ಸ್ಮಾರ್ಟ್‌ಫೋನ್ ಆಯ್ತು, ಇನ್ನು ಶಿಯೋಮಿಯಿಂದಲೂ ಎಲೆಕ್ಟ್ರಿಕ್ ವೆಹಿಕಲ್?

Suvarna News   | Asianet News
Published : Mar 27, 2021, 05:44 PM IST
ಸ್ಮಾರ್ಟ್‌ಫೋನ್ ಆಯ್ತು, ಇನ್ನು ಶಿಯೋಮಿಯಿಂದಲೂ ಎಲೆಕ್ಟ್ರಿಕ್ ವೆಹಿಕಲ್?

ಸಾರಾಂಶ

ಚೀನಾ ಮೂಲದ ಸ್ಮಾರ್ಟ್‌ಫೋನ್ ತಯಾರಿಕಾ ಕಂಪನಿ ಶಿಯೋಮಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗೆ ಮುಂದಾಗಲಿದೆಯಾ? ಇಂಥದೊಂದು ಪ್ರಶ್ನೆ ಮೂಡಲು ಕಾರಣವಿದೆ. ಸುದ್ದಿ ಸಂಸ್ಥೆಯೊಂದು ವರದಿ ಮಾಡಿರುವ ಪ್ರಕಾರ, ಶಿಯೋಮಿ, ಗ್ರೇಟ್ ವಾಲ್ ಕಂಪನಿ ಜತೆಗೂಡಿ ಎಲೆಕ್ಟ್ರಿಕ್ ವಾಹನಗಳನ್ನು ಉತ್ಪಾದಿಸಿ, ತನ್ನದೇ ಬ್ರ್ಯಾಂಡ್ ಹೆಸರಿನಡಿ ಮಾರಾಟ ಮಾಡಲಿದೆ. ಆದರೆ, ಈ ಬಗ್ಗೆ ಕಂಪನಿ  ಯಾವುದೇ ಅಧಿಕೃತ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ.

ಆಪಲ್ ಮತ್ತು ಶಿಯೋಮಿ ಕಂಪನಿಗಳೆರಡೂ ಅತ್ಯಾಧುನಿಕ ಸ್ಮಾರ್ಟ್‌ಫೋನ್‌ ಉತ್ಪಾದನೆ ಮೂಲಕ ಮಾರುಕಟ್ಟೆಯಲ್ಲಿ  ತಮ್ಮ ಪ್ರಭಾವವನ್ನು ಹೊಂದಿವೆ. ಆದರೆ, ಎರಡೂ ಕಂಪನಿಗಳು ತಮ್ಮ ಉತ್ಪನ್ನವನ್ನು ಬದಲಾಯಿಸುತ್ತಿವೆಯೇ ಎಂಬ ಅನುಮಾನ ಮೂಡುತ್ತಿದೆ.

ಇದಕ್ಕೆ ಕಾರಣವೂ ಇದಕ್ಕೆ, ಇತ್ತೀಚೆಗಷ್ಟೇ ಆಪಲ್ ಕಂಪನಿ ಎಲೆಕ್ಟ್ರಿಕ್ ಕಾರು ಉತ್ಪಾದನೆ ಮೇಲೆ ಗಮನ ಕೇಂದ್ರೀಕರಿಸುವುದಾಗಿ ಹೇಳಿಕೊಂಡಿತ್ತು. ಇದೀಗ ಚೀನಾ ಮೂಲದ ಮತ್ತೊಂದು ಸ್ಮಾರ್ಟ್‌ಫೋನ್ ಉತ್ಪಾದನಾ ಕಂಪನಿಯಾಗಿರುವ ಶಿಯೋಮಿ ಕೂಡ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗಳಿಯುವ ಬಗ್ಗೆ ಹೇಳಿಕೊಂಡಿದೆ. ಈ ಬಗ್ಗೆ ರಾಯಿಟರ್ಸ್ ಸುದ್ದಿ ಸಂಸ್ಥೆ ಮಾಡಿರುವ ಸುದ್ದಿಯನ್ನು ಉಲ್ಲೇಖಿಸಿ ಹಲವು ಸುದ್ದಿತಾಣಗಳು ವರದಿ ಮಾಡಿವೆ.

4.10 ಕೋಟಿ ರೂ. ಬೆಲೆಯ ಬೆಂಟಗಾ ಐಷಾರಾಮಿ ಎಸ್‌ಯುವಿ ಭಾರತದಲ್ಲಿ ಬಿಡುಗಡೆ

ಶಿಯೋಮಿ ಕಂಪನಿಯು ಗ್ರೇಟ್ ವಾಲ್ ಮೋಟಾರ್ ಕಂಪನಿ ಲಿ. ಫ್ಯಾಕ್ಟರಿ ಬಳಸಿಕೊಂಡು ಎಲೆಕ್ಟ್ರಿಕ್ ವಾಹನಗಳನ್ನು ಉತ್ಪಾದನೆ ಮಾಡಿ ಮಾರಾಟ ಮಾಡಲಿದೆ. ಈ ವಿಷಯಕ್ಕೆ ಸಂಬಂಧಿಸಿದ ಮೂವರು ಈ ಮಾಹಿತಿಯನ್ನು ಖಚಿತಪಡಿಸಿದ್ದಾರೆಂದು ವರದಿಯಲ್ಲಿ ತಿಳಿಸಲಾಗಿದೆ.

ವರದಿಯ ಪ್ರಕಾರ, ಮುಂದಿನವಾರದ ಹೊತ್ತಿಗೆ ಈ ಜಂಟಿ ಸಹಭಾಗಿತ್ವದ ಬಗ್ಗೆ ಘೋಷಣೆಯಾಗುವ ಸಾಧ್ಯತೆ ಇದೆ. ಜಂಟಿ ಸಹಭಾಗಿತ್ವದಲ್ಲಿ ಎಲೆಕ್ಟ್ರಿಕ್ ಕಾರುಗಳನ್ನು ಉತ್ಪಾದಿಸಿ, ಶಿಯೋಮಿ  ಬ್ರ್ಯಾಂಡ್ ಹೆಸರಲ್ಲಿ ಮಾರಾಟ ಮಾಡಲಾಗುತ್ತದೆ. ಅಂದರೆ ಎಲೆಕ್ಟ್ರಿಕ್ ಕಾರ್ ಎಂಬುದು ಶಿಯೋಮಿಯ ಇನ್ನೊಂದು ಉತ್ಪನ್ನ ರೀತಿಯಲ್ಲಿ ಮಾರಾಟ ಮಾಡಲಾಗುತ್ತಿದೆ. ಈಗಾಗಲೇ ಶಿಯೋಮಿ ಭಾರತವು ಸೇರಿದಂತೆ ಜಗತ್ತಿನ ಪ್ರಮುಖ ಸ್ಮಾರ್ಟ್‌ಫೋನ್‌ಗಳಲ್ಲಿ ಜಬರ್ದಸ್ತ್ ಪಾಲು ಹೊಂದಿದೆ. ಇದೀಗ ಎಲೆಕ್ಟ್ರಿಕ್ ವಾಹನ  ಕ್ಷೇತ್ರವು ಹೊಸ ಗ್ರಾಹಕರನ್ನು ಸೆಳೆಯುವತ್ತ ಯಶಸ್ವಿಯಾಗುತ್ತಿದೆ. ಈ ಅವಕಾಶವನ್ನು ಬಳಸಿಕೊಳ್ಳಲು ಶಿಯೋಮಿ ಮುಂದಾಗಿದೆ ಎಂದು ವಿಶ್ಲೇಷಿಸಬಹುದಾಗಿದೆ.

ಗ್ರೇಟ್ ವಾಲ್ ಕಂಪನಿ ಈ ಮೊದಲು ಯಾವುದೇ ಕಂಪನಿಗೆ ತನ್ನ ಸೇವೆಯನ್ನು ಒದಗಿಸಿಲ್ಲ. ಅದು ಈಗ ಶಿಯೋಮಿ ಕಂಪನಿಗೆ ಎಂಜಿನಿಯರಿಂಗ್ ಸೇವೆಯನ್ನು ಒದಗಿಸಲು ಮುಂದಾಗಿದೆ. ಇಷ್ಟಾಗಿಯೂ ಗ್ರೇಟ್ ವಾಲ್ ಕಂಪನಿ ಆಗಲಿ, ಚೀನಾ ಮೂಲದ ಶಿಯೋಮಿಯಾಗಲಿ ಈ ಪ್ರಾಜೆಕ್ಟ್ ಬಗ್ಗೆ ಯಾವುದೇ ರೀತಿಯ ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿಲ್ಲ ಎಂಬದನ್ನು ಗಮನಿಸಬೇಕು.

ಪೆಟ್ರೋಲ್, ಡೀಸೆಲ್ ವಾಹನ ಯುಗ ಮುಕ್ತಾಯ? ಎಲೆಕ್ಟ್ರಿಕ್ ವಾಹನಗಳ ಭರಾಟೆ ಶುರು

ಈಗಾಗಲೇ ಜಗತ್ತಿನ ಪ್ರಮುಖ ಸ್ಮಾರ್ಟ್‌ಫೋನ್ ತಯಾರಿಕಾ ಕಂಪನಿಯಾಗಿರುವ ಆಪಲ್ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಬಗ್ಗೆ ಹೇಳಿಕೊಂಡಿತ್ತು. ಅದರ ಬೆನ್ನಲ್ಲೇ ಇದೀಗ ಶಿಯೋಮಿ ಕೂಡ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗೆ ಮುಂದಾಗಿದೆ. ಬಹುಶಃ ಇದೇ ಟ್ರೆಂಡ್ ಮುಂದುವರಿದರೆ ಇನ್ನೂ ಒಂದಿಷ್ಟು ಸ್ಮಾರ್ಟ್‌ಫೋನ್ ಕಂಪನಿಗಳು ಎಲೆಕ್ಟ್ರಿಕ್ ವಾಹನಗಳ ಉತ್ಪಾದನಾ ಕ್ಷೇತ್ರಕ್ಕೆ ಮುಂದಡಿಯಿಡಬಹುದು.

ಈಗಾಗಲೇ ನಿಮಗೆ ಗೊತ್ತಿರುವಂತೆ ಆಪಲ್ ಕಂಪನಿ ಕೂಡ ಈ ಆಟೋಮೇಟಿವ್ ವಲಯದಲ್ಲಿ ತನ್ನ ಅದೃಷ್ಟ ಪರೀಕ್ಷೆಗೆ ಮುಂದಾಗಲಿದೆ. ತನ್ನದೇ ಆದ ವಾಹನವನ್ನು ವಿನ್ಯಾಸಗೊಳಿಸುವ ನಿಟ್ಟಿನಲ್ಲಿ ಆಪಲ್ 2014ರಿಂದಲೇ ಟೈಟನ್ ಎಂಬ ಪ್ರಾಜೆಕ್ಟ್ ಆರಂಭಿಸಿದ್ದನ್ನು ನೀವು ಓದಿರುತ್ತೀರಿ.

ಆದರೆ, ಆಪಲ್‌ನ ಈ ಪ್ರಾಜೆಕ್ಟ್ ಪಯಣ ಅಷ್ಟೇನೂ ಸುಲಭವಾಗಲಿಲ್ಲ. ಎಲೆಕ್ಟ್ರಿಕ್ ವಾಹನ ಉತ್ಪಾದನೆಯ ಗುರಿಯನ್ನು ಬದಗಿಟ್ಟು ತನ್ನ ಎಂದಿನ ಸಾಫ್ಟ್‌ವೇರ್ ವ್ಯವಹಾರದಲ್ಲಿ ತೊಡಗಿಕೊಂಡಿತ್ತು. ಆದರೆ, 2018ರಲ್ಲಿ ಆಪಲ್ ಮತ್ತೆ ತನ್ನ ಈ ಪ್ರಾಜೆಕ್ಟ್‌ಗೆ ಜೀವ ನೀಡಲು ನಿರ್ಧರಿಸಿತು ಮತ್ತು ಟೆಸ್ಲಾ ಕಂಪನಿಯ ಕೆಲವು ಸಿಬ್ಬಂದಿಯನ್ನು ನೇಮಕ ಮಾಡಿಕೊಂಡಿತ್ತು. ಆ ಮೂಲಕ ತನ್ನ ಹಳೆಯ ಪ್ರಾಜೆಕ್ಟ್ ಅನ್ನು ಮತ್ತೆ ಮುಂದುವರಿಸಿತು ಎಂದು ಹೇಳಬಹುದು. ಈಗ ಆಪಲ್ ಹಾಕಿಕೊಂಡಿರುವ ಯೋಜನೆ ಪ್ರಕಾರ, ಅದು 2024ರ ಹೊತ್ತಿಗೆ  ಪ್ರಯಾಣಿಕರ ವಾಹನವನ್ನ ಉತ್ಪಾದಿಸುವ ಗುರಿಯನ್ನು ಹಾಕಿಕೊಂಡಿದೆ ಎನ್ನಲಾಗುತ್ತಿದೆ.

ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಿದರೆ 1 ಲಕ್ಷ ರೂಪಾಯಿ ಸಬ್ಸಿಡಿ!

ಈಗ ಶಿಯೋಮಿ ಕೂಡ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗೆ ಮುಂದಾಗಿರುವ ಸಾಧ್ಯತೆ ಇರುವುದರಿಂದ ಬಹುತೇಕ ಈ ಎರಡೂ ಕಂಪನಿಗಳು ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯಲ್ಲಿ ಪರಸ್ಪರ ಪೈಪೋಟಿಗೆ ಇಳಿಯಬಹುದು.

PREV

ಸ್ಮಾರ್ಟ್‌ಫೋನ್‌ಗಳು ಮತ್ತು AI ನಿಂದ ಸೈಬರ್‌ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್‌ಡೇಟ್‌. ಡಿಜಿಟಲ್ ಟ್ರೆಂಡ್‌ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್‌ ಸಿಗುವ ಏಕೈಕ ತಾಣ ಏಷ್ಯಾನೆಟ್‌ ಸುವರ್ಣ ನ್ಯೂಸ್‌. ಹೊಸ ಗ್ಯಾಜೆಟ್‌ ರಿಲೀಸ್‌ ಆಯ್ತಾ? ಹೊಸ ಸ್ಟಾರ್ಟ್‌ಅಪ್‌ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್‌ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್‌ ಎಕ್ಸ್‌ಪ್ಲೇನರ್ಸ್‌ ಹಾಗೂ ಗ್ಯಾಜೆಟ್‌ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.

click me!

Recommended Stories

Elon Musk’s Bold Forecast: ಪವರ್ ಪಾಯಿಂಟ್: 20 ವರ್ಷ ಬಳಿಕ ನೀವು ಬೇಕಿದ್ದರೆ ಕೆಲಸ ಮಾಡಬಹುದು! -ಎಲಾನ್ ಮಸ್ಕ್
ವ್ಯಾಟ್ಸಾಪ್‌ಗೆ ಠಕ್ಕರ್, ಚಾಟ್‌ಜಿಪಿಟಿಯಿಂದ ಗ್ರೂಪ್ ಚಾಟ್ ಫೀಚರ್ ಲಾಂಚ್, ಬಳಕೆ ಹೇಗೆ?