ಹಿಜಾಬ್‌ ಧರಿಸದಿದ್ದರೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ..!

Published : Sep 22, 2023, 01:00 AM IST
ಹಿಜಾಬ್‌ ಧರಿಸದಿದ್ದರೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ..!

ಸಾರಾಂಶ

ಹಿಜಾಬ್‌ ಸರಿಯಾಗಿ ಧರಿಸಿಲ್ಲ ಎಂಬ ಕಾರಣಕ್ಕೆ ನೈತಿಕ ಪೊಲೀಸರಿಂದ ಹಲ್ಲೆಗೊಳಗಾಗಿ ಮೃತಪಟ್ಟಿದ್ದ ಮಹ್ಸಾ ಅಮಿನಿ ಸಾವನ್ನಪ್ಪಿ ಒಂದು ವರ್ಷ ಕಳೆದ ಬೆನ್ನಲ್ಲೇ ಸರ್ಕಾರವು ಈ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. 

ಇರಾನ್‌(ಸೆ.22): ಇಸ್ಲಾಮಿಕ್ ರಾಷ್ಟ್ರ ಇರಾನ್‌ನಲ್ಲಿ ಹಿಜಾಬ್‌ ವಿರುದ್ಧ ಮಹಿಳೆಯರ ತೀವ್ರ ಪ್ರತಿಭಟನೆ ಹೊರತಾಗಿಯೂ ತನ್ನ ನಿಲುವಿನಲ್ಲಿ ಬದಲಾವಣೆಗೆ ಒಪ್ಪದ ಸರ್ಕಾರ, ಇದೀಗ ಅಂಥ ನಿಯಮಗಳನ್ನು ಮತ್ತಷ್ಟು ಕಠಿಣಗೊಳಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಹಿಜಾಬ್‌ ಧರಿಸಲು ನಿರಾಕರಿಸುವ ಮುಸ್ಲಿಂ ಮಹಿಳೆಯರಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸುವ ಮಸೂದೆಯನ್ನು ಇರಾನ್‌ ಸಂಸತ್ತು ಅಂಗೀಕರಿಸಿದೆ.

ಇನ್ನು ಹಿಜಾಬ್‌ ಧರಿಸದ ಹಾಗೂ ಹಿಜಾಬ್‌ ಧರಿಸಬೇಡಿ ಎಂದು ಮಹಿಳೆಯರನ್ನು ಬೆಂಬಲಿಸುವವರಿಗೆ ಮಸೂದೆ ಪ್ರಕಾರ ಭಾರೀ ದಂಡ ವಿಧಿಸಲಾಗುತ್ತದೆ.

ತ್ರಿಪುರಾದಲ್ಲೂ ಹಿಜಾಬ್‌ ಗಲಾಟೆ, ಪ್ರಿನ್ಸಿಪಾಲ್‌ ನಿರ್ಬಂಧಿಸಿದ್ದನ್ನು ವಿರೋಧಿಸಿದ ವಿದ್ಯಾರ್ಥಿಗೆ ಥಳಿತ!

ಹಿಜಾಬ್‌ ಸರಿಯಾಗಿ ಧರಿಸಿಲ್ಲ ಎಂಬ ಕಾರಣಕ್ಕೆ ನೈತಿಕ ಪೊಲೀಸರಿಂದ ಹಲ್ಲೆಗೊಳಗಾಗಿ ಮೃತಪಟ್ಟಿದ್ದ ಮಹ್ಸಾ ಅಮಿನಿ (22) ಸಾವನ್ನಪ್ಪಿ ಒಂದು ವರ್ಷ ಕಳೆದ ಬೆನ್ನಲ್ಲೇ ಸರ್ಕಾರವು ಈ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಮಹ್ಸಾ ಪರವಾಗಿ ಹಾಗೂ ನಾವು ಹಿಜಾಬ್‌ ಧರಿಸಲ್ಲ ಎಂದು ಇರಾನ್‌ನಲ್ಲಿ ತೀವ್ರ ಪ್ರತಿಭಟನೆ ನಡೆಸಿದ್ದ ಮಹಿಳೆಯರ ಪೈಕಿ ಸುಮಾರು 500 ಜನರನ್ನು ಕೊಲ್ಲಲಾಗಿದ್ದು 22,000ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂಬ ಆರೋಪವಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಭಾರತೀಯರ ಎಚ್‌-1ಬಿ ವೀಸಾ ಸಂದರ್ಶನ ದಿಢೀರ್‌ ರದ್ದು : ಕಿಡಿ
ಯುನೆಸ್ಕೋ ಪರಂಪರೆ ಪಟ್ಟಿಗೆ ದೀಪಾವಳಿ ಸೇರ್ಪಡೆ!