
ನವದೆಹಲಿ: ಸತತ 2 ವೈಫಲ್ಯಗಳ ಬಳಿಕ ಭಾರತೀಯ ಮೂಲದ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಮೂರನೇ ಬಾರಿಗೆ ಬುಧವಾರ ಬಾಹ್ಯಾಕಾಶ ಪ್ರಯಾಣಕ್ಕೆ ಕೈಗೊಂಡಿದ್ದಾರೆ. ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾದ ಬೋಯಿಂಗ್ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯಲ್ಲಿ ಬಾಹ್ಯಾಕಾಶಕ್ಕೆ ಯಶಸ್ವಿಯಾಗಿ ಪ್ರಯಾಣ ಬೆಳೆಸಿದ್ದಾರೆ.
ಕಳೆದ ತಿಂಗಳ 6ರಂದೇ ಸುನೀತಾ ಅಂತರಿಕ ಪ್ರಯಾಣ ಕೈಗೊಳ್ಳಬೇಕಿತ್ತು. ಆದರೆ ರಾಕೆಟ್‌ನಲ್ಲಿ ಲೀಕ್ ಸಮಸ್ಯೆ ಹಾಗೂ ಕೆಲ ತಾಂತ್ರಿಕ ಕಾರಣದಿಂದ ಪ್ರಯಾಣವನ್ನು ಮುಂದೂಡಲಾಗಿತ್ತು. ಮತ್ತೊಂದು ಪ್ರಯತ್ನದಲ್ಲಿ ಕಳೆದ ಶನಿವಾರ ಪ್ರಯಾಣ ಆಗಬೇಕಿತ್ತು. ಆದರೆ ಕಂಪ್ಯೂಟರ್ ಸಮಸ್ಯೆಯಿಂದಾಗಿ ಕೊನೆ ಕ್ಷಣದಲ್ಲಿ ಪ್ರಯಾಣ ರದ್ದಾಗಿತ್ತು. ಆದರೆ ಬುಧವಾರ ಯಶಸ್ವಿಯಾಗಿ ನಭಕ್ಕೆ ಜಿಗಿದಿದ್ದಾರೆ. ಸುನೀತಾ ವಿಲಿಯಮ್ ಹೊರತಾಗಿ ಬುಚ್ ವಿಲ್ಮೋರ್ ಕೂಡ ಅಂತರಿಕ್ಷಕ್ಕೆ ಪ್ರಯಾಣ ಕೈಗೊಂಡಿದ್ದಾರೆ. ಸುನೀತಾ ಮತ್ತು ಬುಚ್ ವಿಲ್ಮೋರ್ ಒಂದು ವಾರ ಬಾಹ್ಯಾಕಾಶದಲ್ಲಿಯೇ ಉಳಿಯಲಿದ್ದಾರೆ.
NASA News: ಮೂರನೇ ಬಾರಿ ಬಾಹ್ಯಾಕಾಶಕ್ಕೆ ಸುನಿತಾ ವಿಲಿಯಮ್ಸ್ ಪ್ರಯಾಣ
ಇದರಿಂದಾಗಿ ಅಮೆರಿಕಾದಲ್ಲಿ ಎಲಾನ್ ಮಸ್ಕರ ಸ್ಟಾರ್‌ಲಿಂಕ್ ನಂತರ ಬಾಹ್ಯಾ ಕಾಶಕ್ಕೆ ಹಾರಿದ 2ನೇ ಖಾಸಗಿ ಬೋಯಿಂಗ್ ಇದಾಗಿದೆ. ಇವರು ಮೊದಲ ಬಾರಿಗೆ 2006ರಲ್ಲಿ ಎಕ್ಸಪೆಡಿಷನ್ 14/15ನಲ್ಲಿ ಬಾಹ್ಯಾಕಾಶಕ್ಕೆ ತೆರಳಿದರು. ನಂತರ 2012ರಲ್ಲಿ ಎಕ್ಸ್ ಪೆಡಿಷನ್ 32/33 ಕಾರ್ಯಕ್ರಮದಲ್ಲಿ ಮತ್ತೆ ನಭಕ್ಕೆ ಹಾರಿದ್ದರು. ಅಲ್ಲದೇ ಬಾಹ್ಯಾಕಾಶದಲ್ಲಿ ಹೆಚ್ಚು ಹೆಜ್ಜೆ ಇಟ್ಟಿರುವ ಕೀರ್ತಿ ಸುನೀತಾ ಹೆಸರಿನಲ್ಲಿದೆ.
ಇಂದು ಮತ್ತೊಮ್ಮೆ ಸುನೀತಾ ವಿಲಿಯಮ್ಸ್ ಗಗನಯಾತ್ರೆ: ಜೊತೆಗಿರಲಿದೆ ಗಣೇಶನ ವಿಗ್ರಹ, ಭಗವದ್ಗೀತೆ !
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ