
ಕಾಬೂಲ್(ಆ.19): ತಾಲಿಬಾನ್ ಉಗ್ರರ ಕೈಯ್ಯಲ್ಲಿ ಸಿಲುಕಿ ನರಳುತ್ತಿರುವ ಅಪ್ಘಾನಿಸ್ತಾನದಲ್ಲಿ ಭೂಕಂಪ ಸಂಭವಿಸಿದೆ. ಕಾಬೂಲ್‌ನ ಈಶಾನ್ಯ ಭಾಗದಿಂದ 122 ಕಿಮೀ ದೂರದಲ್ಲಿ ಬೆಳಗ್ಗೆ 11.22ರ ವೇಳೆಗೆ ಈ ಭೂಕಂಪ ಸಂಭವಿದೆ. ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆಯಲ್ಲಿ ಭೂಮಿ ಕಂಪಿಸಿದೆ ಎಂದು ಎನ್‌ಸಿಎಸ್ ತಿಳಿಸಿದೆ.
ರಾಷ್ಟ್ರೀಯ ಭೂಕಂಪ ಶಾಸ್ತ್ರ ಕೇಂದ್ರ ಈ ಬಗ್ಗೆ ಟ್ವೀಟ್ ಮಾಡಿದ್ದು, ಬೆಳಿಗ್ಗೆ 11.22ರ ವೇಳೆಗೆ ಭೂಮು ಕಂಪಿಸಿರುವ ಅನುಭವವಾಗಿದ್ದು, ಹಿಂದೂ ಕುಶ್ ಪ್ರದೇಶವು ಈ ಭೂಕಂಪನದ ಕೇಂದ್ರ ಬಿಂದುವಾಗಿದೆ. ಸುಮಾರು 92 ಕಿಮೀ ಆಳದಲ್ಲಿ ಭೂಕಂಪದ ಕೇಂದ್ರ ಬಿಂದು ದಾಖಲಾಗಿದೆ. ಬೆಜಾರಕ್, ಜಬಲ್ ಸರಜ್ ಮತ್ತು ಚರಿಕರ್ ಸೇರಿದಂತೆ ಹಲವು ನಗರಗಳಲ್ಲಿ ಭೂಮಿ ನಡುಗಿದ ಅನುಭವವಾಗಿದೆ. ಸಂಘರ್ಷ ಪೀಡಿತ ಅಫ್ಘಾನಿಸ್ತಾನದಲ್ಲಿ ಕಳೆದ ಎರಡು ದಿನಗಳ ಅಂತರದಲ್ಲಿ ಸಂಭವಿಸಿದ ಎರಡನೇ ಭೂಕಂಪ ಇದಾಗಿದೆ.
ಭೂಕಂಪದಿಂದ ಯಾವುದೇ ಸಾವು-ನೋವು, ಹಾನಿಯುಂಟಾಗಿರುವ ಬಗ್ಗೆ ವರದಿಯಾಗಿಲ್ಲ. ಭೂಕಂಪನದ ಅನುಭವದಿಂದ ಅಲ್ಲಿನ ಜನರು ಕೆಲಕಾಲ ಆತಂಕಕ್ಕೊಳಗಾಗಿದ್ದಾರೆ. ಅಫ್ಘಾನಿಸ್ತಾನದಲ್ಲಿ ಭೂಕಂಪದಂತಹ ನೈಸರ್ಗಿಕ ವಿಪತ್ತು ಸಾಮಾನ್ಯ. ಆದರೆ ಈಗಾಗಲೇ ತಾಲಿಬಾನಿಯರ ವಶದಲ್ಲಿ ನಲುಗುತ್ತಿರುವ ಇಲ್ಲಿನ ಜನತೆಗೆ ಇಂತಹ ಪ್ರಾಕೃತಿಕ ವಿಪತ್ತುಗಳು ಗಾಯದ ಮೇಲಿನ ಬರೆಯಂತಾಗಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ