
ತಿರುಪತಿ[ಫೆ.07]: ಆಂಧ್ರಪ್ರದೇಶದ ಪ್ರಸಿದ್ಧ ತಿರುಮಲ ತಿರುಪತಿ ದೇವಸ್ಥಾನಂ(ಟಿಟಿಡಿ)ಗೆ ಟಿಟಿಡಿ ಹೆಸರಿನಲ್ಲಿ ಭಕ್ತಾದಿಗಳಿಗೆ ವಂಚಿಸುತ್ತಿರುವ ನಕಲಿ ವೆಬ್‌ಸೈಟ್‌ಗಳ ಜಾಲ ಸಮಸ್ಯೆ ಹೊಸ ಮತ್ತ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಇಂಥ 19 ನಕಲಿ ವೆಬ್‌ಸೈಟ್ ಜಾಲಗಳನ್ನು ಭೇದಿಸಿರುವ ಟಿಟಿಡಿಯ ಭದ್ರತಾ ಘಟಕ, ಈ ಸಂಬಂಧ ದೂರು ದಾಖಲಿಸಿದೆ. ಅಲ್ಲದೆ, ನಕಲಿ ವೆಬ್‌ಸೈಟ್‌ಗಳ ತಡೆಗೆ ದೇವಸ್ಥಾನದ ಆಡಳಿತ ಮಂಡಳಿ ಅಗತ್ಯ ಕ್ರಮಗಳನ್ನು ಕೈಗೊಂಡಿದೆ.
ತಿರುಪತಿಗೆ ಹೋಗುವ ಪ್ರತಿ ಭಕ್ತರಿಗೂ 1 ಉಚಿತ ಲಡ್ಡು!
ಈ ನಕಲಿ ವೆಬ್‌ಸೈಟ್‌ಗಳಲ್ಲಿ ಭಕ್ತಾದಿಗಳಿಗೆ 300 ರು.ಗೆ ವಿಶೇಷ ದರ್ಶನ, ಸೇವೆಗಳು ಹಾಗೂ ವಸತಿ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ ಎಂದು ಆಮಿಷವೊಡ್ಡಿ ವಂಚಿಸಲಾಗುತ್ತಿದೆ. ಈ ಬಗ್ಗೆ ಭಕ್ತರ ದೂರಿನ ಹಿನ್ನೆಲೆ ಟಿಟಿಡಿ ಈ ಕ್ರಮ ಕೈಗೊಂಡಿದೆ.
ತಿಮ್ಮಪ್ಪನ ದೇವಾಲಯದ ಮೇಲೆ ವಿಮಾನ ಹಾರಾಟ: ಆತಂಕ, ಟಿಟಿಡಿ ಆಕ್ಷೇಪ
ವಿಶ್ವವಿಖ್ಯಾತ ಶ್ರೀ ವೆಂಕಟೇಶ್ವರ ದೇವಾಲಯದ ಮೇಲೆ ಎರಡು ದಿನಗಳ ಹಿಂದೆ ಖಾಸಗಿ ವಿಮಾನವೊಂದು ಹಾರಾಟ ನಡೆಸಿದ್ದು, ಆತಂಕಕ್ಕೆ ಕಾರಣವಾಗಿತ್ತು. ಬಳಿಕ ಅದು ಸರ್ವೇ ಆಫ್ ಇಂಡಿಯಾಕ್ಕೆ ಸಂಬಂಧಿಸಿದ ವಿಮಾನ ಎಂಬುದು ತಿಳಿದುಬಂದಿದೆ.
ಸಹೋದ್ಯೋಗಿ ಜತೆ ‘ಸರಸ ಸಲ್ಲಾಪದ ಮಾತು’: TTD ಚಾನೆಲ್ ಮುಖ್ಯಸ್ಥ ರಾಜೀನಾಮೆ!
ಫೆಬ್ರವರಿ 6ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಸ್ಮಾರ್ಟ್‌ಫೋನ್‌ಗಳು ಮತ್ತು AI ನಿಂದ ಸೈಬರ್ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್‌ಡೇಟ್. ಡಿಜಿಟಲ್ ಟ್ರೆಂಡ್‌ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್ ಸಿಗುವ ಏಕೈಕ ತಾಣ ಏಷ್ಯಾನೆಟ್ ಸುವರ್ಣ ನ್ಯೂಸ್. ಹೊಸ ಗ್ಯಾಜೆಟ್ ರಿಲೀಸ್ ಆಯ್ತಾ? ಹೊಸ ಸ್ಟಾರ್ಟ್‌ಅಪ್‌ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್ ಎಕ್ಸ್‌ಪ್ಲೇನರ್ಸ್ ಹಾಗೂ ಗ್ಯಾಜೆಟ್ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.