
ಲಂಡನ್ (ಏ.7): ಇಡೀ ವಿಶ್ವವನ್ನೇ ಕಂಗೆಡಿಸಿರುವ ಕೊರೋನಾ ವೈರಸ್ ಅಮೆರಿಕ, ಇಟಲಿಯಲ್ಲಿ ಮರಣ ಮೃದಂಗ ಬಾರಿಸುತ್ತಿದೆ. ಬಡವ, ಶ್ರೀಮಂತರೆನ್ನದೆ ಎಲ್ಲರನ್ನೂ ನಲುಗಿಸುತ್ತಿರುವ ಈ ಮಹಾಮಾರಿ ಗಣ್ಯವ್ಯಕ್ತಿಗಳನ್ನೂ ಇನ್ನಿಲ್ಲದಂತೆ ಕಾಡುತ್ತಿದೆ. ಸದ್ಯ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ಗೂ ಕೊರೋನಾ ಸೋಂಕು ತಗುಲಿದ್ದು, ಅವರ ಆರೋಗ್ಯ ತೀವ್ರ ಹದಗೆಟ್ಟಿದೆ.
ಹೌದು ಬ್ರಿಟನ್ ಪ್ರಧಾನಿ ಭಾನುವಾರ ಸಂಜೆ ಆಸ್ಪತ್ರೆಗೆ ದಾಖಲಾಗಿದ್ದರು ಪರೀಕ್ಷೆ ನಡೆಸಿದ ಬಳಿಕ ಅವರಲ್ಲಿ ಕೊರೋನಾ ವೈರಸ್ ಇರುವುದು ದೃಢಪಟ್ಟಿದೆ. ಇದಾದ ಕೇವಲ ಒಂದೇ ದಿನದಲ್ಲಿ ಅವರ ಆರೋಗ್ಯ ತೀವ್ರ ಹದಗೆಟ್ಟಿದ್ದು ಐಸಿಯುಗೆ ಶಿಫ್ಟ್ ಮಾಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
"
ಪ್ರಿನ್ಸ್ ಗುಣಮುಖರಾಗಿದ್ದು ಬೆಂಗಳೂರು ಚಿಕಿತ್ಸೆಯಿಂದಲ್ಲ!
ಇನ್ನು 'ಬೋರಿಸ್‌ರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸೋಮವಾರ ಮಧ್ಯಾಹ್ನ ಅವರ ಆರೋಗ್ಯ ತೀವ್ರ ಗಂಭೀರವಾಗಿತ್ತು. ಹೀಗಾಗಿ ಆಸ್ಪತ್ರೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ' ಎಂದು ಪಿಎಂ ಕಚೇರಿ ತಿಳಿಸಿದೆ.
ತೀವ್ರ ಅನಾರೋಗ್ಯದಿಂದ ಆಸ್ಪತ್ರೆ ಸೇರುತ್ತಿರುವ ಬ್ರಿಟನ್ನ ಮೂರನೇ ಪ್ರಧಾನಿ ಬೋರಿಸ್ ಜಾನ್ಸನ್ ಆಗಿದ್ದಾರೆ. ಎರಡನೇ ಮಹಾಯುದ್ಧದ ಸಂದರ್ಭದಲ್ಲಿ ಇಂಗ್ಲೆಂಡ್ ಪ್ರಧಾನಿ ವಿನ್ಸ್ಟನ್ ಚರ್ಚಿಲ್ಗೆ ತೀವ್ರ ಅನಾರೋಗ್ಯ ಕಾಡಿತ್ತು. ಆದರೆ ಅದನ್ನು ಗೌಪ್ಯವಾಗಿ ಇಡಲಾಗಿತ್ತು. ಆದರೆ, ಇದೇ ಮೊದಲ ಬಾರಿಗೆ ಬ್ರಿಟನ್ ಪ್ರಧಾನಿ ಆರೋಗ್ಯ ಗಂಭೀರವಾಗಿರುವ ವಿಚಾರವನ್ನು ಬಹಿರಂಗ ಮಾಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ