
ಕಝಾನ್(ರಷ್ಯಾ)(ಅ.23): ‘ರಷ್ಯಾ ಮತ್ತು ಉಕ್ರೇನ್ ನಡುವಿನ ವೈಷಮ್ಯವನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳಬೇಕು’ ಎಂಬ ತಮ್ಮ ನಿಲುವನ್ನು ಮತ್ತೊಮ್ಮೆ ಪುನರುಚ್ಚಾರ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ‘ಉಕ್ರೇನ್ ಬಿಕ್ಕಟ್ಟು ಇತ್ಯರ್ಥಕ್ಕೆ ಸಾಧ್ಯವಿರುವ ಎಲ್ಲಾ ನೆರವು ನೀಡಲು ಭಾರತ ಸಿದ್ಧ’ ಎಂದು ಹೇಳಿದ್ದಾರೆ. ಈ ಮೂಲಕ ಮತ್ತೊಮ್ಮೆ ರಷ್ಯಾ ನೆಲದಲ್ಲೇ ಶಾಂತಿ ಮಂತ್ರ ಜಪಿಸಿದ್ದಾರೆ.
16ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಮಂಗಳವಾರ ರಷ್ಯಾದ ಕಝಾನ್‌ಗೆ ಆಗಮಿಸಿದ ಪ್ರಧಾನಿ ಮೋದಿ, ಈ ವೇಳೆ ರಷ್ಯಾ ಅಧ್ಯಕ್ಷ ಪುಟಿನ್ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ‘ರಷ್ಯಾ- ಉಕ್ರೇನ್ ಸಂಘರ್ಷವನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳಬೇಕು, ಈ ನಿಟ್ಟಿನಲ್ಲಿ ಎಲ್ಲಾ ರೀತಿಯ ನೆರವು ನೀಡಲು ಭಾರತ ಸಿದ್ಧ’ ಎಂದು ಭರವಸೆ ನೀಡಿದರು.
ಶೇಖ್ ಹಸೀನಾ ರಾಜೀನಾಮೆ ಪತ್ರ ನಮ್ಮ ಬಳಿ ಇಲ್ಲ, ಬಾಂಗ್ಲಾ ಅಧ್ಯಕ್ಷರ ಹೇಳಿಕೆ ಈಗ ವಿವಾದ
ಇದಕ್ಕೆ ಮುನ್ನ ಕೂಡಾ ಮಾತನಾಡಿದ ಮೋದಿ, ‘ಇಡೀ ವಲಯದಲ್ಲಿ ಆದಷ್ಟು ಶೀಘ್ರ ಶಾಂತಿ ಮರುಸ್ಥಾಪನೆಯನ್ನು ಭಾರತ ಸಂಪೂರ್ಣವಾಗಿ ಬೆಂಬಲಿಸುತ್ತದೆ. ರಷ್ಯಾ- ಉಕ್ರೇನ್ ನಡುವಿನ ಸಂಘರ್ಷ ಸಂಬಂಧ ನಾವು ನಿರಂತರ ಸಂಪರ್ಕದಲ್ಲಿದ್ದೇವೆ. ಈ ಮೊದಲೂ ಹೇಳಿದಂತೆ ಸಮಸ್ಯೆಗಳನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳಬೇಕು ಎಂಬುದು ನಮ್ಮ ನಂಬಿಕೆ. ನಮ್ಮೆಲ್ಲಾ ಪ್ರಯತ್ನಗಳೂ ಮಾನವೀಯತೆಗೆ ಆದ್ಯತೆ ನೀಡುತ್ತವೆ. ಈ ಸಂಬಂಧ ಮುಂಬರುವ ದಿನಗಳಲ್ಲಿ ಎಲ್ಲಾ ರೀತಿಯ ಸಹಕಾರಕ್ಕೂ ಭಾರತ ಸಿದ್ಧ. ಎಲ್ಲಾ ವಿಷಯಗಳನ್ನೂ ಚರ್ಚಿಸಲೂ ನಾವು ಅವಕಾಶ ಹೊಂದಿದ್ದೇವೆ’ ಎಂದು ಹೇಳಿದರು.
ಅತೀ ದೊಡ್ಡ ರಾಜತಾಂತ್ರಿಕ ಗೆಲುವು, ಚೀನಾ ಗಡಿಯಲ್ಲಿ ಗಸ್ತು ಪುನರ್ ಆರಂಭಿಸಿದ ಭಾರತ!
3 ತಿಂಗಳಲ್ಲಿ 2ನೇ ಭೇಟಿ:
ಇದೇ ವೇಳೆ ಕಳೆದ 3 ತಿಂಗಳಲ್ಲಿ ರಷ್ಯಾಕ್ಕೆ ಎರಡನೇ ಭೇಟಿ ನೀಡುತ್ತಿರುವುದು, ಎರಡೂ ದೇಶಗಳ ನಡುವೆ ಆಪ್ತ ಸಮನ್ವಯ ಮತ್ತು ಆಳವಾದ ನಂಬಿಕೆಗೆ’ ಸಾಕ್ಷಿ ಎಂದು ಪ್ರಧಾನಿ ಮೋದಿ ಹೇಳಿದರು
ಭಾಷಾಂತರಕಾರನ ಅಗತ್ಯವಿಲ್ಲ: ಪುಟಿನ್
ಕಝಾನ್: ‘ನನ್ನ ಹಾಗೂ ನರೇಂದ್ರ ಮೋದಿ ಸ್ನೇಹ ಸಂಬಂಧ ಎಷ್ಟು ಗಟ್ಟಿ ಆಗಿದೆ ಎಂದರೆ ನನ್ನ ಭಾಷೆಯನ್ನು ಅರ್ಥೈಸಿಕೊಳ್ಳಲು ಮೋದಿ ಅವರಿಗೆ ಭಾಷಾಂತರಕಾರರ ಅಗತ್ಯವೇ ಇಲ್ಲ’ ಎಂದು ಸಭೆಯಲ್ಲಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಚಟಾಕಿ ಹಾರಿಸಿರು. ಆಗ ಮೋದಿ ಅವರು ಸಂತಸಗೊಂಡು ನಕ್ಕರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ