
ಬೀಜಿಂಗ್: ನವೀನ ತಂತ್ರಜ್ಞಾನಗಳಿಂದ ಜಗತ್ತನ್ನು ನಿಬ್ಬೆರಗುಗೊಳಿಸುವ ಚೀನಾ ಇದೀಗ ಮತ್ತೊಂದು ಇತಿಹಾಸ ನಿರ್ಮಿಸಿದೆ. ಗಂಟೆಗೆ 700 ಕಿ.ಮೀ ಸಂಚರಿಸುವ ಸೂಪರ್ ಕಂಡಕ್ಟಿವ್ ಮ್ಯಾಗ್ಲೆವ್ ರೈಲಿನ ಮಾದರಿಯ ಪ್ರಾಯೋಗಿಕ ಪರೀಕ್ಷೆಯನ್ನು ಚೀನಾ ಯಶಸ್ವಿಯಾಗಿ ನಡೆಸಿದೆ. ಈ ವೇಗ ನೂತನ ವಿಶ್ವದಾಖಲೆಯಾಗಿದೆ. ಒಂದು ವೇಳೆ ಈ ರೈಲು ನಿಜರೂಪ ಪಡೆದು ಹಳಿ ಮೇಲೆ ಓಡಿದರೆ ಅದು ವಿಶ್ವದ ಅತ್ಯಂತ ವೇಗದ ರೈಲು ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಹಾಲಿ ಚೀನಾದಲ್ಲಿ ಇರುವ ಶಾಂಘೈ ಮ್ಲಾಗ್ಲೇವ್ ಗಂಟೆಗೆ 460 ಕಿ.ಮೀ ವೇಗದಲ್ಲಿ ಚಲಿಸುತ್ತಿದ್ದ ವಿಶ್ವದ ಅತಿವೇಗದ ರೈಲು ಎಂಬ ಹಿರಿಮೆ ಹೊಂದಿದೆ.
ಚೀನಾದ ರಾಷ್ಟ್ರೀಯ ರಕ್ಷಣಾ ತಂತ್ರಜ್ಞಾನ ವಿಶ್ವವಿದ್ಯಾನಿಲಯವು 700 ಕಿ.ಮೀ/ ಗಂಟೆಗೆ ಸಂಚರಿಸುವ ರೈಲಿನ ಮಾದರಿಯನ್ನು ಪರೀಕ್ಷಿಸಿದೆ. 400 ಮೀ.ಉದ್ದ ಮ್ಯಾಗ್ಲೆವ್ ಹಳಿಯ ಮೇಲೆ 1000 ಕೆಜಿ ತೂಕದ ರೈಲಿನ ಮಾದರಿಯನ್ನು ಪರೀಕ್ಷಿಸಲಾಗಿದೆ. ಈ ಪರೀಕ್ಷೆ ವೇಳೆ ಗಂಟೆಗೆ 700 ಕಿ.ಮೀ ದೂರ ಸಂಚರಿಸಬೇಕಾದ ವೇಗವನ್ನು ರೈಲು ಕೇವಲ 2 ಸೆಕೆಂಡ್‌ಗಳಲ್ಲೇ ಸಾಧಿಸುವ ಮೂಲಕ, ಯೋಜನೆಯ ಕಾರ್ಯಸಾಧು ಬಗ್ಗೆ ಭಾರೀ ನಿರೀಕ್ಷೆ ಹುಟ್ಟುಹಾಕಿದೆ. ಇದು ಇದುವರೆಗೆ ಪರೀಕ್ಷಿಸಲ್ಪಟ್ಟ ಅತ್ಯಂತ ವೇಗದ ಸೂಪರ್ ಕಂಡಕ್ಟಿಂಗ್ ಮ್ಯಾಗ್ಲೆವ್ ರೈಲಾಗಿದೆ.
ಸಂಶೋಧನಾ ತಂಡವು ಒಂದು ದಶಕದಿಂದ ಈ ಯೋಜನೆಗಾಗಿ ಶ್ರಮಿಸುತ್ತಿತ್ತು, ಇದೇ ವರ್ಷದ ಜನವರಿಯಲ್ಲಿ ಇದೇ ಹಳಿ ಮೇಲೆ 648 ಕಿ.ಮೀ/ ಗಂಟೆ ಸಂಚಾರದ ಪರೀಕ್ಷೆ ನಡೆಸಿತ್ತು. ಇದೀಗ ಆ ವೇಗ 700 ಕಿ.ಮೀಗೆ ಹೆಚ್ಚಿದೆ. ಮ್ಯಾಗ್ಲೇವ್ ತಂತ್ರಜ್ಞಾನದ ರೈಲುಗಳಿಗೆ ಚಕ್ರ ಇರುವುದಿಲ್ಲ. ಬದಲಾಗಿ ಅವು ಹಳಿ ಮತ್ತು ರೈಲಿನ ನಡುವೆ ಉತ್ಪತ್ತಿಯಾಗುವ ಅಯಂಸ್ಕಾತೀಯ ವಲಯದಲ್ಲಿ ಗಾಳಿಯಲ್ಲೇ ತೇಲಿಕೊಂಡು ಮುಂದೆ ಸಾಗುತ್ತದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ