ಕೊರೋನಾ ರೋಗ ಮುಚ್ಟಿಟ್ಟರೆ ಮರಣದಂಡನೆ!

By Kannadaprabha News  |  First Published Feb 7, 2020, 10:00 AM IST

ಕೊರೋನಾ ವ್ಯಾಧಿ ಮುಚ್ಟಿಟ್ಟರೆ ಮರಣದಂಡನೆ!| ಮಹಾಮಾರಿ ನಿಯಂತ್ರಣಕ್ಕೆ ಚೀನಾ ಸರ್ಕಾರದಿಂದ ನಿರ್ಣಯ


ಬೀಜಿಂಗ್‌[ಫೆ.07]: ಕೊರೋನಾ ವೈರಸ್‌ ಸೋಂಕು ಭಾರೀ ಪ್ರಮಾಣದಲ್ಲಿ ಹಬ್ಬುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಚೀನಾ ಸರ್ಕಾರ, ಯಾವುದೇ ವ್ಯಕ್ತಿ ತನಗೆ ಸೋಂಕು ತಗುಲಿರುವ ಮಾಹಿತಿ ಮುಚ್ಚಿಟ್ಟರೆ ಅವರಿಗೆ ಮರಣದಂಡನೆ ಶಿಕ್ಷೆ ವಿಧಿಸುವುದಾಗಿ ಎಚ್ಚರಿಕೆ ನೀಡಿದೆ.

ಕೊರೋನಾಕ್ಕೆ ತುತ್ತಾದ ರೋಗಿಗಳು ಉದ್ದೇಶಪೂರ್ವಕವಾಗಿ ತಮ್ಮ ಕಾಯಿಲೆಯನ್ನು ಮುಚ್ಚಿಟ್ಟು ಸಾರ್ವಜನಿಕ ಸ್ಥಳಗಳಿಗೆ ಬಂದು, ಇತರರಿಗೆ ಹಬ್ಬಿಸಲು ಯತ್ನಿಸಿದರೆ ಅಂಥವರ ವಿರುದ್ಧ ಮರಣದಂಡನೆ ಸೇರಿದಂತೆ ಇನ್ನಿತರ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಸಿದ್ಧವಿದೆ ಎಂದು ಚೀನಾದ ಸರ್ಕಾರಿ ಮಾಧ್ಯಮ ವರದಿ ಮಾಡಿದೆ.

Tap to resize

Latest Videos

ಕೊರೋನಾದಿಂದ ಜಗತ್ತು ರಕ್ಷಿಸಲು ಚೀನಾದ ಒಂದು ಇಡೀ ಪ್ರಾಂತ್ಯವೇ ಬಲಿ!

ಸಮಾಜದ ಸ್ಥಿರತೆ ಕಾಪಾಡುವ ನಿಟ್ಟಿನಲ್ಲಿ ಕೊರೋನಾಕ್ಕೆ ಸಂಬಂಧಿಸಿದ ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚಿ. ಸರ್ಕಾರದ ನಿಯಮಗಳನ್ನು ಗಾಳಿಗೆ ತೂರುವವರನ್ನು ಗಲ್ಲು ಶಿಕ್ಷೆಗೆ ಗುರಿಪಡಿಸಬೇಕಾಗುತ್ತದೆ. ಅಲ್ಲದೆ, ಸುಳ್ಳುಗಳು ಹಾಗೂ ಗಾಳಿಸುದ್ದಿಗಳನ್ನು ಹಬ್ಬಿಸುವ ಮೂಲಕ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುವವರ ವಿರುದ್ಧ ತ್ವರಿತ ಮತ್ತು ಕಠಿಣ ಶಿಕ್ಷೆ ಎದುರಿಸಬೇಕಾಗುತ್ತದೆ ಎಂದು ಚೀನಾ ಸರ್ಕಾರ ಎಚ್ಚರಿಕೆ ನೀಡಿದೆ.

click me!