
ಢಾಕಾ: ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ, ಇಸ್ಕಾನ್ ದೇಗುಲಗಳೊಂದಿಗೆ ಸಂಘರ್ಷ, ದೇಗುಲಕ್ಕೆ ಬೆಂಕಿ ಘಟನೆಗಳ ಬೆನ್ನಲ್ಲೇ ಅಚ್ಚರಿ ಬೆಳವಣಿಗಯೊಂದರಲ್ಲಿ ಶನಿವಾರ ನಡೆದ ಕೃಷ್ಣಜನ್ಮಾಷ್ಟಮಿ ಆಚರಣೆ ವೇಳೆ ಮೂರು ಸೇನಾ ಪಡೆಗಳ ಮುಖ್ಯಸ್ಥರು ಭಾಗಿಯಾಗಿದ್ದಾರೆ.
ಶನಿವಾರ ಇಲ್ಲಿನ ಪಲಾಶಿ ಛೇದಕದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೇನಾ ಮುಖ್ಯಸ್ಥ ಜನರಲ್ ವಾಕರ್ - ಉಜ್- ಜಮಾನ್, ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಎಂ. ನಜ್ಮುಲ್ ಹಸನ್ , ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಹಸನ್ ಮಹಮೂದ್ ಖಾನ್, ಸೇರಿದಂತೆ ಸೇನಾ ಪಡೆಯ ಪ್ರಮುಖರು ಭಾಗವಹಿಸಿದ್ದರು.
ಈ ವೇಳೆ ಮಾತನಾಡಿದ ಸೇನಾ ಮುಖ್ಯಸ್ಥ, ‘ಈ ದೇಶ ಎಲ್ಲರಿಗೂ ಸೇರಿದ್ದು. ಧರ್ಮ, ಜನಾಂಗ ಅಥವಾ ಸಮುದಾಯದ ಆಧಾರದ ಮೇಲೆ ಯಾವುದೇ ವಿಭಜನೆ ಇರುವುದಿಲ್ಲ. ನಾವು ನಿಮ್ಮ ಪರವಾಗಿ ನಿಲ್ಲುತ್ತೇವೆ. ನೀವು ನಿರ್ಭೀತಿಯಿಂದ ಬದುಕಬಹುದು’ ಎಂದು ಬಾಂಗ್ಲಾ ಹಿಂದೂಗಳಿಗೆ ಅಭಯ ನೀಡಿದರು. ಜೊತೆಗೆ ಕೃಷ್ಣನ ಚಿಂತನೆಗಳು ದೇಶದಲ್ಲಿ ಶಾಂತಿಗೆ ದಾರಿದೀಪವಾಗಲಿ ಎಂದು ಆಶಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ