
ಬೆಂಗಳೂರು(ಮಾ.08): ಇಂದು(ಮಾರ್ಚ್ 8) ವಿಶ್ವ ಮಹಿಳಾ ದಿನಾಚರಣೆ. ಮಹಿಳಾ ದಿನಾಚರಣೆ ಹಿನ್ನಲೆಯಲ್ಲಿ ಮಹಿಳಾ ಸಾಧಕರನ್ನು ಗೌರವಿಸಲಾಯ್ತು. ಕರ್ನಾಟಕ ಮೀಡಿಯಾ ಜರ್ನಲಿಸ್ಟ್ ಯೂನಿಯನ್ ವತಿಯಿಂದ ಮಹಿಳಾ ಪತ್ರಕರ್ತರನ್ನು ಗುರುತಿಸಿ ಸನ್ಮಾನಿಸಲಾಯ್ತು.
ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿಗಾರರಾದ ಮಮತಾ ಹಾಗೂ ವಿದ್ಯಾ ಇವರಿಗೆ ಮಾಧ್ಯಮ ಸೇವಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯ್ತು. ಇದೇ ವೇಳೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸ್ತಿರುವ ಮಹಿಳಾ ಪತ್ರಕರ್ತರನ್ನು ನಗರದ ಪ್ರೆಸ್ ಕ್ಲಬ್‌ನಲ್ಲಿ ಸನ್ಮಾನಿಸಿ ಗೌರವಿಸಲಾಯ್ತು.
International Women's Day: ಕಾಂತಾರ ಖ್ಯಾತಿಯ ಮಾನಸಿ ಸುಧೀರ್ ಗೆ ಸನ್ಮಾನ
ಕಾರ್ಯಕ್ರಮದಲ್ಲಿ ಐಪಿಎಸ್ ಅಧಿಜಾರಿ ರೂಪಾ ಮೌದ್ಗಿಲ್, ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಸೇರಿದಂತೆ ಹಲವರು ಭಾಗಿಯಾಗಿದ್ರು. ಜೊತೆಗೆ ವಿವಿದ ಕ್ಷೇತ್ರದಲ್ಲಿ ಸಾಧನೆಗೈದ ಮಹಿಳಾ ಸಾಧಕರನ್ನು ಗೌರವಿಸಲಾಯ್ತು.
ಇದೇ ವೇಳೆ ಮಾತನಾಡಿದ ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿಗಾರ್ತಿ ವಿದ್ಯಾಶ್ರೀ ಬಿ.ಎನ್, ಕಳೆದ 7 ವರ್ಷಗಳಿಂದ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ವರದಿಗಾರ್ತಿಯಾಗಿ ಕೆಲಸ ಮಾಡುತ್ತಿದ್ದೇನೆ. ತಪ್ಪು ಮಾಡಿದಾಗ ತಿದ್ದಿ, ಒಳ್ಳೆ ಕೆಲಸ ಮಾಡಿದಾಗ ಬೆನ್ನು ತಟ್ಟಿ ಇಷ್ಟು ವರ್ಷ ಎಲ್ಲ ರೀತಿಯಲ್ಲೂ ಸಪೋರ್ಟ್ ಮಾಡುತ್ತಿರುವ ಸುವರ್ಣ ನ್ಯೂಸ್ ಸಂಸ್ಥೆಯ ನನ್ನ ಪ್ರೀತಿಯ ಎಲ್ಲಾ ಸಹೋದ್ಯೋಗಿಗಳಿಗೆ ತುಂಬು ಹೃದಯದ ಧನ್ಯವಾದಗಳು ಅಂತ ತಿಳಿಸಿದ್ದಾರೆ.
ಇನ್ನು ಮತ್ತೋರ್ವ ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿಗಾರ್ತಿ ಮಮತಾ ಟಿಎಸ್. ಮಾತನಾಡಿ, ಕಳೆದ ಒಂಭತ್ತು ವರ್ಷದಿಂದ ಸುವರ್ಣ ನ್ಯೂಸ್‌ನಲ್ಲಿ ವರದಿಗಾರ್ತಿಯಾಗಿ ಕೆಲಸ ಮಾಡ್ತಿದ್ದೇನೆ. ಎಲ್ಲಾ ರೀತಿಯಲ್ಲೂ ಸಪೋರ್ಟ್ ಮಾಡ್ತಿರುವ ಸುವರ್ಷ ನ್ಯೂಸ್ ಸಂಸ್ಥೆಗೆ ಹಾಗೂ ಎಲ್ಲಾ ಸಹೋದ್ಯೋಗಿಗಳಿಗೆ ತುಂಬಾ ಧನ್ಯವಾದ ತಿಳಿಸಿದ್ದಾರೆ.
ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.