಗಿ ವರ್ತಿಸಿ ಮೂತ್ರ ವಿಸರ್ಜನೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು, ಸ್ಥಳೀಯರ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಮಹಮದ್ ಜಾಪರ್ ಅಬ್ದುಲ್ ರೆಹಮಾನ್ ಕದರಮಂಡಲಿ ಎಂದು ಗುರುತಿಸಲಾಗಿದೆ.

ಘಟನೆಯ ವಿವರ:

ಬುಧವಾರ ರಾತ್ರಿ ಸುಮಾರು 10 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಶ್ರಾವಣ ಮಾಸದ ಅಂಗವಾಗಿ ದೇವಾಲಯದಲ್ಲಿ ಧಾರ್ಮಿಕ ಪೂಜಾ ಕಾರ್ಯಗಳು ನಡೆಯುತ್ತಿದ್ದ ಸಂದರ್ಭದಲ್ಲಿ ವ್ಯಕ್ತಿ ದೇವಾಲಯದ ಒಳಪ್ರವೇಶಿಸಿ ಅಶಿಸ್ತಿನಿಂದ ವರ್ತಿಸಿದ್ದನ್ನು ಗಮನಿಸಿದ ಸ್ಥಳೀಯರು ಆತನನ್ನು ತಡೆದು ವಿಚಾರಿಸಿದ್ದಾರೆ. ಈ ವೇಳೆ ಆತ ಸ್ಥಳದಿಂದ ತೆರಳಲು ಯತ್ನಿಸಿದಾಗ ಸ್ಥಳೀಯರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಪೊಲೀಸ್ ದೂರು ಹಾಗೂ ಬಂಧನ:

ಈ ಘಟನೆಗೆ ಸಂಬಂಧಿಸಿದಂತೆ ಸಿದ್ದಪ್ಪ ಶಿವಪ್ಪ ಕಾಳೆ ಎಂಬುವರು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದಡಿ ಶಿಗ್ಗಾವಿ ಪೊಲೀಸ್ ಠಾಣೆಗೆ ಅಧಿಕೃತ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ತಕ್ಷಣವೇ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಠಾಣೆ ಎದುರು ಜಮಾಯಿಸಿದ ಸ್ಥಳೀಯರು:

ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ರಾತ್ರಿ ಶಿಗ್ಗಾವಿ ಪೊಲೀಸ್ ಠಾಣೆಯ ಮುಂದೆ ಜಮಾಯಿಸಿ, ಘಟನೆಯನ್ನು ಖಂಡಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಪೊಲೀಸರು ಸ್ಥಳದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದು, ಸಾರ್ವಜನಿಕರು ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.

PREV
Read more Articles on
click me!

Recommended Stories

ಮಂಡ್ಯ: ಸರ್ಕಾರಿ ಆಸ್ಪತ್ರೆಗೆ ವೈದ್ಯರ ನಿಯೋಜನೆ ಮಾಡಿ ಅಂದ್ರೆ, ರೀಲ್ಸ್ ರಾಣಿಯರನ್ನ ಕಳಿಸಿ ಡ್ಯಾನ್ಸ್ ಮಾಡಿಸಿದ ಶಾಸಕ!
ಭಾರತೀಯ ಯುವತಿ ಮದುವೆಯಾದ ಸ್ಕಾಟ್ಲೆಂಡ್‌ ಸಂಸದ! ಇದು ಪ್ರತಿಭಟನೆಯಲ್ಲಿ ಹುಟ್ಟಿದ ರೋಚಕ ಪ್ರೀತಿ!