ಮಹಿಳಾ ಸಬಲೀಕರಣದ ಗುರಿ: ಸ್ವಸಹಾಯ ಸಂಘಗಳಿಗೆ 500 ಕೋಟಿ ರೂ. ಮೀಸಲು

Published : Nov 03, 2022, 08:55 PM ISTUpdated : Nov 03, 2022, 08:56 PM IST
ಮಹಿಳಾ ಸಬಲೀಕರಣದ ಗುರಿ: ಸ್ವಸಹಾಯ ಸಂಘಗಳಿಗೆ 500 ಕೋಟಿ ರೂ. ಮೀಸಲು

ಸಾರಾಂಶ

ರಾಜ್ಯ ಸರಕಾರವು ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರ ಸಬಲೀಕರಣ ಸಾಧಿಸುವ ಗುರಿ ಹೊಂದಿದ್ದು, ಇದಕ್ಕಾಗಿ ಈ ವರ್ಷ 500 ಕೋಟಿ ರೂಪಾಯಿ ಘೋಷಿಸಲಾಗಿದೆ ಎಂದು ಜೀವನೋಪಾಯ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಬೆಂಗಳೂರು (ನ.3): ರಾಜ್ಯ ಸರಕಾರವು ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರ ಸಬಲೀಕರಣ ಸಾಧಿಸುವ ಗುರಿ ಹೊಂದಿದ್ದು, ಇದಕ್ಕಾಗಿ ಈ ವರ್ಷ 500 ಕೋಟಿ ರೂಪಾಯಿ ಘೋಷಿಸಲಾಗಿದೆ ಎಂದು ಜೀವನೋಪಾಯ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಡಿಪ್ಲೊಮಾ ಪದವೀಧರರಿಗೆ ಪ್ರಥಮ ಬಾರಿಗೆ ಘಟಿಕೋತ್ಸವ; ಎಸ್‌ಜೆಪಿ ಕ್ಯಾಂಪಸ್‌ಗೆ ನಾಲ್ವಡಿ ಹೆಸರು: ಅಶ್ವತ್ಥನಾರಾಯಣ

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯು ಚಿತ್ರಕಲಾ ಪರಿಷತ್ತಿನಲ್ಲಿ ಏರ್ಪಡಿಸಿರುವ ಹತ್ತು ದಿನಗಳ 'ಅಸ್ಮಿತೆ' ವ್ಯಾಪಾರ ಮತ್ತು ಪ್ರದರ್ಶನ ಮೇಳವನ್ನು ಅವರು ಗುರುವಾರ ಉದ್ಘಾಟಿಸಿ ಮಾತನಾಡಿದರು.  ನ.10ರವರೆಗೆ ನಡೆಯಲಿರುವ ಈ ಮೇಳದಲ್ಲಿ ರಾಷ್ಟ್ರೀಯ ಗ್ರಾಮೀಣ ಮತ್ತು ನಗರ ಜೀವನೋಪಾಯ ಅಭಿಯಾನದ ಭಾಗವಾಗಿರುವ ಸ್ವಸಹಾಯ ಸಂಘಗಳ ಮಹಿಳೆಯರು ಮನೆಯಲ್ಲೇ ತಯಾರಿಸಿದ ಹಲವು ಉತ್ಪನ್ನಗಳ ಮಾರಾಟ ನಡೆಯಲಿದೆ.

ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಮಹಿಳೆಯರ ಸಬಲೀಕರಣ(Women's empowerment)ಕ್ಕೆ ಅಪಾರ ಮಹತ್ವ ನೀಡುತ್ತಿದ್ದಾರೆ. ಹೀಗಾಗಿ ಸ್ವಸಹಾಯ ಸಂಘಗಳಿಗೆ ಕೇಂದ್ರ ಸರ್ಕಾರವು ಶೇ.60ರಷ್ಟು ಹಣ ನೀಡುತ್ತಿದೆ. ಉಳಿದ ಶೇ.40ರಷ್ಟು ಹಣವನ್ನು ಮಾತ್ರ ರಾಜ್ಯ ಸರ್ಕಾರ ಕೊಡುತ್ತಿದೆ ಎಂದು ಅವರು ತಿಳಿಸಿದರು.

ಈ ಸ್ವಸಹಾಯ ಸಂಘಗಳಿಗೆ ಮಾರುಕಟ್ಟೆ ಸೌಲಭ್ಯ ಕಲ್ಪಿಸಲು ಅಮೆಜಾನ್(Amazon)  ಫ್ಲಿಪ್ಕಾರ್ಟ್(Flipkart) ತರಹದ ಕಂಪನಿಗಳ ಜತೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಈ ಪೈಕಿ ಅಮೆಜಾನ್ ಕಂಪನಿಯು 75 ಸಾವಿರ ಕೋಟಿ ರೂಪಾಯಿ ಮೌಲ್ಯದ ಮಾರುಕಟ್ಟೆ ಒದಗಿಸುವ ಭರವಸೆ ನೀಡಿದೆ ಎಂದು ಅವರು ನುಡಿದರು.

ಬಹು ದಿನದ ಕನಸಿನ ಯೋಜನೆ ಪೂರ್ಣ: ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ 'ನಮೋ' ಆಗಮನ

ಕಾರ್ಯಕ್ರಮದಲ್ಲಿ ಜೀವನೋಪಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್ ಸೆಲ್ವಕುಮಾರ್, ಅಭಿಯಾನದ ನಿರ್ದೇಶಕಿ ಆರ್.ರಾಗಪ್ರಿಯಾ ಉಪಸ್ಥಿತರಿದ್ದರು.

PREV

ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್‌, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ವೇದಿಕೆಯಲ್ಲಿ ವಧು ಸದ್ದಿಲ್ಲದೆ ಮಾಡಿದ ಅದೊಂದು ಕೆಲಸ ಇಂಟರ್‌ನೆಟ್‌ನಲ್ಲಿ ಫುಲ್ ವೈರಲ್ ಆಯ್ತು..
ಬಾಲಿವುಡ್‌ ಈ ಸ್ಟಾರ್ ನಟಿಯರು ರಿಜೆಕ್ಟ್ ಮಾಡಿದ್ರು ಆ ಸಿನಿಮಾ; ಆದ್ರೆ ಮುಂದೆ ಅವರೆಲ್ಲರ ಲೈಫ್‌ನಲ್ಲಿ ಏನಾಯ್ತು?