
ಕಠ್ಮಂಡು: ನೇಪಾಳದಲ್ಲಿ 40 ಭಾರತೀಯ ಪ್ರಯಾಣಿಕರಿದ್ದ ಬಸ್ಸೊಂದು ನದಿಗೆ ಉರುಳಿದೆ. ತನಹಂ ಜಿಲ್ಲೆಯ ಮರ್ಸ್ಯಂಗ್ಡಿ ನದಿಗೆ ಬಸ್ ಬಿದ್ದ ಪರಿಣಾಮ ಕನಿಷ್ಠ 14 ಜನ ಸಾವನ್ನಪ್ಪಿದ್ದಾರೆ ಎಂದು ನೇಪಾಳಿ ಮಾಧ್ಯಮಗಳು ವರದಿ ಮಾಡಿವೆ. ಘಟನಾ ಸ್ಥಳಕ್ಕೆ ರಕ್ಷಣಾ ಸಿಬ್ಬಂದಿ ಧಾವಿಸಿದ್ದು, ಬಸ್‌ನಲ್ಲಿದ್ದವರ ರಕ್ಷಣೆಯಲ್ಲಿ ತೊಡಗಿದ್ದಾರೆ ಎಂದು ವರದಿಯಾಗಿದೆ.
ನೇಪಾಳ ವಿಪತ್ತು ನಿರ್ವಹಣಾ ತರಬೇತಿ ಶಾಲೆಯ ಹಿರಿಯ ಸೂಪರಿಟೆಂಡೆಂಟ್ ಆಫ್ ಪೊಲೀಸ್ ಮಾಧವ್ ಪೌದೆಲ್ ನೇತೃತ್ವದಲ್ಲಿ 45 ಜನರಿರುವ ಸಶಸ್ತ್ರ ಪೊಲೀಸ್ ಪಡೆಯ ತಂಡ ಘಟನಾ ಸ್ಥಳಕ್ಕೆ ತೆರಳಿದ್ದು ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ಈ ಬಸ್ ಉತ್ತರ ಪ್ರದೇಶ ಮೂಲದ್ದಾಗಿದ್ದು, ಪೊಖರದಿಂದ ಕಠ್ಮಂಡುವಿಗೆ ಹೋಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಯುಪಿ ಎಫ್‌ಟಿ 7623 ಸಂಖ್ಯೆಯನ್ನು ಹೊಂದಿದ್ದ ಬಸ್ ನದಿಗೆ ಬಿದ್ದಿದ್ದು, ಈಗ ನದಿ ತೀರದಲ್ಲಿದೆ ಎಂದು ತನಹಂ ಡಿಎಸ್‌ಪಿ ದೀಪ್ಕುಮಾರ್ ರಾಯ ಹೇಳಿದ್ದಾರೆ.
ಇತ್ತ ಉತ್ತರ ಪ್ರದೇಶ ಪರಿಹಾರ ಕಮೀಷನರ್ ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದು, ಬಸ್‌ನಲ್ಲಿ ರಾಜ್ಯದವರು ಯಾರಾದರು ಇದ್ದಾರೆಯೇ ಎಂಬುದನ್ನು ತಿಳಿಯುವುದಕ್ಕೆ ಅಲ್ಲಿನ ಆಡಳಿತವನ್ನು ಸಂಪರ್ಕಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ