
ಸ್ಟಾಕ್‌ಹೋಮ್(ಡಿ.11): 2019ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಗೆ ಭಾಜನರಾಗಿದ್ದ ಭಾರತೀಯ ಮೂಲದ ಅಮೆರಿಕನ್ ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗಿದೆ.
ಅಭಿಜಿತ್ ಬ್ಯಾನರ್ಜಿ ಮತ್ತು ಅವರ ಫ್ರೆಂಚ್-ಅಮೆರಿಕನ್ ಪತ್ನಿ ಎಸ್ತರ್ ಡುಫ್ಲೋ ಹಾಗೂ ಇನ್ನೋರ್ವ ಅರ್ಥಶಾಸ್ತ್ರಜ್ಞ ಮೈಕೆಲ್ ಕ್ರೆಮರ್ ಅವರಿಗೆ 2019 ರ ಆರ್ಥಿಕ ವಿಜ್ಞಾನದ ನೊಬೆಲ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ನಾನು ಮತ್ತು ನಿರ್ಮಲಾ ಸಹಪಾಠಿಗಳು: ಅಭಿಜಿತ್ ಬ್ಯಾನರ್ಜಿ!
ಜಾಗತಿಕ ಬಡತನವನ್ನು ಹೋಗಲಾಡಿಸುವ ಕಾರ್ಯಕ್ಕಾಗಿ ಲಕ್ಷಾಂತರ ಮಕ್ಕಳಿಗೆ ಪ್ರಾಯೋಗಿಕ ವಿಧಾನದಲ್ಲಿ ಸಹಾಯ ಮಾಡಿದ ಈ ತ್ರಿವಳಿ ಅರ್ಥಶಾಸ್ತ್ರಜ್ಞರ ಸಿದ್ದಾಂತಗಳನ್ನು ಮೆಚ್ಚಿ ನೊಬೆಲ್ ಪುರಸ್ಕಾರ ನೀಡಲಾಗಿದೆ.
ಪ್ರಶಸ್ತಿ ಪ್ರಧಾನ ವೇದಿಕೆಗೆ ಅಭಿಜಿತ್ ಬ್ಯಾನರ್ಜಿ ದಂಪತಿ ಧೋತಿ-ಕುರ್ತಾ, ಹಾಗೂ ಸೀರೆಯನ್ನುಟ್ಟು ಆಗಮಿಸಿದ್ದು ವಿಶೇಷ ಮೆಚ್ಚುಗೆಗೆ ಪಾತ್ರವಾಗಿದೆ.
ಬಡ ಎಕನಾಮಿಕ್ಸ್‌ಗೆ ಶ್ರೀಮಂತ ಪ್ರಶಸ್ತಿ; ಭಾರತೀಯ ಸಂಜಾತನಿಗೆ ನೊಬೆಲ್ ಗರಿ!
ಸ್ಟಾಕ್‌ಹೋಮ್ ಕನ್ಸರ್ಟ್ ಹಾಲ್‌ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭಕ್ಕಾಗಿ ದಂಪತಿಗಳು ಭಾರತೀಯ ಶೈಲಿಯ ಉಡುಪು ಧರಿಸಿ ಬಂದಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ