
ಮಂಡಿ(ಜ.04): ದೇಶದಲ್ಲಿ ಹಲವು ಸಂಶೋಧನೆಗಳಾಗುತ್ತಿದೆ. ಈ ಮೂಲಕ ಭಾರತ ಇದೀಗ ಸಂಶೋಧನೆಯಲ್ಲಿ ಮುಂಚೂಣಿಯಲ್ಲಿದೆ. ಇದೀಗ ಹಿಮಾಚಲ ಪ್ರದೇಶದ ಮಂಡಿಯಲ್ಲಿರುವ ಐಐಟಿ ಸಂಸ್ಥೆಯ ಸಂಶೋಧಕ ವಿದ್ಯುತ್ ಉತ್ಪಾದಿಸುವ ರಸ್ತೆ ಅಭಿವೃದ್ಧಿ ಪಡಿಸಿದ್ದಾನೆ. ಈ ರಸ್ತೆಯಲ್ಲಿ ನಡೆದರೆ ಸಾಕು ವಿದ್ಯುತ್ ಉತ್ಪಾದನೆಯಾಗಲಿದೆ.
iPhone ನಿಂದ iCar:ಬರುತ್ತಿದೆ ಅತ್ಯಾಧುನಿಕ ತಂತ್ರಜ್ಞಾನದ Apple ಎಲೆಕ್ಟ್ರಿಕ್ ಕಾರು!..
ಪೀಜೋಎಲೆಕ್ಟ್ರಿಕ್ ವಸ್ತುಗಳನ್ನು ಒಳಗೊಂಡಿರುವ ರಸ್ತೆಯಲ್ಲಿ ನಡೆದಾಗ ಯಾಂತ್ರಿಕ ಶಕ್ತಿ ಮತ್ತು ವಿದ್ಯುತ್ ಶಕ್ತಿಯನ್ನು ಪರಿವರ್ತಿಸುವ ಸಾಮರ್ಥ್ಯ ಹೊಂದಿದೆ. ಈ ತಂತ್ರಜ್ಞಾನವನ್ನು ಬಳಸಿಸಿಕೊಂಡು ರಸ್ತೆ ಅಭಿವೃದ್ಧಿ ಮಾಡಲಾಗಿದ್ದು, ಈ ರಸ್ತೆಯಲ್ಲಿ ನಡೆದಾಗ ಒತ್ತಡದಿಂದ ವಿದ್ಯುತ್ ಉತ್ಪಾದನೆಯಾಗಲಿದೆ. ಈ ಸಂಶೋಧನೆಗೆ ಇದೀಗ ಎಲ್ಲರ ಗಮನಸೆಳೆದಿದೆ.
ಈ ರಸ್ತೆಯಿಂದ ಯಾವುದೇ ಅಪಾಯವಿಲ್ಲ. ಇನ್ನು ಪದಾಚಾರಿಗಳ ನಡೆಯುವ ದಾರಿಯಲ್ಲಿ ಈ ರೀತಿ ರಸ್ತೆ ಅಭಿವೃದ್ಧಿ ಪಡಿಸಿದರೆ ವಿದ್ಯುತ್ ಉತ್ಪಾದನೆಯಾಗಲಿದೆ. ಇದು ಪರಿಸರಕ್ಕೂ ಪೂರಕವಾಗಿರುವ ಕಾರಣ ದೇಶ ಎದುರಿಸುತ್ತಿರುವ ಹಲವು ಸಮಸ್ಯೆಗಳನ್ನು ನಿವಾರಿಸಬಹುದು ಎಂದು ಸಂಶೋಧನಾ ತಂಡದ ಮುಖ್ಯಸ್ಥ ಡಾ. ರಾಹುಲ್ ವೈಶ್ ಹೇಳಿದ್ದಾರೆ.
ಸ್ಮಾರ್ಟ್‌ಫೋನ್‌ಗಳು ಮತ್ತು AI ನಿಂದ ಸೈಬರ್ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್‌ಡೇಟ್. ಡಿಜಿಟಲ್ ಟ್ರೆಂಡ್‌ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್ ಸಿಗುವ ಏಕೈಕ ತಾಣ ಏಷ್ಯಾನೆಟ್ ಸುವರ್ಣ ನ್ಯೂಸ್. ಹೊಸ ಗ್ಯಾಜೆಟ್ ರಿಲೀಸ್ ಆಯ್ತಾ? ಹೊಸ ಸ್ಟಾರ್ಟ್‌ಅಪ್‌ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್ ಎಕ್ಸ್‌ಪ್ಲೇನರ್ಸ್ ಹಾಗೂ ಗ್ಯಾಜೆಟ್ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.