
ಬೀಜಿಂಗ್(ಡಿ.26): ಚೀನಾ ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ದೇಶ. ಆದರೆ ಸರ್ಕಾರದ ಕಠಿಣ ಕ್ರಮಗಳ ಕಾರಣ ದೇಶದಲಿ ಜನಸಂಖ್ಯೆಯ ಪ್ರಮಾಣ ಕುಸಿಯುತ್ತಿದೆ. ಹೀಗಾಗಿ ಜಿಲಿನ್ ಪ್ರಾಂತ್ಯ ಮಕ್ಕಳನ್ನು ಹೊಂದುವ ದಂಪತಿಗೆ ಸಾಲ ಸೌಲಭ್ಯ ನೀಡಲು ಸರ್ಕಾರ ಆಸಕ್ತಿ ತೋರಿದೆ.
ಜಿಲಿನ್ ಪ್ರಾಂತ್ಯದಲ್ಲಿ ಜನಸಂಖ್ಯೆ ಇತರ ಎಲ್ಲಾ ಪ್ರಾಂತ್ಯಗಳಿಗಿಂತ ವೇಗವಾಗಿ ಕುಸಿಯುತ್ತಿದೆ. ಹೀಗಾಗಿ ಇಲ್ಲಿ ಜನಸಂಖ್ಯೆಯನ್ನು ಹೆಚ್ಚಳ ಮಾಡಲು ದಂಪತಿಗೆ ಸುಮಾರು 23.5 ಲಕ್ಷ ರು. ಸಾಲ ಸೌಲಭ್ಯ ನೀಡಲು ಆಸಕ್ತಿ ತೋರಿದೆ.
ಸರ್ಕಾರ ಈ ಯೋಜನೆಯನ್ನು ಯಾವ ರೀತಿ ಜಾರಿಗೆ ತರುತ್ತದೆ ಎಂಬುದರ ಕುರಿತು ಸ್ಪಷ್ಟವಾದ ಮಾಹಿತಿಯನ್ನು ನೀಡಿಲ್ಲ. ಆದರೆ ದಂಪತಿ ಹೊಂದುವ ಮಕ್ಕಳ ಆಧಾರದ ಮೇಲೆ ವಿವಿಧ ಬಡ್ಡಿದರಗಳಲ್ಲಿ ಬ್ಯಾಂಕುಗಳಿಂದ ಸಾಲ ಒದಗಿಸಬಹುದು ಎಂದು ಹೇಳಲಾಗಿದೆ. ಜನಸಂಖ್ಯೆ ಹೆಚ್ಚಳವನ್ನು ಪ್ರೋತ್ಸಾಹಿಸಲು ಈಗಾಗಲೇ ಜನಸಂಖ್ಯೆಗೆ ಸಂಬಂಧಿಸಿದ ಎಲ್ಲಾ ನಿರ್ಬಂಧಗಳನ್ನು ತೆಗೆದು ಹಾಕಲಾಗಿದೆ. ತಾಯ್ತನದ ರಜೆಯ ಅವಧಿಯನ್ನು ಹೆಚ್ಚಳ ಮಾಡಲಾಗಿದೆ.
ಈ ಕೊಡುಗೆ ಕೇವಲ ಜಿಲಿನ್ ಪ್ರಾಂತ್ಯದವರಿಗೆ ಮಾತ್ರ ಅನ್ವಯವಾಗುವುದಿಲ್ಲ. ಹೊರಗಿನಿಂದ ಬಂದು ಜಿಲಿನ್‌ನಲ್ಲಿ ನೆಲೆಸಸುವ, ಜನಿಸುವ ಮಕ್ಕಳನ್ನು ಜಿಲಿನ್ ಪ್ರಾಂತ್ಯದಲ್ಲೇ ನೋಂದಣಿ ಮಾಡಿಸುವವರಿಗೂ ಈ ಸೌಲಭ್ಯ ಅನ್ವಯವಾಗುತ್ತದೆ. ಎರಡು ಅಥವಾ ಮೂರು ಮಕ್ಕಳನ್ನು ಹೊಂದುವ ದಂಪತಿ ವ್ಯಾಪಾರ ಆರಂಭಿಸುವುದಾದರೆ ಅವರಿಗೆ ರಿಯಾಯಿತಿ ನೀಡಲಾಗುತ್ತದೆ. ಜಿಲಿನ್‌ನಲ್ಲಿ ಅತಿ ಹೆಚ್ಚು ಕೈಗಾರಿಕೆಗಳು ಇದ್ದರೂ ಸಹ ಜನಸಂಖ್ಯೆ ಕೊರತೆಯಿಂದ ಆರ್ಥಿಖಕಾಭಿವೃದ್ದಿಯಲ್ಲಿ ಹಿಂದೆ ಬಿದ್ದಿದೆ. ದೇಶದ ಆರ್ಥಿಕತೆಗಿಂತ ಶೇ.9.8ರಷ್ಟುಹಿಂದುಳಿದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ