
ಜೋಹಾನ್ಸ್‌ಬರ್ಗ್: ದಕ್ಷಿಣಾ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನಲ್ಲಿರುವ ಬಹುಮಹಡಿ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಘಟನೆಯಲ್ಲಿ ಮಕ್ಕಳೂ ಸೇರಿದಂತೆ 73 ಜನರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. 52 ಮಂದಿ ಗಾಯಗೊಂಡಿದ್ದಾರೆ.
ಹೆಚ್ಚಾಗಿ ವಲಸಿಗರು ವಾಸಿಸುತ್ತಿದ್ದ ನಗರದ ಆಲ್ಬಟ್ಸ್‌ರ್ ನಗರದಲ್ಲಿರುವ ಐದು ಅಂತಸ್ತಿನ ಕಟ್ಟಡದಲ್ಲಿ ಬುಧವಾರ ಮಧ್ಯರಾತ್ರಿ 1.30ರ ಸುಮಾರಿಗೆ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಅವಘಡ ಸಂಭವಿಸಿದ್ದು ಕಟ್ಟಡದ ಬಹುತೇಕ ಭಾಗ ಸುಟ್ಟು ಹೋಗಿದೆ.
ಬಿಬಿಎಂಪಿ ಬೆಂಕಿ ಅವಘಡ; ಗಾಯಾಳು ಶಿವಕುಮಾರ ಇಂದು ಕೊನೆಯುಸಿರು!
ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದು ಮೃತದೇಹಗಳನ್ನು ಹೊರತೆಗೆದು, ಕಟ್ಟಡದಲ್ಲಿ ಸಿಲುಕಿದ್ದವರನ್ನು ರಕ್ಷಣೆ ಮಾಡಿದ್ದಾರೆ. ಆದರೆ ಈವರೆಗೆ ಬೆಂಕಿಗೆ ಕಾರಣ ಏನೆಂಬುದು ತಿಳಿದು ಬಂದಿಲ್ಲ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದ್ದು ಇನ್ನೂ ಹೆಚ್ಚಿನ ಶವಗಳು ಪತ್ತೆಯಾಗುವ ಆತಂಕವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಾವೇರಿ ಪಟಾಕಿ ಗೋದಾಮಿಗೆ ಬೆಂಕಿ, 4 ಮಂದಿ ಸಜೀವದಹನ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ