
ಲುಬ್ಲಿಯಾನಾ: ಚೀನಾ ಯುದ್ಧಗಳಲ್ಲಿ ಭಾಗವಹಿಸುವುದಿಲ್ಲ ಮತ್ತು ಯುದ್ಧದ ಯೋಜನೆಯನ್ನೂ ಮಾಡುವುದಿಲ್ಲ. ಶಾಂತಿ ಮಾತುಕತೆಗಳನ್ನು ಪ್ರೋತ್ಸಾಹಿಸುವ ಮತ್ತು ಸಂವಾದದ ಮೂಲಕ ರಾಜಕೀಯ ಸಮಸ್ಯೆಗಳನ್ನು ಇತ್ಯರ್ಥಪಡಿಸುವ ಕೆಲಸ ಮಾಡುತ್ತದೆ ಎಂದು ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಹೇಳಿದ್ದಾರೆ. ಈ ಮೂಲಕ ಚೀನಾ ಮೇಲೆ ಶೇ.100ರಷ್ಟು ತೆರಿಗೆ ವಿಧಿಸುವಂತೆ ನ್ಯಾಟೋ ರಾಷ್ಟ್ರಗಳಿಗೆ ಕರೆ ನೀಡಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಟಾಂಗ್ ನೀಡಿದ್ದಾರೆ.
ರಷ್ಯಾದಿಂದ ತೈಲ ಖರೀದಿಸುತ್ತಿರುವ ಚೀನಾ ಮೇಲೆ ಶೇ.50-100ರಷ್ಟು ತೆರಿಗೆ ವಿಧಿಸುವಂತೆ ಮತ್ತು ರಷ್ಯಾ ತೈಲ ಖರೀದಿಯನ್ನು ಸಂಪೂರ್ಣವಾಗಿ ನಿಲ್ಲಿಸುವಂತೆ ಟ್ರಂಪ್ ನ್ಯಾಟೋ ರಾಷ್ಟ್ರಗಳಿಗೆ ಮನವಿ ಮಾಡಿದ್ದರು.
ಸ್ಲೊವೇನಿಯಾ ರಾಜಧಾನಿ ಲುಬ್ಲಿಯಾನಾ ಪ್ರವಾಸದಲ್ಲಿರುವ ವಾಂಗ್ ಯಿ ಪತ್ರಿಕಾಗೋಷ್ಠಿ ನಡೆಸಿ ಟ್ರಂಪ್‌ರ ಈ ಹೇಳಿಕೆಗೆ ಪ್ರತ್ಯುತ್ತರ ನೀಡಿದ್ದಾರೆ.
‘ಚೀನಾ ಯುದ್ಧಗಳಲ್ಲಿ ಭಾಗವಹಿಸುವುದಿಲ್ಲ ಮತ್ತು ಶಾಂತಿ ಮಾತುಕತೆ ಮೂಲಕ ತೀವ್ರ ರಾಜಕೀಯ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಪ್ರಯತ್ನಿಸುತ್ತದೆ. ಚೀನಾ ಮತ್ತು ಯುರೋಪ್ ಪ್ರತಿಸ್ಪರ್ಧಿಗಳಲ್ಲ, ಬದಲಾಗಿ ಸ್ನೇಹಿತರಾಗಿರಬೇಕು. ಒಬ್ಬರನ್ನೊಬ್ಬರು ಎದುರಿಸುವ ಬದಲು ಸಹಕರಿಸಬೇಕು’ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ