ಪಾಕಿಸ್ತಾನದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಪ್ರಬಲ ಬಾಂಬ್ ಸ್ಫೋಟ

By Anusha KbFirst Published Jan 30, 2023, 2:42 PM IST
Highlights

ಪಾಕಿಸ್ತಾನದ ಪೇಶಾವರದಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ. ಮಸೀದಿಯೊಳಗೆ ಪ್ರಾರ್ಥನೆ ಮಾಡುತ್ತಿದ್ದ ಸಂದರ್ಭದಲ್ಲಿ ಸ್ಫೋಟ ಸಂಭವಿಸಿದ್ದು, 12ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. 

ಇಸ್ಲಾಮಾಬಾದ್‌: ಪಾಕಿಸ್ತಾನದ ಪೇಶಾವರದಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ. ಮಸೀದಿಯೊಳಗೆ ಪ್ರಾರ್ಥನೆ ಮಾಡುತ್ತಿದ್ದ ಸಂದರ್ಭದಲ್ಲಿ ಸ್ಫೋಟ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಮಸೀದಿಯ ಒಂದು ಭಾಗದ ಗೋಡೆ ಕುಸಿದೆ. ಮಧ್ಯಾಹ್ನ 12 30ಕ್ಕೆ ನಡೆಯುವ  ಪ್ರಾರ್ಥನೆ ವೇಳೆ ಈ ಅವಘಡ ಸಂಭವಿಸಿದೆ. ಈ ಅವಘಡದಲ್ಲಿ 12ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. 

ಪೇಶಾವರ ಪೊಲೀಸ್ ಲೇನ್‌ನಲ್ಲಿರುವ ಮಸೀದಿಯಲ್ಲಿ ಈ ಸ್ಫೋಟ ಸಂಭವಿಸಿದೆ.  ಈ ಬಗ್ಗೆ ಹೆಚ್ಚಿನ ಮಾಹಿತಿ ನೀರಿಕ್ಷಿಸಲಾಗುತ್ತಿದೆ. 

Blast in police lines mosque in , dozen of people injured. pic.twitter.com/TQ0gUcDIV6

— Khurram Iqbal (@khurram143)

 

 

click me!