
ಬೆಂಗಳೂರು(ಮಾ.05): 48ನೇ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ಮಹಿಳಾ ಪ್ರವಾಸಿಗರಿಗೆ ವಿಶೇಷ ಕೊಡುಗೆ ಪ್ರಕಟಿಸಿದೆ.
ಮಹಿಳಾ ಪ್ರವಾಸಿಗರಿಗೆ ಪ್ರೋತ್ಸಾಹ ನೀಡಲು ಮಾ.6ರಿಂದ 10 ರವರೆಗೆ ನಿಗಮದಿಂದ ನಿರ್ವಹಣೆ ಮಾಡುತ್ತಿರುವ ಮಯೂರ್ ಗ್ರೂಪ್ ಹೋಟೆಲ್‌ಗಳಲ್ಲಿ ಕೊಠಡಿ ಬುಕ್ಕಿಂಗ್‌ನಲ್ಲಿ ಶೇ.50 ಹಾಗೂ ಊಟೋಪಚಾರದ ಮೇಲೆ ಶೇ.20ರಷ್ಟು ರಿಯಾಯಿತಿಯ ಘೋಷಿಸಲಾಗಿದೆ. ನಿಗಮದ ಹೋಟೆಲ್‌ಗಳಲ್ಲಿ ಕೊಠಡಿಗಳನ್ನು ಕಾಯ್ದಿರಿಸುವ ಒಬ್ಬ ಮಹಿಳೆ/ಕುಟುಂಬ/ ಮಹಿಳಾ ಸಮೂಹಕ್ಕೆ ಶೇ.50ರಷ್ಟು ರಿಯಾಯಿತಿ ನೀಡಲಾಗುತ್ತದೆ.
International Women's Day: ಜಗತ್ತೇ ಗೌರವಿಸುವ ಭಾರತದ ಮಹಿಳಾ ಸಾಧಕಿಯರಿವರು
ಹೆಚ್ಚಿನ ಮಾಹಿತಿ ಮತ್ತು ಬುಕ್ಕಿಂಗ್‌ಗಾಗಿ ನಗರದ ಯಶವಂತಪುರ ಟಿಟಿಎಂಸಿ/ಬಿಎಂಟಿಸಿ ಬಸ್ ನಿಲ್ದಾಣ ಕಟ್ಟಡದಲ್ಲಿರುವ ನಿಗಮದ ಪ್ರಧಾನ ಬುಕ್ಕಿಂಗ್ ಕೇಂದ್ರ ಅಥವಾ ದೂ.ಸ. 080-43344334 ಹಾಗೂ ಮೊ.89706 50070 ಸಂಪರ್ಕಿಸಬಹುದು. ಈ ವಿಶೇಷ ರಿಯಾಯತಿ ಸೌಲಭ್ಯವನ್ನು ಮಹಿಳಾ ಪ್ರವಾಸಿಗರು ಸದುಪಯೋಗ ಪಡೆದುಕೊಳ್ಳಬಹುದು ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕ ಜಿ.ಜಗದೀಶ ಪ್ರಕಟಣೆಯಲ್ಲಿ ಕೋರಿದ್ದಾರೆ.
ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.