Koo app:ಏಷ್ಯಾ ಪೆಸಿಫಿಕ್‌ ಹಾಟೆಸ್ಟ್ ಎಮರ್ಜಿಂಗ್ ಡಿಜಿಟಲ್ ಬ್ರಾಂಡ್‌ನಲ್ಲಿ ಸ್ಥಾನ ಪಡೆದ ಬೆಂಗಳೂರಿನ ಕೂ ಆ್ಯಪ್‌!

By Suvarna NewsFirst Published Nov 18, 2021, 7:11 PM IST
Highlights
  • ಬೆಂಗಳೂರು ಮೂಲದ ಕೂ ಆ್ಯಪ್‌ಗೆ ಮತ್ತೊಂದು ಗರಿ
  • ಸ್ವದೇಶಿ ಆ್ಯಪ್‌ಗೆ ಮಾರು ಹೋದ ಜನ, ಪ್ರಬಲ ಸಾಮಾಜಿಕ ಜಾಲತಾಣವಾದ ಕೂ
  • ಏಷ್ಯಾ ಪೆಸಿಫಿಕ್‌ ಹಾಟೆಸ್ಟ್ ಎಮರ್ಜಿಂಗ್ ಡಿಜಿಟಲ್ ಬ್ರಾಂಡ್‌ ಸ್ಥಾನ
     

ಬೆಂಗಳೂರು(ನ.18):  ಟ್ವಿಟರ್(Twitter) ಸಾಮಾಜಿಕ ಜಾಲತಾಣಕ್ಕೆ(Social Media) ಪರ್ಯಾಯವಾಗಿ ಹುಟ್ಟಿಕೊಂಡ ಕೂ ಆ್ಯಪ್‌ಗೆ)Koo App)  ಮಹತ್ವದ ಮೈಲಿಗಲ್ಲು ನಿರ್ಮಿಸಿದೆ. ಆ್ಯಂಪ್ಲಿಟ್ಯೂಡ್ ಉತ್ಪನ್ನ  ವರದಿ 2021ರಲ್ಲಿ ಬೆಂಗಳೂರು ಮೂಲದ ಕೂ ಆ್ಯಪ್, ಏಷ್ಯಾ ಪೆಸಿಫಿಕ್‌ ಹಾಟೆಸ್ಟ್ ಎಮರ್ಜಿಂಗ್ ಡಿಜಿಟಲ್ ಬ್ರಾಂಡ್‌ಗಳಲ್ಲಿ ಸ್ಥಾನ ಪಡೆದಿದೆ.  APAC, US ಮತ್ತು EMEA ವಲಯದಾದ್ಯಂತ ಪ್ರತಿಷ್ಠಿತ ವರದಿಯಲ್ಲಿ ಸ್ಥಾನ ಪಡೆದ ಏಕೈಕ ಸಾಮಾಜಿಕ ಮಾಧ್ಯಮ ಇದಾಗಿದೆ. ಭಾರತದಿಂದ ಉಲ್ಲೇಖಿಸಲ್ಪಟ್ಟ ಕೇವಲ ಎರಡು ಬ್ರಾಂಡ್‌ಗಳಲ್ಲಿ ಕೂ ಕೂಡ ಒಂದಾಗಿದೆ (CoinDCX ಇನ್ನೊಂದು).

ಆಂಪ್ಲಿಟ್ಯೂಡ್‌ನ(Amplitude) ಬಿಹೇವಿಯರಲ್ ನಕ್ಷೆಯು, ಡಿಜಿಟಲ್(Digital) ಕ್ರಿಯಾಶೀಲತೆ ರೂಪಿಸುವ ಭವಿಷ್ಯದ ಹಾಟೆಸ್ಟ್ ಡಿಜಿಟಲ್ ಉತ್ಪನ್ನಗಳ(Hottest Emerging Digital Brands) ಕುರಿತು ಮಾಹಿತಿ ನೀಡುತ್ತದೆ. ವರದಿಯಲ್ಲಿ, 'ವಿಶಿಷ್ಟ ಪ್ರತ್ಯೇಕತೆಯನ್ನು ಹೊಂದಿರುವ ಸಾಮಾಜಿಕ ಜಾಲತಾಣ ವೇದಿಕೆ ಕೂ ಆ್ಯಪ್ ಭಾರತೀಯ ಬಳಕೆದಾರರನ್ನು ಗಮನದಲ್ಲಿ ಇರಿಸಿಕೊಂಡು ರೂಪಿಸಲಾಗಿದೆ' ಎಂದು ವಿವರಿಸಲಾಗಿದೆ.  ತಮ್ಮ ಮಾತೃಭಾಷೆಯಲ್ಲಿಯೇ ಮನದಾಳವನ್ನು ವ್ಯಕ್ತಪಡಿಸಲು ಅನುವು ಮಾಡಿಕೊಡುವ 'ಕೂ' ವೇದಿಕೆಯು 100 ಕೋಟಿಗೂ ಹೆಚ್ಚು ಬಳಕೆದಾರರ ಆಯ್ಕೆಯ ಸಾಮಾಜಿಕ ಮಾಧ್ಯಮ ವೇದಿಕೆಯಾಗಿದೆ ಎಂದು ವರದಿಯಲ್ಲಿದೆ.

ಕನ್ನಡಿಗರೊಂದಿಗೆ ಕನ್ನಡದಲ್ಲಿ ಸಂವಾದ ನಡೆಸಲು ಕೂ ಖಾತೆ ತೆರೆದ ಕರ್ನಾಟಕ ಬಿಜೆಪಿ!

ಜನರು ತಮ್ಮದೇ ಸ್ಥಳೀಯ ಭಾಷೆಗಳಲ್ಲಿ ಅಭಿಪ್ರಾಯ ವ್ಯಕ್ತಪಡಿಸಲು(multi-lingual micro-blogging platform) ಅವಕಾಶ ಮಾಡಿಕೊಡುವ ಮೇಡ್-ಇನ್-ಇಂಡಿಯಾ(Made In India) ಪ್ಲಾಟ್‌ಫಾರ್ಮ್‌ ಕೂ,  ಅಪ್ಲಿಕೇಶನ್ ಮಾರ್ಚ್ 2020 ರಲ್ಲಿ ಪ್ರಾರಂಭವಾಯಿತು.  ನಂತರದ  20 ತಿಂಗಳ ಅಲ್ಪಾವಧಿಯಲ್ಲಿ 1.5 ಕೋಟಿ ಬಳಕೆದಾರರನ್ನು ಗಳಿಸಿಕೊಂಡಿರುವುದಲ್ಲದೇ, 9 ಭಾರತೀಯ ಭಾಷೆಗಳಲ್ಲಿ ಸೇವೆ ಒದಗಿಸುತ್ತಿದೆ. ಬಲಿಷ್ಠ ತಂತ್ರಜ್ಞಾನ,  ಅನುವಾದದ ಅವಕಾಶ ಮುಂತಾದ ವಿಶಿಷ್ಟ ಆಯ್ಕೆ‌ಗಳನ್ನು ಬಳಕೆದಾರರಿಗೆ ಒದಗಿಸಿದ್ದು, ಮುಂದಿನ ಒಂದು ವರ್ಷದಲ್ಲಿ ಕೂ 10 ಕೋಟಿ  ಡೌನ್‌ಲೋಡ್‌ಗಳನ್ನು ದಾಟುವ ನಿರೀಕ್ಷೆಯಿದೆ.

ಈ ಗೌರವಾನ್ವಿತ ಜಾಗತಿಕ ವರದಿಯಲ್ಲಿ  ಕೂ ಅಪ್ಲಿಕೇಶನ್ ಅನ್ನು ಗುರುತಿಸಿರುವುದು, APAC ನ ಟಾಪ್ 5 ಹಾಟೆಸ್ಟ್ ಡಿಜಿಟಲ್ ಉತ್ಪನ್ನಗಳಲ್ಲಿ ಕೂ ಒಂದಾಗಿರುವುದು ಹೆಮ್ಮೆಯ ವಿಷಯ. ಭಾರತದಿಂದ ಗುರುತಿಸಿರುವ  ಏಕೈಕ ಸಾಮಾಜಿಕ ಮಾಧ್ಯಮ ಆಗಿದ್ದೇವೆ. ಭಾರತದಿಂದ, ವಿಶ್ವಕ್ಕಾಗಿ ನಿರ್ಮಿಸಲಾಗುತ್ತಿರುವ ಬ್ರ್ಯಾಂಡ್‌ ಆದ ನಮಗೆ ಇದೊಂದು ಗಮನಾರ್ಹ ಸಾಧನೆಯಾಗಿದೆ. ಆಂಪ್ಲಿಟ್ಯೂಡ್‌ನ ಈ ವರದಿಯು ಡಿಜಿಟಲ್ ಜಗತ್ತಿನಲ್ಲಿ ಭಾಷಾ ಅಡೆತಡೆಗಳನ್ನು ಅಳಿಸಲು, ಸಂಸ್ಕೃತಿ ಮತ್ತು ಭಾಷಾ ವೈವಿಧ್ಯತೆಯ ನಡುವೆಯೂ ಜನರು ಪರಸ್ಪರ ಸಂಪರ್ಕಿಸಲು ಇನ್ನಷ್ಟು ಶ್ರಮಿಸುವಂತೆ ನಮ್ಮನ್ನು ಪ್ರೇರೇಪಿಸುತ್ತದೆ' ಎಂದು  ಕೂ ಸಹ-ಸಂಸ್ಥಾಪಕ ಮತ್ತು ಸಿಇಒ, ಅಪ್ರಮೇಯ ರಾಧಾಕೃಷ್ಣ ಹೇಳಿದ್ದಾರೆ.

ಕೂ ಆ್ಯಪ್ ಸೇರಿದ 15 ದಿನಗಳಲ್ಲೇ 1 ಲಕ್ಷ ಫಾಲೋವರ್ಸ್ ಪಡೆದ ಸೆಹ್ವಾಗ್ !

ಆಂಪ್ಲಿಟ್ಯೂಡ್ ಎಂಬುದು ಕ್ಯಾಲಿಫೋರ್ನಿಯಾ ಮೂಲದ ಉತ್ಪನ್ನ ವಿಶ್ಲೇಷಣೆ ಮತ್ತು ಡಿಜಿಟಲ್ ಆಪ್ಟಿಮೈಸೇಶನ್ ಸಂಸ್ಥೆಯಾಗಿದೆ. ಈ ವರದಿಯು 'ಶೀಘ್ರವಾಗಿ ಬೆಳೆಯುತ್ತಿರುವ ಉತ್ಪನ್ನಗಳನ್ನು' ಆಯ್ಕೆ ಮಾಡುತ್ತದೆ.  'ಭವಿಷ್ಯದ ಜನಪ್ರಿಯ ಕಂಪನಿ’ಗಳನ್ನು ಗುರುತಿಸಲು ತಿಂಗಳ ಬಳಕೆದಾರರ ದತ್ತಾಂಶವನ್ನು ಇದು ವಿಶ್ಲೇಷಿಸುತ್ತದೆ. ಅತ್ಯುತ್ತಮ ಡಿಜಿಟಲ್ ಅನುಭವವನ್ನು ಒದಗಿಸುವ ಕಂಪನಿಗಳ ತಿಂಗಳ ಬಳಕೆದಾರರ ಹೆಚ್ಚಳವನ್ನು ಪರಿಗಣಿಸಿ ಆಂಪ್ಲಿಟ್ಯೂಡ್ ವರದಿಗಳನ್ನು ನೀಡುತ್ತದೆ. ಜೂನ್ 2020 ರಿಂದ ಜೂನ್ 2021 ರವರೆಗಿನ ಒಟ್ಟು 13-ತಿಂಗಳ ಅವಧಿಯಲ್ಲಿ ಸಕ್ರಿಯ ಬಳಕೆದಾರರ ಒಟ್ಟು ಸಂಖ್ಯೆಯಲ್ಲಿ ಕ್ಷಿಪ್ರ ಬೆಳವಣಿಗೆಯನ್ನು ಗುರುತಿಸಿ  ಕೂ ಅಪ್ಲಿಕೇಶನ್ ಅನ್ನು ಈ ವರದಿಯಲ್ಲಿ ಉಲ್ಲೇಖಿಸಲಾಗಿದೆ. 

 

ಕೂ ಬಗ್ಗೆ:  ಕೂ ಮಾರ್ಚ್ 2020 ರಲ್ಲಿ ಭಾರತೀಯ ಭಾಷೆಗಳನ್ನೊಳಗೊಂಡ ಮೈಕ್ರೋ-ಬ್ಲಾಗಿಂಗ್ ವೇದಿಕೆಯಾಗಿ ಸ್ಥಾಪಿತವಾಯಿತು, ಇದು ಅನೇಕ ಭಾರತೀಯ ಭಾಷೆಗಳಲ್ಲಿ ಲಭ್ಯವಿದೆ. ಇಲ್ಲಿ ಭಾರತದ ವಿವಿಧ ಪ್ರದೇಶಗಳ ಜನರು ತಮ್ಮ ಮಾತೃಭಾಷೆಯಲ್ಲಿಯೇ ತಮ್ಮ ಮನದಾಳವನ್ನು ವ್ಯಕ್ತಪಡಿಸಿಕೊಳ್ಳಬಹುದು. ಕೇವಲ 10% ಜನರು ಇಂಗ್ಲಿಷ್ ಮಾತನಾಡುವ ಭಾರತ ದೇಶದಲ್ಲಿ, ಭಾರತೀಯ ಬಳಕೆದಾರರಿಗೆ ಮನಮುಟ್ಟುವಂತೆ ಭಾಷಾ ಅನುಭವಗಳನ್ನು ತಲುಪಿಸಬಲ್ಲ ಮತ್ತು ಪರಸ್ಪರ ಸಂಪರ್ಕ ಸಾಧಿಸಲು ಸಹಾಯ ಮಾಡುವ ಸಾಮಾಜಿಕ ಜಾಲತಾಣ ವೇದಿಕೆ ಅತ್ಯವಶ್ಯವಾಗಿದೆ. ಭಾರತೀಯ ಭಾಷೆಗಳಿಗೆ ಆದ್ಯತೆ ನೀಡುವ ಭಾರತೀಯರ ಧ್ವನಿಗಳಿಗೆ ಕೂ ಒಂದು ವೇದಿಕೆಯನ್ನು ಒದಗಿಸುತ್ತದೆ.
 

click me!