ಭಾರತೀಯ ಸೇನೆ ಬದಲು ಉಗ್ರರಿಗೆ ಕಾಂಗ್ರೆಸ್‌ ಗೌರವ : ಮೋದಿ ಟೀಕೆ

Kannadaprabha News   | Kannada Prabha
Published : Sep 15, 2025, 07:49 AM IST
PM Modi Assam Visit

ಸಾರಾಂಶ

 ಕಾಂಗ್ರೆಸ್‌ ಪಕ್ಷವು ದೇಶದ ಸೇನೆಯನ್ನು ಬೆಂಬಲಿಸುವ ಬದಲು ಪಾಕಿಸ್ತಾನ ಪ್ರೇರಿತ ಭಯೋತ್ಪಾದಕರಿಗೆ ಬೆಂಬಲ ನೀಡುತ್ತದೆ. ನುಸುಳುಕೋರರು ಮತ್ತು ದೇಶ ವಿರೋಧಿ ಶಕ್ತಿಗಳ ಬೆನ್ನಿಗೆ ಆ ಪಕ್ಷ ನಿಲ್ಲುತ್ತದೆ ಎಂದು ಪ್ರಧಾನಿ ಮೋದಿ ಗಂಭೀರ ಆರೋಪ ಮಾಡಿದ್ದಾರೆ.

 ಮಂಗಲ್ಡೋಯ್‌ (ಅಸ್ಸಾಂ): ಕಾಂಗ್ರೆಸ್‌ ಪಕ್ಷವು ದೇಶದ ಸೇನೆಯನ್ನು ಬೆಂಬಲಿಸುವ ಬದಲು ಪಾಕಿಸ್ತಾನ ಪ್ರೇರಿತ ಭಯೋತ್ಪಾದಕರಿಗೆ ಬೆಂಬಲ ನೀಡುತ್ತದೆ. ನುಸುಳುಕೋರರು ಮತ್ತು ದೇಶ ವಿರೋಧಿ ಶಕ್ತಿಗಳ ಬೆನ್ನಿಗೆ ಆ ಪಕ್ಷ ನಿಲ್ಲುತ್ತದೆ ಎಂದು ಪ್ರಧಾನಿ ಮೋದಿ ಗಂಭೀರ ಆರೋಪ ಮಾಡಿದ್ದಾರೆ.

ಅಸ್ಸಾಂನ ಮಂಗಲ್ಡೋಯ್‌ನಲ್ಲಿ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಬಿಜೆಪಿಯು ಯಾವುದೇ ಕಾರಣಕ್ಕೂ ನುಸುಳುಕೋರರು ದೇಶದ ಜಮೀನು ವಶಪಡಿಸಿಕೊಳ್ಳಲು ಮತ್ತು ಇಲ್ಲಿನ ಜನಸಂಖ್ಯಾ ರಚನೆಯನ್ನೇ ಬದಲಾಯಿಸಲು ಅವಕಾಶ ನೀಡುವುದಿಲ್ಲ ಎಂದು ಹೇಳಿದರು.ಆಪರೇಷನ್‌ ಸಿಂದೂರ ಕಾರ್ಯಾಚರಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವು ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ಮೂಲಸೌಲಭ್ಯವನ್ನು ನಾಶ ಮಾಡಿದ ನಮ್ಮ ಸೇನಾ ಪಡೆಗಳನ್ನು ಬೆಂಬಲಿಸಲಿಲ್ಲ. ಬದಲಾಗಿ ಒಳನುಸುಳುಕೋರರು ಮತ್ತು ದೇಶವಿರೋಧಿ ಶಕ್ತಿಗಳನ್ನು ಬೆಂಬಲಿಸುವ ಕೆಲಸ ಮಾಡಿತು. ಆದರೆ ಕಾಮಾಕ್ಯದೇವಿಯ ಆಶೀರ್ವಾದದಿಂದ ಆಪರೇಷನ್‌ ಸಿಂದೂರ ಕಾರ್ಯಾಚರಣೆ ಯಶಸ್ವಿಯಾಯಿತು. ಈ ಪವಿತ್ರ ಭೂಮಿಗೆ ಭೇಟಿ ನೀಡುವ ಅವಕಾಶ ಸಿಕ್ಕಿದ್ದು ನನ್ನ ಪುಣ್ಯ ಎಂದು ಇದೇ ವೇಳೆ ಅವರು ತಿಳಿಸಿದರು.

ಬಿಜೆಪಿಯು ಯಾವುದೇ ಕಾರಣಕ್ಕೂ ನಮ್ಮ ಭೂಮಿಯನ್ನು ಅತಿಕ್ರಮಿಸಿಕೊಳ್ಳಲು, ನಮ್ಮ ಮಹಿಳೆಯರು ಮತ್ತು ಮಕ್ಕಳಿಗೆ ಅವಮಾನ ಮಾಡಲು ಹಾಗೂ ಜನಸಂಖ್ಯಾರಚನೆಯನ್ನೇ ಬದಲಾಯಿಸಲು ಅವಕಾಶ ಮಾಡಿಕೊಡುವುದಿಲ್ಲ. ಯಾಕೆಂದರೆ ಇದು ರಾಷ್ಟ್ರೀಯ ಭದ್ರತೆಯ ಪಾಲಿಗೆ ಅಪಾಯಕಾರಿ ಎಂದರು.ಒಳನುಸುಳುಕೋರರು ಆಕ್ರಮಿಸಿಕೊಂಡಿರುವ ಭೂಮಿಯನ್ನು ವಾಪಸ್‌ ಪಡೆದು ಅಸ್ಸಾಂನ ರೈತರು ತಮ್ಮ ಜಮೀನಿನಲ್ಲಿ ಕೃಷಿ ಮಾಡಲು ಅ‍ವಕಾಶ ಮಾಡಿಕೊಟ್ಟ ಮುಖ್ಯಮಂತ್ರಿ ಹಿಮಂತ್‌ ಶರ್ಮಾ ಅವರ ನಡೆಯನ್ನು ಇದೇ ವೇಳೆ ಪ್ರಧಾನಿ ಶ್ಲಾಘಿಸಿದರು.

ಹಝಾರಿಕಾಗೆ ಅವಮಾನ ಸಹಿಸಲ್ಲ :1962ರ ಚೀನಾ ಆಕ್ರಮಶೀಲತೆ ವೇಳೆ ಜವಾಹರ ಲಾಲ್‌ ನೆಹರೂ ಅವರು ಮಾಡಿದ ಗಾಯ ಇನ್ನೂ ವಾಸಿಯಾಗಿಲ್ಲ. ಇದೀಗ ಕಾಂಗ್ರೆಸ್‌ ಪಕ್ಷವು ಭೂಪೇನ್‌ ಹಝಾರಿಕಾ ಅವರಿಗೆ ಹೇಳಿಕೆಗಳ ಮೂಲಕ ಮಾಡಿದ ಅವಮಾನವು ಆ ಗಾಯಕ್ಕೆ ಉಪ್ಪು ಸವರಿದಂತಿದೆ ಎಂದು ಆರೋಪಿಸಿದರು. ಭೂಪೇನ್ ಅವರಿಗೆ ಮಾಡಿದ ಅವಮಾನದಿಂದ ನನಗೆ ನೋವಾಗಿದೆ. ಹಝಾರಿಕಾರಂಥ ತಮ್ಮ ದಂತಕತೆಗಳಿಗೆ ಯಾಕೆ ಅವಮಾನ ಮಾಡಿದರು ಎಂದು ಜನ ಪ್ರಶ್ನಿಸಬೇಕು ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಈ ಸರ್ಕಾರದಲ್ಲಿ 63% ಕಮಿಷನ್‌: ಅಶೋಕ್‌
ಸಾಮಾಜಿಕ ಜಾಲತಾಣ ಖಾತೆ ಪಬ್ಲಿಕ್‌ ಇದ್ರಷ್ಟೇ ವೀಸಾ : ಟ್ರಂಪ್‌